Anna Bhagya Scheme: ಇನ್ಮುಂದೆ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ: ಕಿಟ್​ನಲ್ಲಿ ಏನೇನಿರುತ್ತೆ ಗೊತ್ತಾ?

ಬೆಂಗಳೂರು, ಅಕ್ಟೋಬರ್‌ 10: ಕರ್ನಾಟಕದ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಒಂದು ಗುಡ್‌ನ್ಯೂಸ್‌ ಹಾಗೂ ಒಂದು ಶಾಕಿಂಗ್ ನ್ಯೂಸ್ ನೀಡಿದೆ. ಅಕ್ಕಿ ಬದಲಿಗೆ ಇನ್ಮುಂದೆ ಇಂದಿರಾ ಫುಡ್​ ಕಿಟ್ ನೀಡಲು ತೀರ್ಮಾನ ಮಾಡಿದೆ. ಅನ್ನಭಾಗ್ಯ ಯೋಜನೆಯಡಿ ರಾಜ್ಯ ಪಡಿತರ ಚೀಟಿ ಹೊಂದಿರುವವರಿಗೆ ಇನ್ಮುಂದೆ ಅಕ್ಕಿ ಬದಲಿಗೆ ಇಂದಿರಾ ಕಿಟ್​ ನೀಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು, ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟ, ಕಳ್ಳತನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿರಾ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್‌ ನೀಡಲು ನಿರ್ಧರಿಸಲಾಗಿದೆ. ಇನ್ನು ಮುಂದೆ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರದಿಂದ ಸಿಗುತ್ತಿದ್ದ ಹೆಚ್ಚುವರಿ 5 ಕೆ.ಜಿ ಅಕ್ಕಿ ಸಿಗಲ್ಲ, ಬದಲಿಗೆ ಈ ಇಂದಿರಾ ಕಿಟ್​ ಸಿಗಲಿದೆ ಎಂದು ಹೇಳಿದರು.

karnataka cabinet approves indira food kits to replace extra rice under anna bhagya

ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಒಟ್ಟು 10 ಕೆಜಿ ಅಕ್ಕಿ ನೀಡುತ್ತಿದ್ದು, ಇನ್ನುಮುಂದೆ ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆ.ಜಿ ಅಕ್ಕಿಯ ಬದಲಾಗಿ 61.19 ಕೋಟಿ ರೂ. ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ ಎಂದು ಹೆಚ್‌ ಕೆ ಪಾಟೀಲ್‌ ಹೇಳಿದರು.

ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ. ಅನುದಾನದಲ್ಲಿ 6119.52 ಕೋಟಿ ರೂ. ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ (ಪೌಷ್ಠಿಕ ಆಹಾರ ಕಿಟ್) ಒದಗಿಸಲು ಬಜೆಟ್ ಮರುಹಂಚಿಕೆ ಮಾಡಲು ಅನುಮೋದನೆ ನೀಡಲಾಗಿದೆ. ಇಂದಿರಾ ಕಿಟ್​​ನಲ್ಲಿ 1 ಕೆ.ಜಿ ತೊಗರಿ ಬೇಳೆ, 1 ಲೀಟರ್​ ಅಡುಗೆ ಎಣ್ಣೆ, 1 ಕೆ.ಜಿ ಸಕ್ಕರೆ ಹಾಗೂ 1 ಕೆ.ಜಿ ಉಪ್ಪು ಇರಲಿದೆ ಎಂದು ಕಾನೂನು ಸಚಿವ ಹೆಚ್ ಕೆ ಪಾಟೀಲ್‌ ಅವರು ತಿಳಿಸಿದರು.

ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಎಎವೈ ಮತ್ತು ಪಿಎಚ್ಎಚ್ ಪಡಿತರ ಫಲಾನುಭವಿಗಳಿಗೆ ಪರ್ಯಾಯವಾಗಿ ಇಂದಿರಾ ಆಹಾರ ಕಿಟ್ಗಳನ್ನು (ಪೌಷ್ಠಿಕ ಆಹಾರ ಕಿಟ್- ತೊಗರಿ ಬೆಳೆ 2ಕೆಜಿ, ಅಡುಗೆ ಎಣ್ಣೆ 1ಕೆಜಿ, ಸಕ್ಕರೆ 1ಕೆಜಿ, ಉಪ್ಪು 1ಕೆಜಿ.) ರೂ.61.19 ಕೋಟಿಗಳ ಮೊತ್ತದಲ್ಲಿ ವಿತರಿಸಲು ಸಚಿವ ಸಂಪುಟ ನಿರ್ಣಯಿಸಿದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+