Karnataka Cabinet: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಈ ಇಬ್ಬರು ಸಚಿವರಿಗೆ ಉಪ ಮುಖ್ಯಮಂತ್ರಿ ಪಟ್ಟ!, ಒಟ್ಟು 3 ಡಿಸಿಎಂ
Karnataka Cabinet Expansion: ಕರ್ನಾಟಕದಲ್ಲಿ ಈಗಾಗಲೇ ಒಬ್ಬರು ಉಪ ಮುಖ್ಯಮಂತ್ರಿ ಇದ್ದಾರೆ. ಕರ್ನಾಟಕದಲ್ಲಿ ಡಿ.ಕೆ ಶಿವಕುಮಾರ್ ಅವರು ನೃತೃತ್ವದಲ್ಲಿ ಹೊಸ ಸರ್ಕಾರ ರಚನೆಯಾದ ಮೇಲೆ ಉಪ ಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್ ಅವರನ್ನು ಆಯ್ಕೆ ಮಾಡಲಾಗಿದೆ. ಇದೀಗ ಕರ್ನಾಟಕದಲ್ಲಿ ಇನ್ನಿಬ್ಬರು ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಹೌದು ಕರ್ನಾಟಕದಲ್ಲಿ ಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಪಟ್ಟ ನೀಡುವುದಕ್ಕೆ ಸಿದ್ಧತೆ ನಡೆದಿದೆ. ಇದರ ಸಂಪೂರ್ಣ ವಿವರ ಈ ಲೇಖನದಲ್ಲಿದೆ.
ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಭಾರೀ ಸಿದ್ಧತೆ ನಡೆದಿದೆ. ಕರ್ನಾಟಕದಲ್ಲಿ ಇನ್ನೂ 20 ಸಚಿವ ಸ್ಥಾನ ಬಾಕಿ ಇದೆ. ಒಂದೂವರೆ ತಿಂಗಳಾದರೂ, ಸಚಿವ ಸಂಪುಟ ವಿಸ್ತರಣೆ ಆಗಿಲ್ಲ. ಸಚಿವ ಸಂಪುಟ ವಿಸ್ತರಣೆ ಆಗದೆ ಇರುವುದರಿಂದ ರಾಜ್ಯದಲ್ಲಿ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ನೀರಾವರಿ ಸೇರಿದಂತೆ 20 ಇಲಾಖೆಗಳಲ್ಲಿ ಕೆಲಸಗಳು ಸಾಗುತ್ತಿಲ್ಲ. ಕರ್ನಾಟಕದಲ್ಲಿ ಬರದ ಕಾರ್ಮೋಡ ಆವರಿಸಿರುವಾಗಲೇ ಸಚಿವ ಸಂಪುಟ ಇನ್ನೂ ವಿಸ್ತರಣೆ ಆಗದೆ ಇರುವುದು ಆಕ್ರೋಶಕ್ಕೆ ಹಾಗೂ ಅಸಮಾಧಾನಕ್ಕೂ ಕಾರಣವಾಗಿತ್ತು. ಇದೀಗ ಸಚಿವ ಸಂಪುಟ ವಿಸ್ತರಣೆ ಆಗುವುದರೊಂದಿಗೆ ಇನ್ನಿಬ್ಬರು ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ ಎನ್ನುವುದು ಬಹುತೇಕ ಖಚಿತವಾಗಿದೆ. ಇದರ ವಿವರವನ್ನು ಮುಂದೆ ನೋಡೋಣ.

ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಗ್ರೀನ್ ಸಿಗ್ನಲ್ ತೋರಿಸಿದೆ. ಕರ್ನಾಟಕ ಸರ್ಕಾರದ ಸಂಪುಟ ವಿಸ್ತರಣೆಯೊಂದಿಗೆ ಇಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆನೀಡಲು ಕಾಂಗ್ರೆಸ್ ಹೈಕಮಾಂಡ್ ಹಂತದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಲಾಗಿದೆ. ಲಿಂಗಾಯತರು ಹಾಗೂ ಅಹಿಂದ ಸಮುದಾಯದ ತಲಾ ಒಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವುದಕ್ಕೆ ಕಾಂಗ್ರೆಸ್ ವರಿಷ್ಠರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗುವ ನಿರೀಕ್ಷೆ ಇದೆ. ಮುಖ್ಯವಾಗಿ ಕರ್ನಾಟಕದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿ ಇರಿಸಿಕೊಂಡು ಸಚಿವ ಸಂಪುಟ ವಿಸ್ತರಣೆ ಹಾಗೂ ಉಪ ಮುಖ್ಯಮಂತ್ರಿಗಳ ಆಯ್ಕೆ ಮಾಡಲಾಗುತ್ತಿದೆ.
ಮುಸ್ಲಿಮರಿಗೆ ಮೂರು ಸಚಿವ
ಕರ್ನಾಟಕದಲ್ಲಿ ಮೂವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಮುಸ್ಲಿಂ ಸಮುದಾಯದಿಂದ ಮೂವರು ಶಾಸಕರಿಗೆ ಸಚಿವ ಸ್ಥಾನ ನೀಡುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಹಂತದಲ್ಲಿ ಚರ್ಚೆ ನಡೆದಿದೆ. ಇನ್ನು ಮಂಗಳವಾರ ಸಚಿವ ಸಂಪುಟ ವಿಸ್ತರಣೆಗೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಹಂತದಲ್ಲಿ ಚರ್ಚೆ ನಡೆಯಬೇಕಾಗಿತ್ತು. ಆದರೆ, ದೆಹಲಿಯ ಜಂತರ್ ಮಂತನ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಹ ಬೆಂಬಲ ಸೂಚಿಸಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿದೆ. ಹೀಗಾಗಿ, ಕರ್ನಾಟಕದ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಿಲ್ಲ.


Click it and Unblock the Notifications
