Karnataka Cabinet Expansion: ಲೋಕ ಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಭಾಗವಾಗಿ ನೂತನ ಸಚಿವರು ಇಂದು ಬೆಂಗಳೂರಿನ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರ ಸಮ್ಮುಖದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಸಚಿವ ಸಂಪುಟಕ್ಕೆ ಹೊಸ ಮುಖಗಳನ್ನು ಸೇರ್ಪಡೆಗೊಳಿಸುವ ಮೂಲಕ ಆಡಳಿತಕ್ಕೆ ಮತ್ತಷ್ಟು ಬಲ ತುಂಬುವ ಪ್ರಯತ್ನ ಮಾಡಲಾಗಿದೆ.

ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಶಾಸಕರು, ಹಿರಿಯ ಕಾಂಗ್ರೆಸ್ ನಾಯಕರು, ಅಧಿಕಾರಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿದ್ದರು. ರಾಜ್ಯಪಾಲರು ನೂತನ ಸಚಿವರಿಗೆ ಹುದ್ದೆ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

Karnataka Cabinet Expansion

ಸಂಪುಟ ವಿಸ್ತರಣೆಗೂ ಮುನ್ನ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಹಲವು ಸುತ್ತಿನ ಚರ್ಚೆಗಳು ನಡೆದಿದ್ದವು. ಪ್ರಾದೇಶಿಕ, ಜಾತಿ ಹಾಗೂ ರಾಜಕೀಯ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಸಚಿವರ ಆಯ್ಕೆ ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಸಚಿವ ಸ್ಥಾನ ಕೈತಪ್ಪಿದ ಹಲವು ಕಾಂಗ್ರೆಸ್ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಕೆಲವರು ಬಹಿರಂಗವಾಗಿಯೇ ತಮ್ಮ ಬೇಸರ ಹೊರಹಾಕಿದ್ದಾರೆ. ಕೆಲವು ಕಡೆಗಳಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿರುವ ವರದಿಗಳೂ ಕೇಳಿಬಂದಿವೆ. ಕೊನೆಯ ಕ್ಷಣದಲ್ಲಿ ಸಚಿವರ ಪಟ್ಟಿಯಲ್ಲಿ ಬದಲಾವಣೆ ನಡೆದಿರುವುದೂ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಪ್ರಮಾಣ ವಚನ ಸ್ವೀಕರಿಸಿದ ಸಚಿವರು

ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅವರು 19 ಶಾಸಕರಿಗೆ ಸಚಿವರಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ನೂತನ ಸಚಿವರುಗಳಾಗಿ, ಪಿ. ಎಂ. ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ, ರುದ್ರಪ್ಪ ಲಮಾಣಿ, ಕೆ. ಎಸ್. ಬಸವಂತಪ್ಪ, ಬಿ. ನಾಗೇಂದ್ರ, ಟಿ. ರಘುಮೂರ್ತಿ, ಬಿ. ಝಡ್. ಜಮೀರ್ ಅಹಮದ್ ಖಾನ್, ರಿಜ್ವಾನ್ ಅರ್ಷದ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಪುಟ್ಟರಂಗಶೆಟ್ಟಿ, ಎಸ್. ಎಸ್. ಮಲ್ಲಿಕಾರ್ಜುನ್, ಡಾ. ಅಜಯ್ ಸಿಂಗ್, ಎನ್. ಚಲುವರಾಯ ಸ್ವಾಮಿ, ಕೆ. ಎಂ. ಶಿವಲಿಂಗೇಗೌಡ, ಹೆಚ್. ಸಿ. ಬಾಲಕೃಷ್ಣ, ಬಸವರಾಜ್ ರಾಯರೆಡ್ಡಿ, ವಿಜಯಾನಂದ ಕಾಶಪ್ಪನವರ್ ಮತ್ತು ಲಕ್ಷ್ಮಣ ಸವದಿ ಅವರು ಗೌಪ್ಯತಾ ಪ್ರಮಾಣ ವಚನ ಸ್ವೀಕರಿಸಿದರು.

* ಪಿ. ಎಂ. ನರೇಂದ್ರಸ್ವಾಮಿ - ಡಾ.ಬಾಬಾ ಸಾಹೇಬ್ ಅಂಬೇಡ್ಕರ್, ಗಂಗಾದರ ಅಜ್ಜಯ್ಯ ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

​* ಶಿವರಾಜ್ ತಂಗಡಗಿ - ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿ ಶ್ರದ್ಧಾಪೂರಕವಾಗಿ ಪ್ರತಿಜ್ಞೆ ಮಾಡಿದರು ‌

​* ರುದ್ರಪ್ಪ ಲಮಾಣಿ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

​* ಕೆ. ಎಸ್. ಬಸವಂತಪ್ಪ - ಬಸವೇಶ್ವರ ರ ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

​* ಬಿ. ನಾಗೇಂದ್ರ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

​* ಟಿ. ರಘುಮೂರ್ತಿ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

​* ಬಿ. ಝಡ್. ಜಮೀರ್ ಅಹಮದ್ ಖಾನ್ - ಅಲ್ಲಾ ಹಾಗೂ ಅವರ ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

​* ರಿಜ್ವಾನ್ ಅರ್ಷದ್ - ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿ ಪ್ರಮಾಣ ವಚನ ಸ್ವೀಕರಿಸಿದರು

* ಸಂತೋಷ್ ಲಾಡ್ - ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿ ಪ್ರಮಾಣ ವಚನ ಸ್ವೀಕರಿಸಿದರು

​* ಮಧು ಬಂಗಾರಪ್ಪ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

* ಪುಟ್ಟರಂಗಶೆಟ್ಟಿ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

* ಎಸ್. ಎಸ್. ಮಲ್ಲಿಕಾರ್ಜುನ್ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

​* ಡಾ. ಅಜಯ್ ಸಿಂಗ್ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

​* ಎನ್. ಚಲುವರಾಯ ಸ್ವಾಮಿ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

​* ಕೆ. ಎಂ. ಶಿವಲಿಂಗೇಗೌಡ - ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿದರು ‌

​* ಹೆಚ್. ಸಿ. ಬಾಲಕೃಷ್ಣ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

* ಬಸವರಾಜ್ ರಾಯರೆಡ್ಡಿ - ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿ ಪ್ರಮಾಣ ವಚನ ಸ್ವೀಕರಿಸಿದರು

​* ವಿಜಯಾನಂದ ಕಾಶಪ್ಪನವರ್ - ದೇವರ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು

​* ಲಕ್ಷ್ಮಣ ಸವದಿ - ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

​ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಬಿ.ಕೆ. ಹರಿ ಪ್ರಸಾದ್, ಸೇರಿದಂತೆ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಹಿರಿಯ ನಾಯಕರು ಹಾಗೂ ವಿವಿಧ ಇಲಾಖೆಯ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+