• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಗೋ ಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಅಸ್ತು!

|

ಬೆಂಗಳೂರು, ಡಿ. 28: ವಿರೋಧ ಪಕ್ಷಗಳು ಹಾಗೂ ಕೆಲವು ಸಂಘಟನೆಗಳ ತೀವ್ರ ವಿರೋಧದ ಮಧ್ಯೆ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ಕೊಟ್ಟಿದೆ. ಕಳೆದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಕ್ಕೆ ಅಂಗೀಕಾರ ದೊರಕಿತ್ತು.

ಆದರೆ ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ಪಕ್ಷ ಬೆಂಬಲ ಕೊಡದಿದ್ದರಿಂದ ವಿಧೇಯಕವನ್ನು ಸರ್ಕಾರ ಮಂಡಿಸಿರಲಿಲ್ಲ. ಅದಕ್ಕಾಗಿ ವಿಶೇಷ ಅಧಿವೇಶನವನ್ನೂ ಸರ್ಕಾರ ಕರೆದಿತ್ತಾದರೂ ಜೆಡಿಎಸ್ ಗೋ ಹತ್ಯೆ ನಿಷೇಧ ವಿಧೇಯಕಕ್ಕೆ ಬೆಂಬಲ ಕೊಟ್ಟಿರಲಿಲ್ಲ ಹೀಗಾಗಿ ಇದೀಗ ಇಂದು ಡಿಸೆಂಬರ್ 28ರಂದು ನಡೆದ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಗೆ ಮೂಲಕ ಕಾನೂನು ಜಾರಿ ಮಾಡಲು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲು ತೀರ್ಮಾನ ಮಾಡಲಾಗಿದೆ.

ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು, ಕಾಂಗ್ರೆಸ್ ಕುತಂತ್ರದಿಂದ ಕಳೆದ ಅಧಿವೇಶನದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಪರಿಷತ್ತಿನಲ್ಲಿ ಅಂಗೀಕಾರವಾಗಲಿಲ್ಲ ಆದರೇ ಗೋವುಗಳ ಸಂರಕ್ಷಣೆಗೆ ಬಿಜೆಪಿ ಬದ್ಧವಾಗಿದೆ ಸುಗ್ರಿವಾಜ್ಞೆ ತರುವ ಮೂಲಕ ಮಸೂದೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಂಪುಟ ಸಭೆಯಲ್ಲಿ ನಿರ್ಧಾರ

ಸಂಪುಟ ಸಭೆಯಲ್ಲಿ ನಿರ್ಧಾರ

ಇಂದು ನಡೆದ ಸಚಿವ ಸಂಪುಟದಲ್ಲಿ ಗೋಹತ್ಯೆ ನಿಷೇಧ ಮಸೂದೆಗೆ ಒಪ್ಪಿಗೆ ಸಿಕ್ಕಿದೆ. ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ಬಂದಿದ್ದು, ಗೋಹತ್ಯೆ ನಿಷೇಧ ಕರ್ನಾಟಕದಲ್ಲೂ ಯಶಸ್ವಿ ಆಗಲಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿಕೆ ನೀಡಿದ್ದಾರೆ. ಗೋವು ನಮ್ಮ ಭಾರತೀಯ ಸಂಸ್ಕೃತಿಯ, ಶ್ರದ್ದೆಯ ಹಾಗೂ ರೈತರ ಜೀವನಾಧಾರದ ಮೂಲವಾಗಿದೆ. ವರ್ಷದಿಂದ ವರ್ಷಕ್ಕೆ ಗೋವುಗಳ ಸಂಖ್ಯೆ ಗಣನೀಯವಾಗಿ ಕಡಿಮೆ ಆಗುತ್ತಿರುವುದು ನೀಜಕ್ಕೂ ಕಳವಳಕಾರಿ ಸಂಗತಿ.

ಗೋ ಹತ್ಯೆ ನಿಷೇಧ: ಪ್ರಸ್ತಾವಿತ ಕಾಯ್ದೆಯಲ್ಲಿ ಏನೇನಿದೆ?

ಇಂತಹ ಸಂದರ್ಭದಲ್ಲಿ ಪಕ್ಷಭೇದವನ್ನು ಮರೆತು ಗೋವುಗಳ ಸಂರಕ್ಷಣೆಗೆ ಎಲ್ಲರೂ ಮುಂದಾದರೆ ನಾಡಿನ ಪಶುಸಂಪತ್ತು ವೃದ್ಧಿಸುತ್ತದೆ. ಕೇವಲ ರಾಜಕೀಯ ದುರುದ್ದೇಶಕ್ಕೆ ಮಸೂದೆಯನ್ನು ವಿರೋಧಿಸಿ ಸಮಾಜದಲ್ಲಿ ಜನಸಾಮಾನ್ಯರ ನಡುವೆ ತಪ್ಪು ಕಲ್ಪನೆ ಮೂಡಿಸುವುದು ಅಸಹನೀಯ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.

ನಾಚಿಕೆಗೇಡು ಎಂದ ಚೌಹಾಣ್

ನಾಚಿಕೆಗೇಡು ಎಂದ ಚೌಹಾಣ್

ಹಿಂದೆಯೂ 2012ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗೋಹತ್ಯೆ ನಿಷೇಧ ಮಸೂದೆ ಕುರಿತು ಕೇಂದ್ರ ಸರ್ಕಾರ ವ್ಯಕ್ತಪಡಿಸಿದ್ದ ಆಕ್ಷೇಪಣೆಗಳನ್ನು ನೂತನ ಮಸೂದೆಯಲ್ಲಿ ಸರಿಪಡಿಸಲಾಗಿದೆ. ಹಳೆಯ ಮಸೂದೆಯಲ್ಲಿ ಎಮ್ಮೆ, ಕೋಣಗಳ ಹತ್ಯೆಗೂ ನಿಷೇಧವಿತ್ತು. ಆದರೆ 2020ರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕದಲ್ಲಿ 13 ವರ್ಷದ ಎಮ್ಮೆ, ಕೋಣಗಳ ಹತ್ಯೆಗೆ ನಿರ್ಬಂಧವಿಲ್ಲ. ಹೀಗಾಗಿ ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಇದ್ದ ಆಕ್ಷೇಪಕಣೆ ಇಲ್ಲಿ ಪರಿಗಣನೆಗೆ ತೆಗೆದುಕೊಂಡು ಮಸೂದೆ ರೂಪಿಸಲಾಗಿದೆ. ಹೀಗಿದ್ದಾಗಲೂ ಇದನ್ನು ಕಾಂಗ್ರೆಸ್ ವಿರೊಧಿಸುತ್ತಿರುವುದು ನಾಚಿಕೆಗೇಡು ಎಂದು ಸಚಿವ ಪ್ರಬು ಚೌಹಾಣ್ ಹೇಳಿದರು.

ಹತ್ಯೆ ತಡೆಯುವುದಕ್ಕೆ ಆದ್ಯತೆ

ಹತ್ಯೆ ತಡೆಯುವುದಕ್ಕೆ ಆದ್ಯತೆ

2019ರ ಜಾನುವಾರು ಗಣತಿ ಪ್ರಕಾರ 2,38,296 ಗೋವುಗಳನ್ನು ಪ್ರತಿವರ್ಷ ವಧೆ ಮಾಡಲಾಗುತ್ತಿದೆ. ಒಂದು ದಿನದ ವಿಳಂಬವು 662 ಗೋವುಗಳ ವಧೆಗೆ ಕಾರಣವಾಗುತ್ತದೆ. ಇದು ಎಚ್ಚರಿಕೆಯ ಗಂಟೆ ಇದೇ ವೇಗದಲ್ಲಿ ಗೋವುಗಳ ವಧೆ ನಡೆಯುತ್ತ ಹೋದಲ್ಲಿ, ಮುಂದಿನ ದಿನಗಳಲ್ಲಿ ಗೋವುಗಳನ್ನು ಪುಸ್ತಕಗಳಲ್ಲಿ ಮಾತ್ರ ನೋಡುವ ಸಮಯ ದೂರವಿಲ್ಲ. ಅಕ್ರಮ ಗೋವುಗಳ ಸಾಗಣೆ ಮತ್ತು ವಧೆ ತಡೆಯುವುದು ನಮ್ಮ ತುರ್ತು ಆದ್ಯತೆಯಾಗಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಜಾರಿಗೆ ಬಂದರೆ ಈ ಅಕ್ರಮಗಳಿಗೆ ಕಡಿವಾಣ ಬೀಳಲಿದೆ ಎಂದು ಪ್ರಭು ಚೌಹಾಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗೋ ಹತ್ಯೆ ನಿಷೇಧ: ಸರ್ಕಾರ ಕೊನೆವರೆಗೂ ರಹಸ್ಯ ಕಾಯ್ದುಕೊಂಡಿದ್ದು ಹೇಗೆ?

ಗೋವುಗಳ ಪ್ರಮಾಣದಲ್ಲಿ ಏರಿಕೆ

ಗೋವುಗಳ ಪ್ರಮಾಣದಲ್ಲಿ ಏರಿಕೆ

ಗೋವುಗಳ ಸಂರಕ್ಷಣೆಗೆ ಉತ್ತರಪ್ರದೇಶ ಮತ್ತು ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಭಿನ್ನವಾದ ಪ್ರಯೋಗಗಳು ನಡೆಯುತ್ತಿದ್ದು ಗೋವುಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡುಬಂದಿದೆ. ಉದ್ಯೋಗ ಸೃಷ್ಟಿ, ಗೋವಿನ ದೇಶಿ ಉತ್ಪನ್ನಗಳ ಮಾರಾಟ ಮತ್ತು ಬಳಕೆ ಸಹ ಹೆಚ್ಚುತ್ತಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಮಾಹಿತಿ ನೀಡಿದ್ದಾರೆ.

  Virat Kohli ಈ ದಶಕದ ಶ್ರೇಷ್ಠ ಕ್ರಿಕೆಟಿಗ | Oneindia Kannada
  ಗೋ ಹತ್ಯೆ ನಿಷೇಧ ಕಾಯ್ದೆ

  ಗೋ ಹತ್ಯೆ ನಿಷೇಧ ಕಾಯ್ದೆ

  ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಜೊತೆಗೆ ಒಂದು ಸಮುದಾಯದ ಮುಖಂಡರೂ ಕೂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾನೂನು ಜಾರಿಗೆ ತರದಂತೆ ಮನವಿ ಮಾಡಿದ್ದರು. ಜಾನುವಾರು ಎಂದರೆ 13 ವರ್ಷಗಳ ಒಳಗಿನ ಆಕಳು, ಆಕಳ ಕರು, ಎತ್ತು, ಗೂಳಿ, ಎಮ್ಮೆ ಅಥವಾ ಕೋಣ ಎಂದು ಪರಿಗಣಿಸಲಾಗುತ್ತದೆ. ಅವುಗಳ ಹತ್ಯೆ ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧವಾಗುತ್ತದೆ.

  ಗೋ ಹತ್ಯೆ ನಿ‍ಷೇಧ ಕಾಯ್ದೆ ಜಾರಿಯಾದ ಬಳಿಕ, ಹತ್ಯೆ ಮಾಡಿದರೆ 3 ವರ್ಷದ ಜೈಲು ಶಿಕ್ಷೆ ಏಳು ವರ್ಷಕ್ಕೆ ಏರಿಕೆ ಆಗಲಿದೆ. ಮೊದಲ ಬಾರಿ ಅಪರಾಧ ಮಾಡಿದಲ್ಲಿ 50 ಸಾವಿರ ರೂ. ಇದ್ದ ದಂಡ ಇದೀಗ 5 ಲಕ್ಷ ರೂ.ಗಳಿಗೆ ಏರಿಕೆಯಾಗಿದೆ. ಇನ್ನು ಅದೇ ಅಪರಾಧವನ್ನು ಮತ್ತೆ ಮಾಡಿದಲ್ಲಿ ಪ್ರತಿ ಹಸುವಿನ ಹತ್ಯೆಗೆ 1 ಲಕ್ಷದಿಂದ 10 ಲಕ್ಷ ರೂ.ಗಳವರೆಗೆ ದಂಡ ಮತ್ತು ಏಳು ವರ್ಷ ಶಿಕ್ಷೆ ವಿಧಿಸಲು ಅವಕಾಶವಿದೆ. ಇನ್ನೂ ಹಲವು ಕಠಿಣ ಕ್ರಮಗಳನ್ನು ಕಾನೂನಿನಲ್ಲಿ ತರಲಾಗಿದೆ. ಹೀಗಾಗಿ ಈ ಸುಗ್ರೀವಾಜ್ಞೆ ಜಾರಿ ಮಾಡದಂತೆ ಸರ್ಕಾರಕ್ಕೆ ವಿರೋಧ ಎದುರಾಗಿತ್ತು.

  English summary
  Karnataka cabinet approves ordinance on cow slaughter bill. Ordinance sent to Raj Bhavan for signature. Know more.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X