Internal Reservation: ದಲಿತ ಸಮುದಾಯಕ್ಕೆ ಗುಡ್ ನ್ಯೂಸ್; ಒಳ ಮೀಸಲಾತಿ ಫೈನಲ್: ಮಹತ್ವದ ಮಾಹಿತಿ ಇಲ್ಲಿದೆ ನೋಡಿ
ಬೆಂಗಳೂರು, ಆಗಸ್ಟ್ 20: ಕರ್ನಾಟಕದಲ್ಲಿ ಒಳ ಮೀಸಲಾತಿ ಕುರಿತು ಕಳೆದ ಮೂರು ದಶಕಗಳ ನಿರಂತರ ಬೇಡಿಕೆ ಕೊನೆಗೂ ಈಡೇರಿದೆ. ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸಬೇಕು ಎಂಬ ಬಹುವರ್ಷಗಳ ಆಗ್ರಹಗಳಿಗೆ ಮನ್ನಣೆ ನೀಡಿರುವ ಕರ್ನಾಟಕ ಸರ್ಕಾರ, ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆಯೋಗ ಸಲ್ಲಿಸಿರುವ ವರದಿಯಲ್ಲಿರುವ ಜಾತಿವಾರು ವರ್ಗೀಕರಣವನ್ನು ತುಸು ಪರಿಷ್ಕರಿಸಿ ಜಾರಿ ಮಾಡುವ ಮಹತ್ವದ ತೀರ್ಮಾನ ಕೈಗೊಂಡಿದೆ.
ಒಳ ಮೀಸಲಾತಿ ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ಈಗಾಗಲೇ ತಾತ್ವಿಕವಾಗಿ ಒಪ್ಪಿಗೆ ನೀಡಲಾಗಿದ್ದು, ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಸಂಬಂಧ ಮಂಗಳವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಬಹುತೇಕ ಫೈನಲ್ ಆಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಕರ್ನಾಟಕದಲ್ಲಿ ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಬಹುತೇಕ ಫೈನಲ್ ಆಗಿದೆ.

ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಪರಿಶಿಷ್ಟ ಜಾತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸುವ ತೀರ್ಮಾನವಾಗಿದೆ. ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ 5 ವಿಂಗಡಣೆ ಮಾಡಲಾಗಿತ್ತು. ಆದರೆ, ರಾಜ್ಯ ಸರ್ಕಾರ, ಮೂರು ಗುಂಪುಗಳಾಗಿ ವರ್ಗೀಕರಣ ಮಾಡಿದೆ. 18 ಜಾತಿಗಳಿರುವ ಎಡಗೈ ಸಮುದಾಯಕ್ಕೆ 6% ಮೀಸಲಾತಿ ಹಾಗೂ 20 ಜಾತಿಗಳಿರುವ ಬಲಗೈ ಸಮುದಾಯಕ್ಕೆ 6% ಮೀಸಲಾತಿ. ಇನ್ನು 63 ಜಾತಿಗಳಿರುವ ಇತರ ಸಮುದಾಯಕ್ಕೆ 5% ಮೀಸಲಾತಿ ನೀಡುವ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಬಹುತೇಕ ಅಂತಿಮವಾಗಿದೆ.
ಒಳ ಮೀಸಲಾತಿ ಕುರಿತು ಇಂದು (ಆಗಸ್ಟ್ 20) ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಲಿದ್ದಾರೆ. ಇನ್ನು ಎರಡು ದಿನದಲ್ಲಿ ಒಳಮೀಸಲಾತಿ ಸಂಬಂಧ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಗಳಿವೆ. ಇದರೊಂದಿಗೆ ಒಳಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳು ಕಳೆದ ಮೂರು ದಶಕಗಳಿಂದ ಇಟ್ಟಿದ್ದ ಬೇಡಿಕೆಯನ್ನ ಕೊನೆಗೂ ರಾಜ್ಯ ಸರ್ಕಾರ ಈಡೇರಿದಂತಾಗಿದೆ. ಸಿದ್ದರಾಮಯ್ಯನವರ ನಿರ್ಧಾರವನ್ನುದಲಿತ ಬಲಗೈ ಹಾಗೂ ದಲಿತ ಎಡಗೈ ನಾಯಕರು ಒಪ್ಪಿಕೊಂಡಿದ್ದು, ಇತರೆ ಸಮುದಾಯ ಜೊತೆ ಸೇರಿಸಿ ನಮ್ಮನ್ನ ಬೀದಿಗೆ ತಂದಿದ್ದಾರೆ ಎಂದು ಅಲೆಮಾರಿ ಸಮುದಾಯ ಆಕ್ರೋಶಗೊಂಡಿದೆ.
ಇನ್ನೂ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ಮಾತನಾಡಿ, ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಸಂಬಂಧ ಕೈಗೊಂಡ ಇಂದಿನ ನಿರ್ಣಯವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲಿ ಹೇಳುತ್ತಾರೆ. ಎಲ್ಲರೂ ಸಂತೋಷ, ಸಮಾಧಾನದಿಂದ ಬಂದಿದ್ದೇವೆ. ಮುನಿಯಪ್ಪ, ಪರಮೇಶ್ವರ್, ತಂಗಡಗಿ ಸೇರಿದಂತೆ. ಸಂಪುಟ ಸಭೆಯಲ್ಲಿ ಎಲ್ಲರಿಗೂ ಸಮಾಧಾನವಾಗಿದೆ ಎಂದು ಹೇಳಿದರು.
ದಲಿತ ಎಡಗೈ ಜಾತಿಗಳಿಗೆ 6ರಷ್ಟು ಮೀಸಲಾತಿ
18 ಜಾತಿಗಳಿರುವ ಎಡಗೈ ಸಮುದಾಯಕ್ಕೆ 6% ಮೀಸಲಾತಿಯನ್ನ ನೀಡಲಾಗಿದೆ. ಭಾಂಬಿ, ಅಸದರು, ಅಸೋಡಿ, ಚಮಡಿಯಾ, ಚಮರ್, ಚಂಬರ, ಚಮಗಾರ, ಹರಳಯ್ಯ, ಹರಳಿ, ಖಾಲ್ಪ, ಮಚಿಗಾರ, ಮೋಚಿಗಾರ, ಮಾದರ, ಮಾದಿಗ, ಮೋಚಿ, ಮುಚ್ಚಿ, ತೆಲುಗು ಮೋಚಿ, ಕಾಮತಿ ಮೋಚಿ, ರಾಣಿಗಾರ್, ರೋಹಿದಾಸ್, ಧೋರ್ಕಾ ಹಲಸ್ವರ, ಹಸ್ಲ, ಕಡಯ್ಯನ್, ಕೆಪ್ಮರಿಸ್, ಕೊಲುಪುಲ್ವಂಡಿಯು, ಕುಟುಂಬನ್, ಮಾದಿಗ, ಮಾವಿಲನ್, ಮೊಗೇರ್, ಪಂಚಮ, ಪನ್ನಿಯಾಂಡಿ, ಪರಯ್ಯನ್, ಪರಯ, ಸಮಗಾರ, ಸಾಂಬನ್
ದಲಿತ ಬಲಗೈ ಜಾತಿಗಳಿಗೆ 6% ಮೀಸಲಾತಿ
20 ಜಾತಿಗಳಿರುವ ಬಲಗೈ ಸಮುದಾಯಕ್ಕೆ 6% ಮೀಸಲಾತಿಯನ್ನ ನೀಡಲಾಗಿದೆ. ಅಣಮುಕ್, ಅರೆ ಮಾಳ, ಅರವ ಮಾಳ, ಬಲಗೈ, ಛಲವಾದಿ, ಚಲವಾದಿ, ಚನ್ನಯ್ಯ, ಪಲ್ಲನ್, ಹೊಲಯ, ಹೊಲೆಯ, ಹೊಲೆಯ, ಮಹ್ಯವಂಶಿ, ಧೇಡ್, ವಂಕರ್, ಮಾರು ವಂಕರ್, ಮಾಳ, ಮಲ ಹಣ್ಣಾಯಿ, ಮಾಳ ಜಂಗಮ, ಮಾಳ ಮಾಸ್ತಿ, ಮಲ ಮಾರಾಟ, ನೆಟ್ಕಣಿ, ಮಹಾರ್, ತರಲ್, ಧೇಳು, ದೇಗುಲ ಮೇಗುಂದ,ಆದಿ ಆಂಧ್ರ, ಆದಿ ದ್ರಾವಿಡ, ಆದಿ ಕರ್ನಾಟಕ.












Click it and Unblock the Notifications