ದ್ವೇಷ ಭಾಷಣ ಮಾಡಿದರೆ 7 ವರ್ಷ ಜೈಲು, 1 ಲಕ್ಷ ದಂಡ: ಸಚಿವ ಸಂಪುಟ ಸಭೆಯಲ್ಲಿ ಮಹತ್ವ ತಿರ್ಮಾನ
ಬೆಂಗಳೂರು, ಡಿಸೆಂಬರ್ 05: ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷ ಭಾಷಣಕ್ಕೆ ಮೂಗುದಾರ ಹಾಕುಲು ರಾಜ್ಯ ಸರ್ಕಾರ ಸಜ್ಜಾಗಿದೆ. ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು, ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ- 2025 ಅನುಮೋದನೆ ಸಿಕ್ಕಿದೆ.
ಕರಾವಳಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮತೀಯ ಕಲಹಗಳಿಗೆ ದ್ವೇಷ ಭಾಷಣ ಕಾರಣವಾಗಿದೆ. ಮತೀಯವಾದಿ ಸಂಘಟನೆಗಳ ಸಮಾವೇಶಗಳಲ್ಲಿ ದ್ವೇಷ ಭಾಷಣ ಮಾಡುವ ಮೂಲಕ ಜನರನ್ನು ಪ್ರಚೋದನೆ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ಇದಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದು, ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ವಿಧೇಯಕವನ್ನು ಮಂಡಿಸಲಿವೆ.

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ 2025, "ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ (ತಿದ್ದುಪಡಿ) ವಿಧೇಯಕ 2025", ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ (ತಿದ್ದುಪಡಿ) ವಿಧೇಯಕ 2025" ಕರಡು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯಿ ದತ್ತಿಗಳ (ತಿದ್ದುಪಡಿ) ವಿಧೇಯಕ 2025", "ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಇನ್ನಿತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ 2025" ಗಳನ್ನು ಅನುಮೋದಿಸಲು ಹಾಗೂ ಸದರಿ ವಿಧೇಯಕವನ್ನು ವಿಧಾನಮಂಡಲದ ಮುಂದೆ ಮಂಡಿಸಲು ಸಚಿವ ಸಂಪುಟ ನಿರ್ಧರಿಸಿದೆ.
ದ್ವೇಷ ಭಾಷಣ, ಪ್ರಚೋದನಕಾರಿ ಮಾತುಗಳಿಂದ ಸಮಾಜದ ಸಾಮರಸ್ಯಕ್ಕೆ ಧಕ್ಕೆ ತರುತ್ತಿರುವುದನ್ನು ಗಮನಿಸಿರುವ ಕರ್ನಾಟಕ ಸರ್ಕಾರ, ಇಂತಹ ಕೃತ್ಯ ಎಸಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಿದೆ. ದ್ವೇಷಾಪರಾಧ ಎಸಗಿದವರಿಗೆ ಒಂದು ವರ್ಷದಿಂದ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಲಾಗುತ್ತದೆ. ಈ ಉದ್ದೇಶಕ್ಕಾಗಿ ಸರ್ಕಾರ ರೂಪಿಸಿರುವ, 'ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ (ಪ್ರತಿಬಂಧಕ) ಮಸೂದೆ- 2025'ಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಈ ಮಸೂದೆಯೂ ಸೇರಿ ಒಟ್ಟು ಎಂಟು ಮಸೂದೆಗಳ ಕರಡುಗಳಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಎಲ್ಲ ಮಸೂದೆಗಳನ್ನು ಬೆಳಗಾವಿಯಲ್ಲಿ ಡಿ. 8ರಿಂದ ನಡೆಯಲಿರುವ ಅಧಿವೇಶನದಲ್ಲಿ ಮಂಡಿಸಲಾಗುವುದು' ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಸಚಿವ ಎಚ್.ಕೆ. ಪಾಟೀಲ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
PM-ABHIM ಯೋಜನೆಯಡಿ ರಾಜ್ಯದಾದ್ಯಂತ 334 ಆಯುಷ್ಮಾನ್ ಆರೋಗ್ಯ ಮಂದಿರಗಳನ್ನು ರೂ.217.10 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆಯನ್ನು ಸಚಿವ ಸಂಪುಟ ನೀಡಿದೆ.
22 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು (UHPC) ನಿರ್ಮಿಸುವ ಕಾಮಗಾರಿಗಳನ್ನು ರೂ.22.00 ಕೋಟಿಗಳ ಅಂದಾಜು ಮೊತ್ತದಲ್ಲಿ 15ನೇ ಹಣಕಾಸು ಆಯೋಗದಡಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ನಿರ್ಣಯಿಸಲಾಗಿದೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣವಾರ ಹಾಗೂ ಗಂಡಸಿ ಬ್ಲಾಕ್‌ನ 530 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಮುಂದಿನ 5 ವರ್ಷಗಳ ಕಾರ್ಯಾಚರಣೆ ಹಾಗೂ ನಿರ್ವಹಣೆ (O&Mಯನ್ನು ರೂ.73.22 ಕೋಟಿಗಳಲ್ಲಿ ನಿರ್ವಹಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಭಕ್ತರಹಳ್ಳಿ ಮತ್ತು ಕುಣಿಗಲ್ ತಾಲ್ಲೂಕಿನ ಇತರ 21 ಟ್ಯಾಂಕ್‌ಗಳನ್ನು ತುಂಬಲು ಕೊತ್ತಗೆರೆ ಗ್ರಾಮದ ಸಮೀಪವಿರುವ ಕೊತ್ತಗೆರೆ ಟ್ಯಾಂಕ್ ನಿಂದ ನೀರು ಎತ್ತುವ ಯೋಜನೆಯನ್ನು ರೂ.34.00 ಕೋಟಿಗಳ ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಗೂಡೇಹೊಸಹಳ್ಳಿ ಬಳಿ ಹೇಮಾವತಿ ನದಿಯಿಂದ ನೀರನ್ನು ಎತ್ತಿ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಮತ್ತು ನಾಗಮಂಗಲ ತಾಲ್ಲೂಕು ಹಾಗೂ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕುಗಳ ಕೆರೆ ತುಂಬಿಸುವ (ಹಂತ-2) ರೂ.67.00 ಕೋಟಿಗಳ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚಡಚಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ 9.215 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಹಾಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ರೂಪಿಸಲಾದ ಚಡಚಣ ಏತ ನೀರಾವರಿ ಯೋಜನೆಯ ರೂ. 485.00 ಕೋಟಿ ಪರಿಷ್ಕೃತ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications