ರಾಜ್ಯದ 1.5 ಲಕ್ಷ ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಭಾಗ್ಯ
ಬೆಂಗಳೂರು, ಜುಲೈ 20 : ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಓದುತ್ತಿರುವ 1.5 ಲಕ್ಷ ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ. ಜಯಚಂದ್ರ, "ವಾರ್ಷಿಕ 2.5 ಲಕ್ಷ ರು. ಆದಾಯ ಮಿತಿಯಲ್ಲಿರುವ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ 300 ಕೋಟಿ ರು ವೆಚ್ಚ ತಗುಲಿದೆ ಎಂದರು".
ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿದ್ದರಾಮಯ್ಯ
ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ, ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಡಿಪ್ಲೊಮಾದಲ್ಲಿ ಮೊದಲ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಈ ಉಚಿತ ಲ್ಯಾಪ್ಟಾಪ್ ಭಾಗ್ಯ ಸಿಗಲಿದೆ.
ಸರ್ಕಾರಿ ಕೋಟಾದಡಿ ಖಾಸಗಿ ವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಸಿಗುವುದಿಲ್ಲ.