Karnataka Cabinet Expansion Live : 10 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡ ಯಡಿಯೂರಪ್ಪ
ಬೆಂಗಳೂರು, ಫೆಬ್ರವರಿ 06 : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಮ್ಮ ಸಂಪುಟವನ್ನು ವಿಸ್ತರಣೆ ಮಾಡಿದರು. 10 ಶಾಸಕರು ಇಂದು ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಗೊಂಡರು.
ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಿತು. ರಾಜ್ಯಪಾಲ ವಜುಭಾಯಿ ವಾಲ ನೂತನ ಸಚಿವರಿಗೆ ಪ್ರಮಾಣ ವಚನವನ್ನು ಬೋಧಿಸಿದರು.

10 ಶಾಸಕರು ಸಂಪುಟ ದರ್ಜೆ ಸಚಿವರಾಗಿ ಯಡಿಯೂರಪ್ಪ ಸಂಪುಟವನ್ನು ಗುರುವಾರ ಸೇರಿದರು. ಯಾವ ಸಚಿವರಿಗೆ ಯಾವ ಖಾತೆ ಸಿಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. 10 ಶಾಸಕರ ಸೇರ್ಪಡೆ ಬಳಿಕ ಯಡಿಯೂರಪ್ಪ ಸಂಪುಟದಲ್ಲಿ 6 ಸ್ಥಾನಗಳು ಖಾಲಿ ಉಳಿದಿವೆ.
ಉಪ ಚುನಾವಣೆಯಲ್ಲಿ ಗೆದ್ದ 12 ಬಿಜೆಪಿ ಶಾಸಕರಲ್ಲಿ 10 ಜನರು ಯಡಿಯೂರಪ್ಪ ಸಂಪುಟಕ್ಕೆ ಸೇರಿದ್ದಾರೆ. ಉಪ ಚುನಾವಣೆಯಲ್ಲಿ ಗೆದ್ದರೂ ಅಥಣಿಯ ಮಹೇಶ್ ಕುಮಟಳ್ಳಿ ಮತ್ತು ರಾಣೆಬೆನ್ನೂರಿನ ಅರುಣ್ ಕುಮಾರ್ ಪೂಜಾರಿ ಸಂಪುಟಕ್ಕೆ ಸೇರ್ಪಡೆಗೊಂಡಿಲ್ಲ. ಮೂಲ ಬಿಜೆಪಿಯ ಯಾವ ಶಾಸಕರು ಸಹ ಸಂಪುಟಕ್ಕೆ ಇಂದು ಸೇರಿಲ್ಲ.
ಪ್ರಮಾಣ ವಚನ ಸಮಾರಂಭಕ್ಕೆ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಮತ್ತು ಮಾಜಿ ಶಾಸಕ ಸಿ. ಪಿ. ಯೋಗೇಶ್ವರ ಗೈರಾಗಿದ್ದಾರೆ.
ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಕೆ. ಆರ್. ಪೇಟೆ ಕ್ಷೇತ್ರದ ಶಾಸಕ ನಾರಾಯಣ ಗೌಡ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕ ಕೆ. ಗೋಪಾಲಯ್ಯ ಸಂಪುಟ ದರ್ಜೆ ಸಚಿವರಾಗಿ ದೇವರು ಮತ್ತು ತಂದೆ-ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಹಿರೇಕೆರೂರು ಶಾಸಕ ಬಿ. ಸಿ. ಪಾಟೀಲ್ ಸಂಪುಟ ದರ್ಜೆ ಸಚಿವರಾಗಿ ದೇವರು, ಕ್ಷೇತ್ರದ ಜನರು, ಜಗಜ್ಯೋತಿ ಬಸವೇಶ್ವರರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಕೆ. ಆರ್. ಪುರ ಕ್ಷೇತ್ರದ ಶಾಸಕ ಬೈರತಿ ಬಸವರಾಜ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಡಾ. ಕೆ. ಸುಧಾಕರ್ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಯಶವಂತಪುರ ಕ್ಷೇತ್ರದ ಶಾಸಕ ಎಸ್. ಟಿ. ಸೋಮಶೇಖರ್ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ರಮೇಶ್ ಜಾರಕಿಹೊಳಿ ಕಾಂಗ್ರೆಸ್‌ನಲ್ಲಿದ್ದಾಗ ಸಿದ್ದರಾಮಯ್ಯ ಸಂಪುಟದಲ್ಲಿಯೂ ಸಚಿವರಾಗಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಸಹ ಸಚಿವರಾಗಿದ್ದರು.
ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಗೊಳ್ಳುತ್ತಿರುವವರು ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ 2018ರ ಚುನಾವಣೆಯಲ್ಲಿ ಗೆದ್ದು ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದು ಬಂದವರು.
13 ಶಾಸಕರು ಯಡಿಯೂರಪ್ಪ ಸಂಪುಟ ಸೇರಬೇಕಾಗಿತ್ತು. ಆದರೆ, ಹೈಕಮಾಂಡ್ ತಡೆ ನೀಡಿದ ಹಿನ್ನಲೆಯಲ್ಲಿ 10 ಶಾಸಕರು ಮಾತ್ರ ಸಂಪುಟಕ್ಕೆ ಸೇರುತ್ತಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಹಿನ್ನಲೆಯಲ್ಲಿ ರಾಜಭವನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 3500 ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.
ಸಂಪುಟ ಸೇರುವ ಶಾಸಕರು : ಶಿವರಾಂ ಹೆಬ್ಬಾರ್ (ಯಲ್ಲಾಪುರ), ಬಿ. ಸಿ. ಪಾಟೀಲ್ (ಹಿರೇಕೆರೂರು), ಕೆ. ಗೋಪಾಲಯ್ಯ (ಮಹಾಲಕ್ಷ್ಮೀ ಲೇಔಟ್), ನಾರಾಯಣ ಗೌಡ (ಕೆ. ಆರ್. ಪೇಟೆ), ಶ್ರೀಮಂತ ಪಾಟೀಲ್ (ಕಾಗವಾಡ)
ಸಂಪುಟ ಸೇರುವ ಶಾಸಕರು : ಎಸ್. ಟಿ. ಸೋಮಶೇಖರ್ (ಯಶವಂತಪುರ), ರಮೇಶ್ ಜಾರಕಿಹೊಳಿ (ಗೋಕಾಕ್), ಆನಂದ್ ಸಿಂಗ್ (ವಿಜಯನಗರ), ಡಾ. ಕೆ. ಸುಧಾಕರ್ (ಚಿಕ್ಕಬಳ್ಳಾಪುರ), ಬಿ. ಎ. ಬಸವರಾಜ (ಕೆ. ಆರ್. ಪುರ).












Click it and Unblock the Notifications