ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಪರಿಷತ್ ಸದಸ್ಯೆಯಾಗಿ ಎಚ್ ಡಿಕೆ ಸಂಪುಟ ಸೇರಿದ್ದು ಜಯಮಾಲಾ ಮಾತ್ರ

By Gururaj
|
Google Oneindia Kannada News

ಬೆಂಗಳೂರು, ಜೂನ್ 06 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟ ವಿಸ್ತರಣೆ ಬುಧವಾರ ನಡೆಯಿತು. ಕಾಂಗ್ರೆಸ್‌ನ 15, ಜೆಡಿಎಸ್‌ನ 9, ಕೆಪಿಜೆಪಿಯ 1, ಬಿಎಸ್‌ಪಿಯ ಒಬ್ಬರು ಶಾಸಕರು ಸೇರಿ 25 ಜನರು ಇಂದು ಕುಮಾರಸ್ವಾಮಿ ಸಂಪುಟ ಸೇರಿದರು.

ಕಾಂಗ್ರೆಸ್-ಮೈತ್ರಿ ಸರ್ಕಾರದ ನೂತನ ಸಚಿವರ ಪಟ್ಟಿಕಾಂಗ್ರೆಸ್-ಮೈತ್ರಿ ಸರ್ಕಾರದ ನೂತನ ಸಚಿವರ ಪಟ್ಟಿ

ಬುಧವಾರ ಮಧ್ಯಾಹ್ನ ರಾಜಭವನದ ಗಾಜಿನ ಮನೆಯಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಿತು. ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಸಚಿವರಿಗೆ ಪ್ರಮಾಣ ಬೋಧಿಸಿದರು.

Karnataka Cabinet Expansion 2018 : Oath tacking Ceremony Live updates

ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದ ಕ್ಷಣ-ಕ್ಷಣದ ಮಾಹಿತಿಗಳು ಇಲ್ಲಿವೆ..

ಕುಮಾರಸ್ವಾಮಿ ಸಂಪುಟ ಸೇರುವ 8 ಜೆಡಿಎಸ್ ಶಾಸಕರ ಪರಿಚಯಕುಮಾರಸ್ವಾಮಿ ಸಂಪುಟ ಸೇರುವ 8 ಜೆಡಿಎಸ್ ಶಾಸಕರ ಪರಿಚಯ

Newest FirstOldest First
3:27 PM, 6 Jun

ಪ್ರಮಾಣ ವಚನ ಸಮಾರಂಭವನ್ನು ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಳಿಸಲಾಯಿತು
3:25 PM, 6 Jun

ಎಲ್ಲಾ ಸಚಿವರ ಪ್ರಮಾಣ ವಚನ ಸಮಾರಂಭ ಮುಗಿದಿದ್ದು, ನೂತನ ಸಚಿವರ ಜೊತೆ ರಾಜ್ಯಪಾಲರು, ಮುಖ್ಯಮಂತ್ರಿಗಳು ಫೋಟೋ ತೆಗೆಸಿಕೊಂಡರು
3:21 PM, 6 Jun

ಡಾ.ಜಯಮಾಲಾ ರಾಮಚಂದ್ರ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜಯಮಾಲಾ ಅವರು ವಿಧಾನಪರಿಷತ್ ಸದಸ್ಯರು
3:18 PM, 6 Jun

ರಾಣೆಬೆನ್ನೂರು ಕ್ಷೇತ್ರದ ಕೆಪಿಜೆಪಿ ಶಾಸಕ ಆರ್.ಶಂಕರ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
3:16 PM, 6 Jun

ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ.ಪುಟ್ಟರಂಗ ಶೆಟ್ಟಿ ಅವರು ಪ್ರಮಾಣ ವಚನ ಸ್ವೀಕರಿಸಿದರು.
3:13 PM, 6 Jun

ಹುಮನಾಬಾದ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಶೇಖರ ಬಸವರಾಜ ಪಾಟೀಲ್ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು
3:11 PM, 6 Jun

ಪಾವಗಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವೆಂಕಟರಮಣಪ್ಪ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು
Advertisement
3:09 PM, 6 Jun

ಡಿ.ಕೆ.ಶಿವಕುಮಾರ್ ಪ್ರಮಾಣ ವಚನದ ವಿಡಿಯೋ
3:08 PM, 6 Jun

ಬಸವನ ಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ್ ಪ್ರಮಾಣ ವಚನ ಸ್ವೀಕರಿಸಿದರು.
3:06 PM, 6 Jun

ಕೊಳ್ಳೇಗಾಲ ಕ್ಷೇತ್ರದ ಬಿಎಸ್‌ಪಿ ಶಾಸಕ ಎನ್.ಮಹೇಶ್ ಬುದ್ಧ, ಬಸವ, ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು
3:04 PM, 6 Jun

ಜಮೀರ್ ಅಹಮದ್ ಖಾನ್ ಹೆಸರು ಘೋಷಣೆ ಮಾಡುತ್ತಿದ್ದಂತೆ ನೂರಾರು ಜನರು ಜೋರಾಗಿ ಕೂಗುವ ಮೂಲಕ ಹರ್ಷ ವ್ಯಕ್ತಪಡಿಸಿದರು
3:03 PM, 6 Jun

ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಇಂಗ್ಲಿಶ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
Advertisement
3:01 PM, 6 Jun

ಕೆ.ಆರ್.ನಗರ ಕ್ಷೇತ್ರದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. (ಸಾಲಿಗ್ರಾಮ ರಾಮೇಗೌಡ ಮಹೇಶ್)
2:59 PM, 6 Jun

ಮಂಗಳೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು
2:57 PM, 6 Jun

ಪ್ರಮಾಣ ವಚನ ಸಮಾರಂಭದ ಸಮಯ ಹೇಗಿದೆ? ಇಲ್ಲಿದೆ ನೋಡಿ ವಿಶ್ಲೇಷಣೆ
2:56 PM, 6 Jun

ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು
2:54 PM, 6 Jun

ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
2:52 PM, 6 Jun

ಸಿಂಧನೂರು ಕ್ಷೇತ್ರದ ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು
2:50 PM, 6 Jun

ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು
2:48 PM, 6 Jun

ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ (ವಾಸು) ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು
2:45 PM, 6 Jun

ಗೌರಿಬಿದನೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎಚ್.ಶಿವಶಂಕರ ರೆಡ್ಡಿ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
2:42 PM, 6 Jun

ಸಿಂಧಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು
2:39 PM, 6 Jun

ಬ್ಯಾಟರಾಯನಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೃಷ್ಣ ಬೈರೇಗೌಡ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು
2:36 PM, 6 Jun

ಮದ್ದೂರು ಕ್ಷೇತ್ರದ ಜೆಡಿಎಸ್ ಶಾಸಕ ಡಿ.ಸಿ.ತಮ್ಮಣ್ಣ ಅವರು ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು
2:34 PM, 6 Jun

ಸರ್ವಜ್ಞನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
2:33 PM, 6 Jun

ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್
2:32 PM, 6 Jun

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಸಂಪುಟ ದರ್ಜೆ ಸಚಿವರಾಗಿ ತಾಯಿ ಚಾಮುಂಡೇಶ್ವರಿ ಹೆಸರಿನಲ್ಲಿ ಪ್ರತಿಜ್ಞೆ ಮಾಡಿದರು.
2:29 PM, 6 Jun

ಕನಕಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು
2:27 PM, 6 Jun

ಎಂ.ಬಿ.ಪಾಟೀಲ್‌ಗೆ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಲೇವಡಿ ಮಾಡಿದ ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್
2:26 PM, 6 Jun

ಬೀದರ್ ದಕ್ಷಿಣ ಕ್ಷೇತ್ರದ ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪೂರ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
READ MORE

English summary
Karnataka Cabinet Expansion 2018 : 25 MLA's joined Chief Minister H.D.Kumaraswamy cabinet on June 6, 2018. Here is a live updates of new ministers oath tacking ceremony.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X