ಲೋಕಾಯುಕ್ತದಿಂದ ಶಿಕ್ಷೆಗೊಳಗಾದ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ- ಕರ್ನಾಟಕ ಕ್ಯಾಬಿನೆಟ್ ಮಹತ್ವದ ನಿರ್ಧಾರ
ಬೆಂಗಳೂರು, ಆಗಸ್ಟ್ 10: ಕರ್ನಾಟಕದ ಸಚಿವ ಸಂಪುಟವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಲೋಕಾಯುಕ್ತದಿಂದ ಶಿಕ್ಷೆಗೆ ಶಿಕ್ಷೆಗೊಳಗಾದ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲು ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಭ್ರಷ್ಟಾಚಾರ ತಡೆಗೆ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಡಾ.ಎಂ.ಎಚ್.ನಾಗೇಶ್ ಐದು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ವಜಾಗೊಳಿಸಲು ಸರ್ಕಾರ ನಿರ್ಧರಿಸಿದೆ.
ರಾಮನಗರ ಜಿಲ್ಲಾ ಆಸ್ಪತ್ರೆಯ ಡಾ.ಉಷಾ ಕದರಮಂಡಲಗಿ ಮತ್ತು ಇಂದಿರಾನಗರ ಆಸ್ಪತ್ರೆಯ ಡಾ.ಎಸ್.ಟಿ.ನಾಗಮಣಿ ಅವರ ಕಡ್ಡಾಯ ನಿವೃತ್ತಿಗೆ ಸಂಪುಟ ಅನುಮೋದನೆ ನೀಡಿದೆ. ಇಬ್ಬರೂ ಭ್ರಷ್ಟಾಚಾರ ನಿಗ್ರಹ ದಳಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಭೆಯ ನಂತರ ಕಾನೂನು ಸಚಿವ ಎಚ್‌ಕೆ ಪಾಟೀಲ್ ಸಂಪುಟದ ನಿರ್ಧಾರಗಳನ್ನು ಪ್ರಕಟಿಸಿದರು.

ಮೇಕೆದಾಟು ಪಾದಯಾತ್ರೆ: ಪ್ರಕರಣ ಹಿಂಪಡೆದ ಸರ್ಕಾರ
ಮೇಕೆದಾಟು ಪಾದಯಾತ್ರೆ ವೇಳೆ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಂಬತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ.
ಈ ವಿಚಾರವಾಗಿ ಮಾತನಾಡಿದ ಎಚ್‌ಕೆ ಪಾಟೀಲ್, 'ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಂಬತ್ತು ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಇದು ಕೇವಲ ಮೇಕೆದಾಟು ಆಂದೋಲನ, ಕೋವಿಡ್ ನಿಯಮಗಳ ಉಲ್ಲಂಘಣೆಗೆ ಸಂಬಂಧಿಸಿದೆ' ಎಂದು ತಿಳಿಸಿದ್ದಾರೆ.
'ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ (ಅಂದಿನ ವಿರೋಧ ಪಕ್ಷದ ನಾಯಕ), ಡಿಕೆ ಸುರೇಶ್ (ಬೆಂಗಳೂರು ಗ್ರಾಮಾಂತರ ಸಂಸದ) ಅವರು ಪಕ್ಷದ ಸಮಾವೇಶವನ್ನು ಆಯೋಜಿಸುವ ಮೂಲಕ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದರೆಂದು ಪ್ರಕರಣಗಳು ದಾಖಲಾಗಿದ್ದವು' ಎಂದು ಅವರು ಹೇಳಿದ್ದಾರೆ.

ಮುಖ್ಯ ಸಚೇತಕ ಮತ್ತು ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್ ಅವರು ಸರ್ಕಾರಕ್ಕೆ ಬರೆದ ಪತ್ರವನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
2022 ರಲ್ಲಿ ಕೋವಿಡ್-19 ಪ್ರೋಟೋಕಾಲ್ ಉಲ್ಲಂಘನೆ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಕರ್ನಾಟಕ ಸೈಬರ್ ಭದ್ರತಾ ನೀತಿ
ಸೈಬರ್ ಕ್ರೈಮ್ ಪ್ರಕರಣಗಳ ಹೆಚ್ಚಳದಿಂದಾಗಿ ಕರ್ನಾಟಕ ಸೈಬರ್ ಭದ್ರತಾ ನೀತಿ 2023-24ಕ್ಕೆ ಕ್ಯಾಬಿನೆಟ್ ತನ್ನ ಒಪ್ಪಿಗೆ ನೀಡಿದೆ.












Click it and Unblock the Notifications