ಶಾಸಕರಿಗೆ ನಿರಾಸೆ : ಸಿದ್ದರಾಮಯ್ಯ ಬರಿಗೈಯಲ್ಲಿ ವಾಪಸ್
ಬೆಂಗಳೂರು, ಸೆಪ್ಟೆಂಬರ್ 24 : ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಗೆ ಮುಹೂರ್ತ ಕೂಡಿಬಂದಿಲ್ಲ. ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಲಿ ಕೈಯಲ್ಲಿ ಗುರುವಾರ ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮತ್ತೊಮ್ಮೆ ನಿರಾಸೆಯಾಗಿದೆ.
ಬುಧವಾರ ಸಂಜೆ ದೆಹಲಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸುವ ಉದ್ದೇಶವಿತ್ತು. ಆದರೆ, ರಾಹುಲ್ ಗಾಂಧಿ ಮತ್ತು ದಿಗ್ವಿಜಯ್ ಸಿಂಗ್ ಅವರು ವಿದೇಶದಲ್ಲಿರುವ ಕಾರಣ ಸಂಪುಟ ವಿಸ್ತರಣೆ ಪುನಃ ಮುಂದಕ್ಕೆ ಹೋಯಿತು' ಎಂದು ಹೇಳಿದ್ದಾರೆ. [ಉಪ್ಪಾರ ಸಮುದಾಯಕ್ಕೊಂದು ಸಚಿವ ಸ್ಥಾನ ನೀಡಿ]
ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸದ್ಯ 4 ಸಚಿವ ಸ್ಥಾನಗಳು ಖಾಲಿ ಇವೆ. ನಾಲ್ಕು ಸ್ಥಾನಗಳಿಗೆ ಹಲವಾರು ಆಕಾಂಕ್ಷಿಗಳಿದ್ದಾರೆ. ಆದ್ದರಿಂದ ಸಂಪುಟ ಪುನಾರಚನೆ ಮಾಡಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದು, ಎರಡು ಪಟ್ಟಿ ಹಿಡಿದು ದೆಹಲಿಗೆ ತೆರಳಿದ್ದರು. ಆದರೆ, ಹೈಕಮಾಂಡ್ ನಾಯಕರೊಂದಿಗೆ ಮಾತುಕತೆ ನಡೆಸದ ಹಿನ್ನೆಲೆಯಲ್ಲಿ ಕೆಲವು ದಿನಗಳ ಮಟ್ಟಿಗೆ ಸಂಪುಟ ವಿಸ್ತರಣೆ ಕಸರತ್ತು ಮುಂದಕ್ಕೆ ಹೋಗಿದೆ. [ಅ.6, 7ರಂದು ರಾಹುಲ್ ರಾಜ್ಯ ಪ್ರವಾಸ]
ಅಂದಹಾಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಅಕ್ಟೋಬರ್ 6 ಮತ್ತು 7ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲಿದ್ದಾರೆ. ರಾಹುಲ್ ಭೇಟಿ ಬಳಿಕ ಮತ್ತೊಮ್ಮೆ ದೆಹಲಿಗೆ ತೆರಳಿ ಸಿದ್ದರಾಮಯ್ಯ ಅವರು ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಬರಿಗೈಯಲ್ಲಿ ಸಿದ್ದರಾಮಯ್ಯ ವಾಪಸ್
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರಿಗೈಯಲ್ಲಿ ಬೆಂಗಳೂರಿಗೆ ಗುರುವಾರ ಸಂಜೆ ವಾಪಸ್ ಆಗಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಸದ್ಯದ ಮಟ್ಟಿಗೆ ಮುಂದಕ್ಕೆ ಹೋಗಿದೆ. ಅಕ್ಟೋಬರ್ 10ರ ನಂತರ ಈ ಕುರಿತ ಚಟುವಟಿಕೆಗಳಿಗೆ ಮತ್ತೊಮ್ಮೆ ಚಾಲನೆ ಸಿಗುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ಹೇಳುವುದೇನು?
ಸ್ವಚ್ಛ ಭಾರತ ಅಭಿಯಾನದ ಉಪ ಸಮಿತಿ ಸಭೆಯ ಬಳಿಕ ದೆಹಲಿಯಲ್ಲಿ ಬುಧವಾರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸುವ ಉದ್ದೇಶವಿತ್ತು. ಆದರೆ, ರಾಹುಲ್ ಗಾಂಧಿ ಮತ್ತು ದಿಗ್ವಿಜಯ್ ಸಿಂಗ್ ಅವರು ವಿದೇಶದಲ್ಲಿರುವ ಕಾರಣ ಸಂಪುಟ ವಿಸ್ತರಣೆ ಪುನಃ ಮುಂದಕ್ಕೆ ಹೋಯಿತು' ಎಂದು ಹೇಳಿದ್ದಾರೆ.

ರಾಹುಲ್, ಸಿಂಗ್ ವಿದೇಶದಲ್ಲಿದ್ದಾರೆ
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಪುತ್ರಿಯನ್ನು ಭೇಟಿ ಮಾಡಲು ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಅವರು ಮಂಗಳವಾರ ಸ್ವದೇಶಕ್ಕೆ ಮರಳುವ ಕಾರ್ಯಕ್ರಮವಿತ್ತು. ಆದರೆ, ಅವರು ತಿಂಗಳ ಅಂತ್ಯದ ತನಕ ವಾಪಸ್ ಬರುತ್ತಿಲ್ಲ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ. ಆದ್ದರಿಂದ, ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲು ಸಿದ್ದರಾಮಯ್ಯ ಅವರಿಗೆ ಸಾಧ್ಯವಾಗಿಲ್ಲ.

ಎರಡು ಪಟ್ಟಿ ಸಿದ್ಧವಾಗಿದೆ
ಪಕ್ಷದ ಮೂಲಗಳ ಮಾಹಿತಿ ಪ್ರಕಾರ ಸಿದ್ದರಾಮಯ್ಯ ಅವರು ಎರಡು ಪಟ್ಟಿಗಳೊಂದಿಗೆ ದೆಹಲಿಗೆ ತೆರಳಿದ್ದರು. ಸಂಪುಟಕ್ಕೆ ನಾಲ್ವರು ಸಚಿವರನ್ನು ಸೇರಿಸಿಕೊಳ್ಳಲು ಅವಕಾಶವಿದೆ. ಸಂಪುಟ ಪುನಾರಚನೆ ಮಾಡಿದರೆ ಕೆಲವು ಸಚಿವರನ್ನು ಕೈಬಿಟ್ಟು ಹೊಸಬರನ್ನು ಸೇರಿಸಿಕೊಳ್ಳಬಹುದು. ಈ ಎರಡೂ ಪಟ್ಟಿಗಳನ್ನು ಹಿಡಿದುಕೊಂಡೇ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದರು.

ರಾಹುಲ್ ಭೇಟಿ ಬಳಿಕ ಮುಂದಿನ ತೀರ್ಮಾನ
ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಅಕ್ಟೋಬರ್ 6 ಮತ್ತು 7 ರಂದು ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನಃ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.

ದೆಹಲಿಗೆ ಹೋದವರಿಗೆ ನಿರಾಸೆ
ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ನಿರೀಕ್ಷೆಯಲ್ಲಿ ಮಂತ್ರಿ ಪದವಿಯ ಆಕಾಂಕ್ಷಿಗಳು ದೆಹಲಿಗೆ ತೆರಳಿದ್ದರು. ಆದರೆ, ಅವರಿಗೆ ನಿರಾಸೆ ಉಂಟಾಗಿದೆ. ಎ. ಮಂಜು, ಮಾಲಕ ರೆಡ್ಡಿ, ವೀರಣ್ಣ ಮತ್ತಿಕಟ್ಟಿ, ಶಿವಮೂರ್ತಿ ನಾಯಕ, ಕೆ.ಬಿ. ಕೋಳಿವಾಡ, ರಾಜಶೇಖರ ಹುಮ್ನಾಬಾದ್, ಎಚ್.ವೈ. ಮೇಟಿ, ಬಸವರಾಜ ರಾಯರೆಡ್ಡಿ ಸೇರಿದಂತೆ ಅನೇಕ ಶಾಸಕರು ದೆಹಲಿಗೆ ತೆರಳಿದ್ದರು.












Click it and Unblock the Notifications