Live
Karnataka Cabinet Expansion LIVE: ಸಿದ್ದರಾಮಯ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ, ಕ್ಷಣ ಕ್ಷಣದ ಅಪ್ಡೇಡ್ಸ್
ಕರ್ನಾಟಕ ಸರ್ಕಾರದ ಸಚಿವ ಸಂಪುಟ ವಿಸ್ತರಣೆ: ಬೆಂಗಳೂರು, ಮೇ 27:135 ಸ್ಥಾನವನ್ನು ಗೆದ್ದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ, ತನ್ನ ಎರಡನೇ ಸಚಿವ ಸಂಪುಟ ವಿಸ್ತರಣೆಯ ಕಸರತ್ತನ್ನು ನಡೆಸುತ್ತಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಈಗಾಗಲೇ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ. ಇವರ ಜೊತೆಗೆ, ಎಂಟು ಹಿರಿಯ ಶಾಸಕರ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದ್ದರು. ಇಂದು (ಮೇ 27), 24 ನೂತನ ಸಚಿವರು ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ. ಸಂಪುಟ ವಿಸ್ತರಣೆಯ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.
Live ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ https://t.co/y1KDAW2Byl
— Karnataka Congress (@INCKarnataka) May 27, 2023

Karnataka Cabinet Expansion Live: ಸಚಿವ ಸ್ಥಾನ ವಂಚಿತರಿಗೆ ಡಿಸಿಎಂ ಡಿಕೆಶಿ ಕಿವಿಮಾತು
ಧರಮ್ ಸಿಂಗ್ ಮತ್ತು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ನನಗೂ ಸಚಿವ ಸಂಪುಟದಲ್ಲಿ ಅವಕಾಶ ಸಿಕ್ಕಿರಲಿಲ್ಲ. ತಾಳ್ಮೆಯಿಂದ ಇರಬೇಕು ಎಂದು ಸಚಿವ ಸ್ಥಾನ ಅವಕಾಶವಂಚಿತರಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭರವಸೆಯ ಮಾತುಗಳನ್ನಾಡಿದ್ದಾರೆ. ಎಲ್ಲರೂ ತಾಳ್ಮೆಯಿಂದರಬೇಕು ಮುಂದೆ ಎಲ್ಲರಿಗೆ ಅವಕಾಶ ಸಿಗಲಿದೆ ಎಂದರು.
Karnataka Cabinet Expansion Live: ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಅಂತ್ಯ

ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಅಂತ್ಯಗೊಂಡಿದ್ದು, ಇಂದು (ಮೇ 27) ರಂದು ನೂತನ 24 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ವಿಸ್ತರಣೆಗೊಂಡಿದ್ದು, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಒಟ್ಟು 33 ನೂತನ ಸಚಿವರು ಸಿದ್ದರಾಮಯ್ಯ ಅವರ ಸೈನ್ಯ ಸೇರಿದ್ದು, ಇಂದು ಅಥವಾ ನಾಳೆ ಖಾತೆ ಹಂಚಿಕೆಯಾಗಲಿದೆ.
Karnataka Cabinet Expansion Live: 24 ನೂತನ ಸಚಿವರ ಪ್ರಮಾಣವಚನ

ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯುತ್ತಿದ್ದು, ಬೈರತಿ ಸುರೇಶ್,ಮಧು ಬಂಗಾರಪ್ಪ, ಡಾ. ಎಂಸಿ ಸುಧಾಕರ್ ಹಾಗೂ ಬಿ.ನಾಗೇಂದ್ರ ಸಿದ್ದರಾಮಯ್ಯ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಭೋಧಿಸಿದ್ದಾರೆ.
Karnataka Cabinet Expansion Live: ನೂತನ ಸಚಿವರ ಪ್ರಮಾಣವಚನ

ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯುತ್ತಿದ್ದು, ರಹೀಂ ಖಾನ್, ಡಿ.ಸುಧಾಕರ್, ಸಂತೋಷ್ ಎಸ್. ಲಾಡ್ ಹಾಗೂ ಎಸ್.ಎನ್.ಬೋಸರಾಜು, ಸಿದ್ದರಾಮಯ್ಯ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಭೋಧಿಸಿದ್ದಾರೆ.
Karnataka Cabinet Expansion Live: ಸಚಿವೆಯಾಗಿ ಲಕ್ಷ್ಮಿ ಹೆಬ್ಬಾಳಕರ್ ಪ್ರಮಾಣವಚನ

ಈ ಬಾರಿಯ ಸಚಿವ ಸಂಪುಟದಲ್ಲಿ ಏಕೈಕ ಮಹಿಳೆ ಸಚಿವೆಯಾಗಿ ಲಕ್ಷ್ಮಿ ಹೆಬ್ಬಾಳಕರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಭೋಧಿಸಿದ್ದು, ಶಿವಾಜಿ ಮಹರಾಜ್, ಡಾ.ಬಿ.ಆರ್ ಅಂಬೇಡ್ಕರ್, ಮತದಾರರ ಮೇಲೆ ಹಾಗೂ ತಾಯಿಯ ಹೆಸರಿನಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಮಹಿಳಾ ನಾಯಕಿಯಾಗಿರುವ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಪಕ್ಷ ಸಚಿವ ಸ್ಥಾನ ನೀಡುವ ಮೂಲಕ ಗೌರವ ಸೂಚಿಸಿದೆ.
Karnataka Cabinet Expansion Live: ನೂತನ ಸಚಿವರ ಪ್ರಮಾಣವಚನ

ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯುತ್ತಿದ್ದು, ತಮ್ಮಾಪುರ್ ರಾಮಪ್ಪ ಬಾಳಪ್ಪ, ಎಸ್.ಎಸ್.ಮಲ್ಲಿಕಾರ್ಜುನ, ಶಿವರಾಜ ತಂಗಡಗಿ, ಡಾ.ಶರಣಪ್ರಕಾಶ್ ಪಾಟೀಲ್ ಹಾಗೂ ಮಂಕಾಳ ವೈದ್ಯ ಸಿದ್ದರಾಮಯ್ಯ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಭೋಧಿಸಿದ್ದಾರೆ.
Karnataka Cabinet Expansion Live: ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ ಪ್ರಮಾಣವಚನ

ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಆರಂಭವಾಗಿದ್ದು, ದಿನೇಶ್ ಗುಂಡೂರಾವ್ ಶರಣಬಸಪ್ಪ ದರ್ಶನಾಪುರ ಹಾಗೂ ಶಿವಾನಂದ ಪಾಟೀಲ್, ಸಿದ್ದರಾಮಯ್ಯ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಭೋಧಿಸಿದ್ದಾರೆ.
Karnataka Cabinet Expansion Live: ಭಾವುಕರಾಗಿ ಪ್ರಮಾಣವಚನ ಸ್ವೀಕರಿಸಿದ ಕೆ.ಎನ್.ರಾಜಣ್ಣ

ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಆರಂಭವಾಗಿದ್ದು ಈಗಾಗಲೇ ಆರು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾರ್ಯಕ್ರಮ ಮುಂದುವರಿಸಿದ್ದು, ಕೆ.ಎನ್.ರಾಜಣ್ಣ, ಸಿದ್ದರಾಮಯ್ಯ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಸ್ವೀಕರದ ವೇಳೆ ಕೆ.ಎನ್.ರಾಜಣ್ಣ ಭಾವುಕರಾಗಿದ್ದಾರೆ.
Karnataka Cabinet Expansion Live: ಕೆ.ವೆಂಕಟೇಶ್, ಎಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ ಪ್ರಮಾಣವಚನ

ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಆರಂಭವಾಗಿದ್ದು, ಕೆ. ವೆಂಕಟೇಶ್, ಡಾ. ಎಚ್.ಸಿ.ಮಹದೇವಪ್ಪ ಹಾಗೂ ಈಶ್ವರ ಖಂಡ್ರೆ
ಸಿದ್ದರಾಮಯ್ಯ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಭೋಧಿಸಿದ್ದಾರೆ.
ಪ್ರಮಾಣವಚನ ಸ್ವೀಕರಿಸಿದ ಎಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ& ಚಲುವರಾಯಸ್ವಾಮಿ

ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಆರಂಭವಾಗಿದ್ದು, ಮೊದಲಿಗೆ ಎಚ್.ಕೆ.ಪಾಟೀಲ್, ಸಿದ್ದರಾಮಯ್ಯ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಳಿಕ ಕೃಷ್ಣ ಭೈರೇಗೌಡ, ಎನ್.ಚಲುವರಾಯಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಭೋಧಿಸಿದ್ದಾರೆ.
Karnataka Cabinet Expansion Live: ಪ್ರಮಾಣವಚನ ಕಾರ್ಯಕ್ರಮ ಆರಂಭ
ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜಭವನಕ್ಕೆ ಆಗಮಿಸಿದ್ದು, ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಆರಂಭಗೊಂಡಿದೆ. ಕಾರ್ಯಕ್ರಮದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸ್ಪೀಕರ್ ಯು.ಟಿ ಖಾದರ್ ಕಾಂಗ್ರೆಸ್‌ನ ಎಲ್ಲಾ ಶಾಸಕರು ಹಾಗೂ ಸಚಿವರು ಉಪಸ್ಥಿತರಿದ್ದಾರೆ.
Karnataka Cabinet Expansion Live: ರಾಜಭವನಕ್ಕೆ ಸಿಎಂ ಸಿದ್ದರಾಮಯ್ಯ
ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರಾಜಭವನದಲ್ಲಿ ಆಗಮಿಸಿದ್ದಾರೆ. ಇನ್ನು ಕಾಂಗ್ರೆಸ್‌ನ ಎಲ್ಲಾ ಶಾಸಕರು ಹಾಗೂ ಸಚಿವರು ಆಗಮಿಸಿದ್ದು, ನೂತನ ಸಚಿವರು ಕುಟುಂಬಸ್ಥರ ಸಮೇತ ರಾಜಭವನಕ್ಕೆ ಆಗಮಿಸಿದ್ದಾರೆ.
Karnataka Cabinet Expansion Live:ಕೆಲವೇ ಹೊತ್ತಿನಲ್ಲಿ ಪ್ರಮಾಣವಚನ ಸ್ವೀಕಾರ

ಇನ್ನೇನು ಕೆಲವೇ ಹೊತ್ತಿನಲ್ಲಿ ನೂತನ ಸಚಿವ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಗಣ್ಯರ ದಂಡು ರಾಜಭವನಕ್ಕೆ ಆಗಮಿಸಿದ್ದಾರೆ. ನೂತನ ಸಚಿವರು ಕುಟುಂಬಸ್ಥರ ಸಮೇತ ರಾಜಭವನಕ್ಕೆ ಆಗಮಿಸಿದ್ದಾರೆ. ಪಾಸ್ ಇದ್ದವರಿಗೆ ಮಾತ್ರ ರಾಜಭವನಕ್ಕೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇನ್ನು ರಾಜಭನವದ ಹೊರಗಡೆಯಿಂದ ಪ್ರಮಾಣ ವಚನ ಸ್ವೀಕಾರ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ ಮಾಡಲಾಗಿದೆ.
LIVE : ಭಾರತದ ಮೊದಲ ಪ್ರಧಾನಿ 'ಭಾರತ ರತ್ನ' ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯಸ್ಮರಣೆ, ಕೆಪಿಸಿಸಿ ಕಚೇರಿ. https://t.co/IjgKh12iZz
— Karnataka Congress (@INCKarnataka) May 27, 2023
Karnataka Cabinet Expansion Live: ಸಾಮಾಜಿಕ ನ್ಯಾಯ ಅಂದ್ರೆ ಅದು ನಮ್ಮ ಕಾಂಗ್ರೆಸ್ ಪಕ್ಷ
ಡಾ. ಎಂ.ಸಿ ಸುಧಾಕರ್ ಮಂತ್ರಿಯಾಗುತ್ತಿದ್ದಾರೆ. ನಮ್ಮ ಜಿಲ್ಲೆಯನ್ನು ಸಂಪೂರ್ಣವಾಗಿ ಅಭಿವೃದ್ಧಿ ಮಾಡುತ್ತೇವೆ.ರಾಜ್ಯದ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು. ಸಾಮಾಜಿಕ ನ್ಯಾಯ ಅಂದ್ರೆ ಅದು ನಮ್ಮ ಕಾಂಗ್ರೆಸ್ ಪಕ್ಷ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.
Karnataka Cabinet Expansion Live: ಹಾವೇರಿಯಲ್ಲಿ ಕಾರ್ಯಕರ್ತರ ಆಕ್ರೋಶ
ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಕೈತಪ್ಪಿದೆ. ಬಂಜಾರ ಕೋಟಾದಲ್ಲಿ ಶಾಸಕ ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಹಾವೇರಿಗೆ ಮಂತ್ರಿ ಸ್ಥಾನ ನೀಡದಿದ್ದರೆ ಸಿಎಂ ಹಾಗೂ ಡಿಸಿಎಂ ಜಿಲ್ಲೆಗೆ ಕಾಲಿಡಲು ಬಿಡಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
Karnataka Cabinet Expansion Live: ರಾಜಭವನಕ್ಕೆ ಆಗಮಿಸಿದ ಶಿವಣ್ಣ & ಗೀತಾ ಶಿವರಾಜ್ ಕುಮಾರ್

ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಮಧು ಬಂಗಾರಪ್ಪ ಪ್ರಮಾಣವಚನ ಹಿನ್ನೆಲೆಯಲ್ಲಿ ಸ್ಯಾಂಡಲ್‌ವುಡ್ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ರಾಜಭವನಕ್ಕೆ ಆಗಮಿಸಿದ್ದಾರೆ. ಮಧು ಬಂಗಾರಪ್ಪ ಸಹಾಯ ಮಾಡುವ ಗುಣದಿಂದ ಲೀಡರ್ ಆಗಿದ್ದಾರೆ. ಸಚಿವ ಸ್ಥಾನ ಕೂಡ ನಿಭಾಯಿಸುತ್ತಾರೆ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.
Karnataka Cabinet Expansion Live: ಇಂದು ಅಥವಾ ನಾಳೆ ಖಾತೆ ಹಂಚಿಕೆ

ಸಿದ್ದರಾಮಯ್ಯ ಸಚಿವ ಸಂಪುಟದ ನೂತನ ಸಚಿವರು ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದು, ಇಂದು ಅಥವಾ ನಾಳೆ ಖಾತೆ ಹಂಚಿಕೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬಳಿಕ ಖಾತೆ ಹಂಚಿಕೆ ಸರ್ಕಾರ ಹಾಗೂ ಹೈ ಕಮಾಂಡ್ ಮುಂದಿನ ಮತ್ತೊಂದು ಸವಾಲಾಗಿದೆ.
Karnataka Cabinet Expansion Live: ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನವಿಲ್ಲ-ಆರ್.ವಿ.ದೇಶಪಾಂಡೆ
ಸಿದ್ದರಾಮಯ್ಯ ಸಚಿವ ಸಂಪುಟದ ನೂತನ ಸಚಿವರು ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದು, ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಬಗ್ಗೆ ಮಾತನಾಡಿರುವ ಆರ್.ವಿ.ದೇಶಪಾಂಡೆ ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ಅಸಮಾಧಾನವಿಲ್ಲ. ಬ್ರಾಹ್ಮಣ ಸಮುದಾಯಕ್ಕೆ ಒಂದು ಕೊಡಲಾಗಿದೆ. ಹಾಗಾಗಿ ನನಗೆ ಸಚಿವ ಸ್ಥಾನ ಸಿಕ್ಕಿಲ್ಲ. ಒಬ್ಬರಿಗೆ ಕೊಟ್ಟಿರುವುದಕ್ಕೆ ಸಂತೋಷವಿದೆ ಎಂದಿದ್ದಾರೆ.
Karnataka Cabinet Expansion Live: ಲಕ್ಷ್ಮಣ ಸವದಿ ಬೆಂಬಲಿಗರ ಆಕ್ರೋಶ
ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಿಡಿಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ಹೆಚ್ಚು ಸ್ಥಾನ ಬರಲು ಲಕ್ಷ್ಮಣ ಸವದಿ ಕಾರಣ. ಆದರೆ ಲಕ್ಷ್ಮಣ ಸವದಿ ಮಂತ್ರಿ ಆಗದಂತೆ ಕೆಲವರು ಕುತಂತ್ರ ನಡೆಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷ್ಮಣ ಸವದಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.
Karnataka Cabinet Expansion Live: ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ-ದಿನೇಶ್ ಗುಂಡೂರಾವ್

ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತೆ. ನಾವು ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ವಿಪಕ್ಷಗಳು ಸ್ವಲ್ಪ ತಾಳ್ಮೆಯಿಂದ ಇರಬೇಕು. ಗೊಂದಲ ಸೃಷ್ಟಿಸುವ ಕೆಲಸವನ್ನು ವಿಪಕ್ಷಗಳು ಮಾಡಬಾರದು. ಸಚಿವ ಸಂಪುಟದಲ್ಲಿ ಅವಕಾಶ ನೀಡಿದಕ್ಕೆ ಧನ್ಯವಾದಗಳು. ಯಾವುದೇ ಖಾತೆ ನೀಡಿದರೂ ನಿಭಾಯಿಸುವೆ ಎಂದು ಬೆಂಗಳೂರಿನಲ್ಲಿ ನಿಯೋಜಿತ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Karnataka Cabinet Expansion Live: ಪಾಸ್ ಇದ್ದವರಿಗೆ ಮಾತ್ರ ರಾಜಭವನಕ್ಕೆ ಪ್ರವೇಶ

ರಾಜಭವನದಲ್ಲಿ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆಯಲ್ಲಿ ನೂತನ ಸಚಿವರ ಅಭಿಮಾನಿಗಳು, ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ರಾಜಭವನದ ಕಡೆ ಆಗಮಿಸುತ್ತಿದ್ದು, ಪಾಸ್ ಇದ್ದವರಿಗೆ ಮಾತ್ರ ರಾಜಭವನಕ್ಕೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇನ್ನು ರಾಜಭನವದ ಹೊರಗಡೆಯಿಂದ ನೆಚ್ಚಿನ ನಾಯಕರ ಪ್ರಮಾಣ ವಚನ ಸ್ವೀಕಾರ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ ಕೂಡ ಮಾಡಲಾಗಿದೆ.
Karnataka Cabinet Expansion Live: ರಾಜಭವನದ ಸುತ್ತ ಪೊಲೀಸ್ ಬಂದೋಬಸ್ತ್
ಇಂದು ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಹಿನ್ನೆಲೆಯಲ್ಲಿ ರಾಜಭವನದ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ರಾಜಭವನದ ಬ್ಯಾಕ್ ಗೇಟ್ ಹಾಗೂ ಶಾಸಕರ ಭವನಕ್ಕೆ ಸೇರಿ ಒಟ್ಟು 1,000ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
Karnataka Cabinet Expansion Live: ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ-ಲಕ್ಷ್ಮೀ ಹೆಬ್ಬಾಳ್ಕರ್
ನನಗೆ ಸಚಿವ ಸ್ಥಾನ ನೀಡಿದ ಕಾಂಗ್ರೆಸ್ ನಾಯಕರಿಗೆ ಧನ್ಯವಾದ ತಿಳಿಸುತ್ತೇನೆ. ಸಂಪುಟದಲ್ಲಿ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ನಾವು ನೀಡಿರುವ ಗ್ಯಾರಂಟಿ ಘೋಷಣೆಗಳನ್ನು ಶೀಘ್ರವೇ ಜಾರಿಗೆ ತರುತ್ತೇವೆ ಎಂದು ಬೆಂಗಳೂರಿನಲ್ಲಿ ನಿಯೋಜಿತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
Karnataka Cabinet Expansion Live: 24 ನೂತನ ಸಚಿವರ ಪ್ರಮಾಣವಚನ
ಸಿದ್ದರಾಮಯ್ಯ ನೂತನ ಸಚಿವ ಸಂಪುಟದಲ್ಲಿ ಎಚ್.ಕೆ.ಪಾಟೀಲ್ (ಗದಗ) ಕೃಷ್ಣ ಭೈರೇಗೌಡ(ಬೆಂಗಳೂರು), ಎನ್.ಚಲುವರಾಯಸ್ವಾಮಿ( ಮಂಡ್ಯ), ಕೆ. ವೆಂಕಟೇಶ್ (ಮೈಸೂರು) ಡಾ. ಎಚ್.ಸಿ.ಮಹದೇವಪ್ಪ , ಈಶ್ವರ ಖಂಡ್ರೆ ( ಬೀದರ್) ಕೆ.ಎನ್.ರಾಜಣ್ಣ( ತುಮಕೂರು), ದಿನೇಶ್ ಗುಂಡೂರಾವ್(ಬೆಂಗಳೂರು) ,ಶರಣಬಸಪ್ಪ ದರ್ಶನಾಪುರ( ಯಾದಗಿರಿ) ಶಿವಾನಂದ ಪಾಟೀಲ( ವಿಜಯಪುರ) ತಮ್ಮಾಪುರ್ ರಾಮಪ್ಪ ಬಾಳಪ್ಪ, ಎಸ್.ಎಸ್.ಮಲ್ಲಿಕಾರ್ಜುನ( ದಾವಣಗೆರೆ), ಶಿವರಾಜ ತಂಗಡಗಿ(ಕೊಪ್ಪಳ) ಡಾ.ಶರಣಪ್ರಕಾಶ್ ಪಾಟೀಲ್ (ಕಲಬುರಗಿ), ಮಂಕಾಳ ವೈದ್ಯ( ಉತ್ತರ ಕನ್ನಡ), ಲಕ್ಷ್ಮಿ ಹೆಬ್ಬಾಳಕರ್(ಬೆಳಗಾವಿ), ರಹೀಂ ಖಾನ್, ಡಿ.ಸುಧಾಕರ್(ಚಿತ್ರದುರ್ಗ) ಸಂತೋಷ್ ಎಸ್. ಲಾಡ್(ಧಾರವಾಡ), ಎಸ್.ಎನ್.ಬೋಸರಾಜು( ರಾಯಚೂರು) ಸುರೇಶ್ ಬಿಎಸ್, ಮಧು ಬಂಗಾರಪ್ಪ(ಶಿವಮೊಗ್ಗ) ಹಾಗೂ ಡಾ. ಎಂಸಿ ಸುಧಾಕರ್(ಚಿಕ್ಕಬಳ್ಳಾಪುರ) ಬಿ.ನಾಗೇಂದ್ರ( ಬಳ್ಳಾರಿ) ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಮ್ಯಾರಥಾನ್ ಸಭೆಗಳನ್ನು ನಡೆಸಿ ಸಂಪುಟ ವಿಸ್ತರಣೆಯ ಪಟ್ಟಿಗೆ ಹೈಕಮಾಂಡ್ ಕಡೆಯಿಂದ ಮೊಹರು ಹಾಕಿಸಿಕೊಂಡು ಬಂದಿದ್ದಾರೆ. ಸಂಭಾವ್ಯ ಪಟ್ಟಿಯಲ್ಲಿದ್ದ ಬಹುತೇಕ ಹೆಸರುಗಳು ಅಂತಿಮ ಪಟ್ಟಿಯಲ್ಲೂ ಇದೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
ಬೆಂಗಳೂರಲ್ಲಿ 'ಹೊಸ ಪಾದಚಾರಿ ನೀತಿ': ನೋಂದಣಿ ಆಗದವರ ವ್ಯಾಪಾರಕ್ಕಿಲ್ಲ ಅವಕಾಶ: ಡಿಕೆ ಶಿವಕುಮಾರ್ -
ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: ನೀರಿನ ಬಿಲ್ ಮೇಲಿನ ಬಡ್ಡಿ ಶೇ.100ರಷ್ಟು ಮನ್ನಾ; ಡಿಕೆಶಿ ಮಹತ್ವದ ಘೋಷಣೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ











Click it and Unblock the Notifications