ಕರ್ನಾಟಕ ಗೃಹ ಕಾರ್ಮಿಕರ ವಿಧೇಯಕ 2026ಕ್ಕೆ ಸಚಿವ ಸಂಪುಟ ಅನುಮೋದನೆ
ಬೆಂಗಳೂರು, ಜನವರಿ 19: ಕರ್ನಾಟಕ ಗೃಹ ಕಾರ್ಮಿಕರ ವಿಧೇಯಕ, 2026ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಐತಿಹಾಸಿಕ ಋತುಚಕ್ರ ರಜೆಯನ್ನು ಜಾರಿ ಮಾಡಿದ ಬೆನ್ನಲ್ಲೆ ಮತ್ತೊಂದು ಮಹತ್ವದ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಗೃಹ ಕಾರ್ಮಿಕರು ಹೆಚ್ಚಿನವರು ಮಹಿಳೆಯರೇ ಆಗಿದ್ದು, ಅವರ ಕಲ್ಯಾಣ ಮತ್ತು ಭದ್ರತೆಯ ದೃಷ್ಟಿಯಿಂದ ಈ ವಿಧೇಯಕ ಮಹತ್ವದ ಪಾತ್ರ ವಹಿಸಲಿದೆ. ಋತುಚಕ್ರ ರಜೆಯನ್ನು ಜಾರಿ ಮಾಡಿದ್ದ ಸಚಿವ ಸಂತೋಷ್ ಲಾಡ್ ಅವರು, ಗೃಹ ಕಾರ್ಮಿಕರ ಕಲ್ಯಾಣ ವಿಧೇಯಕಕ್ಕೆ ಅನುಮೋದನೆ ದೊರಕಿಸಿಕೊಡುವಲ್ಲಿಯೂ ಮಹತ್ವದ ಪಾತ್ರ ವಹಿಸಿದ್ದಾರೆ.

ಉದ್ದೇಶಿತ ಮಸೂದೆಯು ರಾಜ್ಯದಲ್ಲಿ ಅಧಿಸೂಚಿತವಾಗಿರುವ ಎಲ್ಲಾ ನಗರ ಪಾಲಿಕೆಗಳಿಗೆ ಅನ್ವಯ ಆಗಲಿದೆ. ಮಸೂದೆಯ ಕರಡನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಮಸೂದೆಯ ಬಗ್ಗೆ ಮನೆಕೆಲಸದವರ ಸಂಘಟನೆಗಳ ಒಕ್ಕೂಟದೊಂದಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಈಗಾಗಲೇ ಚರ್ಚೆ ನಡೆಸಿದ್ದಾರೆ. ಮಸೂದೆಯನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದ್ದು, ಒಂದು ವೇಳೆ ಮಸೂದೆ ಜಾರಿಯಾದರೆ ಇಡೀ ದೇಶದಲ್ಲೇ ಕರ್ನಾಟಕ ಮಾದರಿ ಆಗಲಿದೆ.
ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಅಸಂಘಟಿತ ವರ್ಗದ ಕಾರ್ಮಿಕರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಈಗಾಗಲೇ ಹಲವಾರು ಸೌಲಭ್ಯಗಳನ್ನು ಜಾರಿ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಇದೀಗ ಮನೆಕೆಲಸದವರಿಗೂ ಸಾಮಾಜಿಕ ಭದ್ರತೆ ಒದಗಿಸುವಲ್ಲಿ ಈ ವಿಧೇಯಕ ಸಹಾಯ ಆದಂತಾಗಲಿದೆ.
ಮಹತ್ವಾ ಮಾಹಿತಿ ಇಲ್ಲಿದೆ: ಕರ್ನಾಟಕ ಗೃಹ ಕಾರ್ಮಿಕರ ವಿಧೇಯಕ, 2026ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮಸೂದೆಯು, ರಾಜ್ಯದ ಗೃಹ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು, ಸಾಮಾಜಿಕ ಭದ್ರತೆ ವಿಸ್ತರಿಸಲು ಉದ್ದೇಶಿಸಿದೆ. ಕಾರ್ಮಿಕರಿಗೆ ಕನಿಷ್ಠ ವೇತನ, ವಾರಕ್ಕೆ 48 ಗಂಟೆಗಳ ಕೆಲಸ ಮಿತಿ, ಓವರ್‌ಟೈಮ್ ವೇತನ, ಸಾಪ್ತಾಹಿಕ ರಜೆ ಮತ್ತು ಹೆರಿಗೆ, ಪಿತೃತ್ವ ರಜೆ, ಕಾರ್ಮಿಕರಿಗೆ ಅಪಘಾತ ಪರಿಹಾರ, ವೈದ್ಯಕೀಯ ವೆಚ್ಚಗಳು, ಮಕ್ಕಳ ಶಿಕ್ಷಣ ನೆರವು, ಪಿಂಚಣಿ ಸೇರಿದಂತೆ ಹಲವು ಸಾಮಾಜಿಕ ಭದ್ರತೆ ಒದಗಿಸಲು ಈ ಮಸೂದೆಯನ್ನು ಮಂಡಿಸಲು ಸರ್ಕಾರ ಮುಂದಾಗಿದೆ.
ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ 33 ಜೀವಾವಧಿ ಶಿಕ್ಷಾ ಬಂಧಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಪೈಕಿ ಇಬ್ಬರು ಶಿಕ್ಷಾ ಬಂಧಿಗಳನ್ನು ಕೇಂದ್ರ ಗೃಹ ಮಂತ್ರಾಲಯದ ಸಹಮತಿ ದೊರಕಿದ ನಂತರ ಬಿಡುಗಡೆ ಮಾಡಲು ನಿರ್ಣಯ ಮಾಡಿದೆ.
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಲ್ಲುಕೋಟೆ ಗ್ರಾಮದ ಸ.ನಂ.49ರಲ್ಲಿ 7/2 ಗುಂಟೆ ಜಮೀನನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ʼಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರುʼ ಇವರಿಗೆ ಮಂಜೂರು ಮಾಡಲು ನಿರ್ಣಯಿಸಲಾಯಿತು. ಅದೇ ರೀತಿ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಸಿರವಾರ ಸೀಮಾದ 2.2.39// ರಲ್ಲಿ 10 ಗುಂಟೆ ಜಮೀನನ್ನು ಕಾಂಗ್ರೆಸ್ ಭವನ ನಿರ್ಮಾಣದ ಉದ್ದೇಶಕ್ಕಾಗಿ "ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು ಇವರಿಗೆ ಮಂಜೂರು ಮಾಡಲು ಸಚಿವ ಸಂಪುಟ ನಿರ್ಣಯ ಮಾಡಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications