ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ರಾಜ್ಯಾದ್ಯಂತ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಭಾಗ್ಯ: ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ಕರ್ನಾಟಕ ಸರ್ಕಾರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ ಬಿ ಖಾತಾಗೆ ಎ ಖಾತಾ ಮಾನ್ಯತೆ ನೀಡಲು ಗುರುವಾರ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್ ಅವರು, ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ ವ್ಯಾಪ್ತಿಯ ಅಕ್ರಮ ಬಡಾವಣೆಗಳಲ್ಲಿರುವ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು. ಗ್ರೇಟರ್ ಬೆಂಗಳೂರು ಅಥಾರಿಟಿ ಮಾದರಿಯಲ್ಲೇ ನಿಯಮ ರೂಪಿಸಿ ರಾಜ್ಯದಾದ್ಯಂತ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ನೀಡಲಾಗುತ್ತೆ ಎಂದು ಹೇಳಿದ್ದಾರೆ.

karnataka cabinet approves a khata for b khata properties in illegal layouts

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ "ಬಿ-ಖಾತಾ" ನಿವೇಶನ/ಕಟ್ಟಡ/ ಅಪಾರ್ಟ್‌ಮೆಂಟ್/ ಫ್ಲಾಟ್‌ಗಳಿಗೆ "ಎ-ಖಾತಾ" ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಯಡಿ 10 ಲಕ್ಷ ಆಸ್ತಿಗಳು ಒಳಪಡಲಿವೆ ಎಂದು ಪ್ರವಾಸೋದ್ಯಮ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ. ಪಾಟೀಲ್ ತಿಳಿಸಿದರು.

"ಅಕ್ಕ ಪಡೆ" ಯೋಜನೆಯನ್ನು ಒಳಾಡಳಿತ ಇಲಾಖೆಯ ಸಹಯೋಗದೊಂದಿಗೆ ರಾಜ್ಯದ 31 ಜಿಲ್ಲೆ ಹಾಗೂ 05 ಪೊಲೀಸ್ ಆಯುಕ್ತಾಲಯಗಳಲ್ಲಿ ಅನುಷ್ಠಾನಗೊಳಿಸಲು ಸಚಿವ ಸಂಪುಟ ಸಭೆ ನಿರ್ಣಯಿಸಿದೆ. "ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತದ ಸ್ಥಾಪನೆ ಹಾಗೂ ಸಂಘದ ಉಪವಿಧಿಗಳಿಗೆ ಅನುಮೋದನೆ ನೀಡಲಾಗಿದೆ. "ಕರ್ನಾಟಕ ಗೃಹ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ವಿಧೇಯಕ, 2026"ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ದುಬ್ಬನಶಶಿಯ ಮತ್ತು ಗಂಗೆಕೊಳ್ಳದ ಕಡಲ ತೀರದಲ್ಲಿ ಸಮುದ್ರ ಕೊರೆತ ಪ್ರತಿಬಂಧಕ ಕಾಮಗಾರಿಯ ರೂ.11.03 ಕೋಟಿಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲ್ಲೂಕು, ಬಾಳೆಪುಣಿ ಗ್ರಾಮದ ಸ.ನಂ. 87/4ರಲ್ಲಿ 5-00 ಎಕರೆ ಜಮೀನನ್ನು ಎಲೆಕ್ಟ್ರಿಕ್ ಬಸ್‌ಗಳನ್ನು ಕಾರ್ಯಾಚರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗ ಇವರಿಗೆ ಮಂಜೂರು ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಉತ್ತರ ತಾಲ್ಲೂಕು, ದಾಸನಪುರ ಹೋಬಳಿ, ರಾವುತ್ತನಹಳ್ಳಿ ಗ್ರಾಮದ ಸ.ನಂ. 57 ಮತ್ತು 58ರಲ್ಲಿನ ಜಮೀನನ್ನು ದಲಿತ ಹಾಗೂ ಹಿಂದುಳಿದ ವರ್ಗಗಳ 22 ಮಠಗಳಿಗೆ ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು, ಸಂಪಾಜೆ ಹೋಬಳಿ, ಮದೆ ಗ್ರಾಮದ ಸ.ನಂ. 98/1 ರಲ್ಲಿನ 2.00 ಅಥವಾ 3.00 ಎಕರೆ ಜಮೀನನ್ನು ಅರೆಭಾಷಿಕ ಗೌಡ ಜನಾಂಗಕ್ಕೆ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಕ್ರೀಡಾ ಕೇಂದ್ರ ಸ್ಥಾಪನೆ ಉದ್ದೇಶಕ್ಕೆ "ಕೊಡಗು ಗೌಡ ಸಮಾಜ(ರಿ)" ಇವರಿಗೆ ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಮೈಸೂರು ಮತ್ತು ಸುತ್ತಮುತ್ತಲಿನ ಭಾಗದ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ನಬಾರ್ಡ್ ಸಹಯೋಗದಲ್ಲಿ ರೂ.20 ಕೋಟಿಗಳ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಚಿಕ್ಕಬಳ್ಳಾಪುರ ಇಲ್ಲಿನ ನೂತನ ಆಸ್ಪತ್ರೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ಯಂತ್ರೋಪಕರಣ ಮತ್ತು ಪೀಠೋಪಕರಣಗಳನ್ನು ರೂ. 40 ಕೋಟಿ ಅನುದಾನದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ .

ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಮಹಾತ್ಮಾ ಗಾಂಧಿ, ಶ್ರೀಮತಿ ಇಂದಿರಾ ಗಾಂಧಿ, ಶ್ರೀ ಜವಾಹರಲಾಲ್ ನೆಹರೂ ಮತ್ತು ಶ್ರೀ ರಾಜೀವ್ ಗಾಂಧಿ ಇವರ ಪುತ್ಥಳಿಗಳನ್ನು ಸ್ಥಾಪಿಸಲು ಸಚಿವ ಸಂಪುಟ ನಿರ್ಧರಿಸಿದೆ. ನಬಾರ್ಡ್ ಪ್ರಾಯೋಜಿತ ಆರ್.ಐ.ಡಿ.ಎಫ್ ಟ್ರಾಂಚ್ 31ರಡಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ಇಲ್ಲಿ ಆಡಳಿತ ಭವನ ನಿರ್ಮಾಣದ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯ ಮೂಲಕ ಅನುಷ್ಠಾನಗೊಳಿಸಲು ಅನುಮೋದನೆಯಾಗಿರುವ ರೂ.70.70 ಕೋಟಿ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+