• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚಿತ್ರಗಳು: ಬೊಮ್ಮಾಯಿ ಸಂಪುಟದಲ್ಲಿ ಯಾವ ಜಿಲ್ಲೆಯಿಂದ ಯಾರು ಸಚಿವರು? ಪಟ್ಟಿ ಇಲ್ಲಿದೆ..

|
Google Oneindia Kannada News

ಕರ್ನಾಟಕ, ಆಗಸ್ಟ್ 04: ರಾಜ್ಯದಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಕೊನೆಗೂ ಅಂತಿಮ ಹಂತಕ್ಕೆ ಬಂದಿದ್ದು, ಇಂದು (ಆ.4) ಮಧ್ಯಾಹ್ನ 2.30ಕ್ಕೆ ನೂತನ ಸಚಿವರುಗಳು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಒಟ್ಟು 29 ಶಾಸಕರುಗಳಿಗೆ ಮೊದಲ ಹಂತದಲ್ಲಿ ಸಚಿವರಾಗಲು ಹೈಕಮಾಂಡ್ ಅನುಮತಿ ನೀಡಿದ್ದು, ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಂಬಂಧ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾರನ್ನು ದೆಹಲಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಇದಾದ ನಂತರ ಸಿಎಂ ಕರ್ನಾಕಟದತ್ತ ಮುಖ ಮಾಡಿದ್ದು, ಬಿಜೆಪಿ ಹೈಕಮಾಂಡ್ ನೀಡಿದ ಪಟ್ಟಿಯನ್ವಯ ಸಚಿವರಾಗುವವರಿಗೆ ಪ್ರಮಾಣ ವಚನ ಸ್ವೀಕರಿಸಲು ಬರುವಂತೆ ತಿಳಿಸಲಾಗಿದೆ ಎನ್ನಲಾಗಿದೆ.

ಬಸವರಾಜ ಬೊಮ್ಮಾಯಿ ಸಂಪುಟ; ಬೆಂಗಳೂರಿಗೆ 7 ಸಚಿವ ಸ್ಥಾನ ಬಸವರಾಜ ಬೊಮ್ಮಾಯಿ ಸಂಪುಟ; ಬೆಂಗಳೂರಿಗೆ 7 ಸಚಿವ ಸ್ಥಾನ

ಬಿ. ಶ್ರೀರಾಮುಲು- ಮೊಳಕಾಲ್ಮೂರು ಕ್ಷೇತ್ರ, ಚಿತ್ರದುರ್ಗ ಜಿಲ್ಲೆ

ಬಿ. ಶ್ರೀರಾಮುಲು- ಮೊಳಕಾಲ್ಮೂರು ಕ್ಷೇತ್ರ, ಚಿತ್ರದುರ್ಗ ಜಿಲ್ಲೆ

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ. ಶ್ರೀರಾಮುಲುರವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.

ಉಪ ಮುಖ್ಯಮಂತ್ರಿ ಹುದ್ದೆಗೆ ಬಿ. ಶ್ರೀರಾಮುಲು ಹೆಸರು ಬಲವಾಗಿ ಕೇಳಿಬಂದಿತ್ತು. ಆದರೆ ಬಿಜೆಪಿ ಹೈಕಮಾಂಡ್ ಈ ಬಾರಿ ಡಿಸಿಎಂ ಹುದ್ದೆ ಸೃಷ್ಠಿಸಿಲ್ಲ. ಡಿಸಿಎಂ ಸ್ಥಾನಕ್ಕೇರುವ ಆಸೆಯಲ್ಲಿದ್ದ ರಾಮುಲುಗೆ ನಿರಾಸೆಯಾಗಿದೆ.

ವಾಲ್ಮೀಕಿ ಸಮುದಾಯದ ಪ್ರಭಾವಿ ಮುಖಂಡರಾಗಿರುವ ಶ್ರೀರಾಮುಲು ಮೂಲತಃ ಬಳ್ಳಾರಿಯವರಾಗಿದ್ದು, ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಆರೋಗ್ಯ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಕೆ.ಎಸ್. ಈಶ್ವರಪ್ಪ- ಶಿವಮೊಗ್ಗ ಕ್ಷೇತ್ರ

ಕೆ.ಎಸ್. ಈಶ್ವರಪ್ಪ- ಶಿವಮೊಗ್ಗ ಕ್ಷೇತ್ರ

ಶಿವಮೊಗ್ಗ ಜಿಲ್ಲೆಯಲ್ಲಿ ಬಿ.ಎಸ್. ಯಡಿಯೂರಪ್ಪರನ್ನು ಬಿಟ್ಟರೆ ಕೆ.ಎಸ್. ಈಶ್ವರಪ್ಪನವರೇ ಹಿರಿಯರು ಹಾಗೂ ಪ್ರಮುಖ ನಾಯಕರು. ಕೆಲವು ಹಿರಿಯ ನಾಯಕರಿಗೆ ಸಚಿವ ಸ್ಥಾನ ನೀಡುವುದಿಲ್ಲ ಎನ್ನುವ ಮಾತುಗಳೂ ಕೇಳಿಬಂದಿದ್ದವು. ಆದರೆ ಕೊನೆ ಘಳಿಗೆಯಲ್ಲಿ ಈಶ್ವರಪ್ಪ ಹೆಸರು ನೂತನ ಸಚಿವರಾಗಲಿರುವ ಪಟ್ಟಿಯಲ್ಲಿ ಇವರ ಹೆಸರು ಇದೆ.

ಬಿಜೆಪಿಯಲ್ಲಿ ಕುರುಬ ಸಮುದಾಯದ ಪ್ರಬಲ ನಾಯಕರಾಗಿರುವ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪಗೆ ಈ ಬಾರಿಯೂ ಸಚಿವ ಸ್ಥಾನ ಒಲಿದು ಬಂದಿದೆ. ಹಿರಿಯ ಶಾಸಕರಾಗಿರುವ ಈಶ್ವರಪ್ಪರನ್ನು ಕೈಬಿಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಹೈಕಮಾಂಡ್ ಕೊನೆಗೂ ಮಣೆ ಹಾಕಿದೆ.

ಶಿವಮೊಗ್ಗ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿರುವ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ನಿಭಾಯಿಸಿದ್ದರು.

ಆರಗ ಜ್ಞಾನೇಂದ್ರ- ತೀರ್ಥಹಳ್ಳಿ, ಶಿವಮೊಗ್ಗ ಜಿಲ್ಲೆ

ಆರಗ ಜ್ಞಾನೇಂದ್ರ- ತೀರ್ಥಹಳ್ಳಿ, ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಸಂಪುಟ ಸೇರಲಿದ್ದಾರೆ ಎಂದು ಬೆಂಬಲಿಗರು ವಿಶ್ವಾಸದಲ್ಲಿದ್ದರು. ಈಗ ಅದು ನಿಜವಾಗಿದೆ. ಆರಗ ಜ್ಞಾನೇಂದ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಸಚಿವ ಸಂಪುಟದಲ್ಲಿ ಮೊದಲ ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


ಒಕ್ಕಲಿಗ ಸಮುದಾಯದ ಆರಗ ಜ್ಞಾನೇಂದ್ರ ಬಿಜೆಪಿ ಪಕ್ಷದ ನಿಷ್ಠ ಶಾಸಕರಾಗಿದ್ದು, ಹಾಗೂ ಆರ್‌ಎಸ್‌ಎಸ್‌ನ ಬೆಂಬಲವೂ ಇವರಿಗಿದೆ ಎಂದು ಹೇಳಲಾಗಿದೆ. ಶಿವಮೊಗ್ಗ ಜಿಲ್ಲೆಗೆ ಎರಡು ಸಚಿವ ಸ್ಥಾನಗಳನ್ನು ನೀಡಿದ್ದು, ಕೆ.ಎಸ್. ಈಶ್ವರಪ್ಪ ಜೊತೆ ಆರಗ ಜ್ಞಾನೇಂದ್ರ ಕೂಡ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಖಾತೆ ನಿರ್ವಹಿಸಲಿದ್ದಾರೆ.

ಶಿವರಾಮ್ ಹೆಬ್ಬಾರ್- ಯಲ್ಲಾಪುರ ಕ್ಷೇತ್ರ

ಶಿವರಾಮ್ ಹೆಬ್ಬಾರ್- ಯಲ್ಲಾಪುರ ಕ್ಷೇತ್ರ

ಇನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಸಚಿವರಾಗುವುದು ಖಚಿತವಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿಗೆ ಬಂದು ಸಚಿವರಾಗಿದ್ದ 11 ಜನರಲ್ಲಿ ಇವರೂ ಒಬ್ಬರಾಗಿದ್ದಾರೆ.

ಬ್ರಾಹ್ಮಣ ಸಮುದಾಯದ ಶಿವರಾಮ ಹೆಬ್ಬಾರ್‌ರವರು ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿ ಕಾರ್ಮಿಕ ಸಚಿವರಾಗಿದ್ದರು. ಈ ವೇಳೆ ರಾಜ್ಯಾದ್ಯಂತ ತಿರುಗಾಟ ನಡೆಸಿ, ಉತ್ತಮವಾಗಿ ಕೆಲಸವನ್ನು ನಿರ್ವಹಿಸುವ ಜೊತೆಗೆ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಒಳ್ಳೆಯ ಕೆಲಸ ಮಾಡಿದ್ದರಿಂದ ಹೆಬ್ಬಾರ್‌ರಿಗೆ ಸಚಿವ ಸ್ಥಾನ ಖಚಿತವಾಗಿದೆ. ಈ ಬಗ್ಗೆ ಖುದ್ದು ಹೆಬ್ಬಾರ್ ಕೂಡ ಅಭಿಪ್ರಾಯ ವ್ಯಕ್ತಪಡಿಸಿ, ಸಂತಸ ಹಂಚಿಕೊಂಡಿದ್ದಾರೆ.

ಆನಂದ್ ಸಿಂಗ್- ವಿಜಯನಗರ ಕ್ಷೇತ್ರ

ಆನಂದ್ ಸಿಂಗ್- ವಿಜಯನಗರ ಕ್ಷೇತ್ರ

ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಬಂದವರಲ್ಲಿ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಕೂಡ ಒಬ್ಬರು. ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿಯೂ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ನೂತನ ವಿಜಯನಗರ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಆನಂದ್ ಸಿಂಗ್ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಹಾಗಾಗಿ ಅವರಿಗೆ ಸಚಿವ ಸ್ಥಾನ ಲಭಿಸಿದೆ.

ಎಸ್. ಅಂಗಾರ- ಸುಳ್ಯ ಕ್ಷೇತ್ರ, ದಕ್ಷಿಣ ಕನ್ನಡ ಜಿಲ್ಲೆ

ಎಸ್. ಅಂಗಾರ- ಸುಳ್ಯ ಕ್ಷೇತ್ರ, ದಕ್ಷಿಣ ಕನ್ನಡ ಜಿಲ್ಲೆ

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಕ್ಷೇತ್ರದ ಶಾಸಕರಾಗಿರುವ ಎಸ್. ಅಂಗಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಸಚಿವ ಸಂಪುಟದಲ್ಲಿ ಮತ್ತೆ ಸಚಿವರಾಗಲಿದ್ದಾರೆ. ದಲಿತ ಸಮುದಾಯದ ಶಾಸಕರಾಗಿರುವ ಅಂಗಾರಗೆ ಮತ್ತೆ ಮಣೆ ಹಾಕಲಾಗಿದೆ.

ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿಯೂ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಎರಡನೆ ಬಾರಿಗೆ ಸಚಿವರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸುನೀಲ್ ಕುಮಾರ್ ನಾಯ್ಕ್- ಕಾರ್ಕಳ,

ಸುನೀಲ್ ಕುಮಾರ್ ನಾಯ್ಕ್- ಕಾರ್ಕಳ,

ಉಡುಪಿ ಜಿಲ್ಲೆ ಕಾರ್ಕಳ ಕ್ಷೇತ್ರದ ಶಾಸಕರಾಗಿರುವ ಸುನೀಲ್ ಕುಮಾರ್ ನಾಯ್ಕ್ ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾರ್ಕಳ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಸಚಿವ ಸಂಪುಟದಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

  ಹಾಕಿ ಆಟಗಾರರಿಗೆ ಕರೆಮಾಡಿ ವಿಶ್ ಮಾಡಿದ ಮೋದಿ: ವೈರಲ್ ಆಯ್ತು ವಿಡಿಯೋ | Oneindia Kannada
  ಕೋಟಾ ಶ್ರೀನಿವಾಸ ಪೂಜಾರಿ- ಉಡುಪಿ ಜಿಲ್ಲೆ

  ಕೋಟಾ ಶ್ರೀನಿವಾಸ ಪೂಜಾರಿ- ಉಡುಪಿ ಜಿಲ್ಲೆ

  ವಿಧಾನ ಪರಿಷತ್ ಸದಸ್ಯರಾಗಿರುವ ಕೋಟಾ ಶ್ರೀನಿವಾಸ ಪೂಜಾರಿಗೆ ಮತ್ತೆ ಸಚಿವ ಸ್ಥಾನ ಒಲಿದು ಬಂದಿದೆ. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿ ಮುಜರಾಯಿ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

  ಕ್ಲೀನ್ ಇಮೇಜ್ ಹೊಂದಿರುವ ಸರಳ, ಸಜ್ಜನಿಕೆ ಹಾಗೂ ಪಕ್ಷ ನಿಷ್ಠೆ ಗುರುತಿಸಿ ಕೋಟಾ ಶ್ರೀನಿವಾಸ ಪೂಜಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಸಚಿವ ಸಂಪುಟದಲ್ಲಿ ಕಾರ್ಯನಿರ್ವಹಿಸುವ ಅವಕಾಶ ದೊರೆತಿದೆ. ಇವರು ಕೂಡ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

  English summary
  Karnataka Cabinet Expansion: The BJP High Command has allowed 29 MLAs to be ministers in the first phase.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X