ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್‌ಸಿ ಎಸ್‌ಟಿ ಬಡ್ತಿ ಮೀಸಲಾತಿಗೆ ಅನುಮೋದನೆ ನೀಡಿದ ಸಚಿವ ಸಂಪುಟ

|
Google Oneindia Kannada News

ಬೆಂಗಳೂರು, ಫೆಬ್ರವರಿ 26: ಎಸ್‌ಸಿ ಎಸ್‌ಟಿ ವರ್ಗಗಳ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ಸರ್ಕಾರಿ ಉದ್ಯೋಗದಲ್ಲಿ ಬಡ್ತಿ ಮೀಸಲಾತಿಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅನುಮೋದನೆ ನೀಡಿದೆ.

ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಿಂಬಡ್ತಿಗೆ ಗುರಿಯಾಗಿದ್ದ ಎಸ್​​ಸಿ ಮತ್ತು ಎಸ್​​​ಟಿ ನೌಕರರಿಗೆ ಈ ಮೂಲಕ ಸಿಹಿಸುದ್ದಿ ನೀಡಿರುವ ಸಿಎಂ ಎಚ್​​​.ಡಿ ಕುಮಾರಸ್ವಾಮಿ ಶೀಘ್ರದಲ್ಲಿಯೇ ಬಿಡ್ತಿ ಮೀಸಲಾತಿ ಕಾಯ್ದೆ ಅನುಷ್ಠಾನಕ್ಕೆ ಮುಂದಾಗಿದ್ದಾರೆ.

ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ: ನಿಯಮ ತಿದ್ದುಪಡಿಗೆ ಚಿಂತನೆ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ: ನಿಯಮ ತಿದ್ದುಪಡಿಗೆ ಚಿಂತನೆ

ಈ ಹಿಂದೆಯೇ ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರ ಬಡ್ತಿ ಮೀಸಲಾತಿ ಕಾಯ್ದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದಿದ್ದ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕ ಜಾರಿಗೆ ಒಪ್ಪಿಗೆ ಸೂಚಿಸಲಾಗಿತ್ತು. ಸುಪ್ರೀಂಕೋರ್ಟ್​ನಲ್ಲಿ ಇನ್ನೂ ವಿಚಾರಣೆ ಬಾಕಿ ಇದ್ದರೂ ವಿಧೇಯಕ ಜಾರಿಗೆ ತರಲು ನಿರ್ಧರಿಸಲಾಗಿತ್ತು.

Karnataka cabinet approves implementation scst reservations

ಇನ್ನು ಡಿಸಿಎಂ ಡಾ.ಜಿ.ಪರಮೇಶ್ವರ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ತೀವ್ರ ಒತ್ತಡ ಬಂದಿತ್ತು. ಅಲ್ಲದೇ ಸಮನ್ವಯ ಸಮಿತಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರಸ್ತಾಪಿಸಿದ್ದರು. ಈ ಹಿನ್ನೆಲೆಯಲ್ಲಿ ಒತ್ತಡಕ್ಕೆ ಮಣಿದು ಕಾಯ್ದೆ ಜಾರಿಗೆ ತೀರ್ಮಾನಿಸಲಾಗಿತ್ತು. ಇದರ ಮಧ್ಯೆ ರಾಜ್ಯ ಸರ್ಕಾರ ಮೀಸಲಾತಿ ವಿಧೇಯಕಕ್ಕೆ ಸಮ್ಮತಿ ಸೂಚಿಸಿದ ಬೆನ್ನಲ್ಲೇ ವಿಧಾನಸೌಧದಲ್ಲಿ ಎಸ್ಸಿ, ಎಸ್ಟಿ ನೌಕರರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹಿಳೆರಿಗೆ ಶೇ 25ರಷ್ಟು ಮೀಸಲಾತಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹಿಳೆರಿಗೆ ಶೇ 25ರಷ್ಟು ಮೀಸಲಾತಿ

ಲೋಕಸಭೆ ಚುನಾವಣೆ ಹೊತ್ತಲ್ಲಿಯೇ ಬಡ್ತಿ ಮೀಸಲಾತಿ ವಿಚಾರ ಮೈತ್ರಿ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿತ್ತು. ನಾವು ಕಾಯ್ದೆ ಅನುಷ್ಠಾನಗೊಳಿಸದೇ ವಿಳಂಬ ಮಾಡಿದರೇ ಮುಂದಿನ ಚುನಾವಣೆಯಲ್ಲಿ ಭಾರೀ ಕೆಟ್ಟ ಪರಿಣಾಮ ಬೀರಲಿದೆ.

ಎಸ್‌ಸಿ/ಎಸ್‌ಟಿ ಮುಂಬಡ್ತಿ ಮೀಸಲಾತಿ ವಿಧೇಯಕಕ್ಕೆ ಒಪ್ಪಿಗೆ ಎಸ್‌ಸಿ/ಎಸ್‌ಟಿ ಮುಂಬಡ್ತಿ ಮೀಸಲಾತಿ ವಿಧೇಯಕಕ್ಕೆ ಒಪ್ಪಿಗೆ

ಹೀಗಾಗಿ ನೀವು ಕೂಡಲೇ ಈ ಬಗ್ಗೆ ಒಪ್ಪಿಗೆ ನೀಡಬೇಕೆಂದು ಡಿಸಿಎಂ ಡಾ.ಜಿ ಪರಮೇಶ್ವರ್​​​, ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಪಟ್ಟು ಹಿಡಿದಿದ್ದರು. ಇವರ ಒತ್ತಾಯಕ್ಕೆ ಮಣಿದ ಸಿಎಂ ಒಂದು ಸುತ್ತಿನ ಚರ್ಚೆ ನಂತರ ಒಪ್ಪಿಗೆ ನೀಡಿದ್ದಾರೆ.

English summary
Karnataka cabinet clears law to implement SC,ST reservation quota in Government job promotions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X