• search

ಸಂಪುಟ ರಚನೆ ಒಪ್ಪಂದ ಅಂತಿಮ: ಜೆಡಿಎಸ್ ಬಿಗಿಪಟ್ಟಿಗೆ ಮಣಿದ ಕಾಂಗ್ರೆಸ್

By ವಿಕ್ಕಿ ನಂಜಪ್ಪ
Subscribe to Oneindia Kannada
For Quick Alerts
ALLOW NOTIFICATIONS
For Daily Alerts

  ಬೆಂಗಳೂರು, ಮೇ 31: ಸಂಪುಟ ರಚನೆ ಸಂಬಂಧ ಕಾಂಗ್ರೆಸ್ ಮತ್ತು ಜೆಡಿಎಸ್ ಬಹುತೇಕ ಸಹಮತಕ್ಕೆ ಬಂದಿದ್ದು, ಅಂತಿಮ ಪಟ್ಟಿ ಸಿದ್ಧವಾಗಿದೆ.

  ಜೆಡಿಎಸ್ ಹಣಕಾಸು ಖಾತೆಯನ್ನು ತನ್ನಲ್ಲಿ ಇರಿಸಿಕೊಳ್ಳಲಿದೆ. ಕಾಂಗ್ರೆಸ್ ಗೃಹಖಾತೆಯನ್ನು ಪಡೆದುಕೊಳ್ಳಲಿದೆ ಎಂದು ಮೂಲಗಳು 'ಒನ್ ಇಂಡಿಯಾ'ಕ್ಕೆ ತಿಳಿಸಿವೆ.

  ಕಾಂಗ್ರೆಸ್‌ ನಾಯಕರ ವಿರುದ್ಧ ಕುಮಾರಸ್ವಾಮಿ ಅಸಮಾಧಾನ?

  ಎಚ್‌ ಡಿ ಕುಮಾರಸ್ವಾಮಿ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರದ ನೂತನ ಸಚಿವ ಸಂಪುಟವು ವಾರಾಂತ್ಯದ ವೇಳೆಗೆ ಪ್ರಮಾಣವಚನ ಸ್ವೀಕರಿಸುವ ನಿರೀಕ್ಷೆಯಿದೆ. ಒಪ್ಪಂದ ಪ್ರಕಾರ ಕಾಂಗ್ರೆಸ್‌ ಭಾರಿ ಕೈಗಾರಿಕೆ, ಐಟಿ/ಬಿಟಿ, ಶಿಕ್ಷಣ ಮತ್ತು ಪ್ರವಾಸೋದ್ಯಮಗಳನ್ನು ತನ್ನಲ್ಲಿ ಉಳಿಸಿಕೊಳ್ಳಲಿದೆ.

  Karnataka cabinet: JD(S) gets finance, Congress home ministry

  ಇನ್ನೊಂದೆಡೆ ಜೆಡಿಎಸ್ ಲೋಕೋಪಯೋಗಿ, ಸಹಕಾರ ವ್ಯವಹಾರ ಮತ್ತು ಕಂದಾಯ ಖಾತೆಗಳನ್ನು ಪಡೆದುಕೊಳ್ಳಲಿದೆ. ಮುಖ್ಯಮಂತ್ರಿ ಸೇರಿದಂತೆ ಜೆಡಿಎಸ್ 12 ಖಾತೆಗಳನ್ನು ಹೊಂದಲಿದೆ. ಉಪಮುಖ್ಯಮಂತ್ರಿ ಸೇರಿದಂತೆ 22 ಖಾತೆಗಳು ಕಾಂಗ್ರೆಸ್ ಪಾಲಾಗಲಿವೆ.

  ಮೈತ್ರಿ ಸರಕಾರವೇನೂ ನಿದ್ದೆ ಮಾಡ್ತಿಲ್ಲ ಎಂದ ಎಚ್.ಡಿ.ಕುಮಾರಸ್ವಾಮಿ

  ತೀವ್ರ ಚರ್ಚೆಯ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಖಾತೆ ಹಂಚಿಕೆ ವಿಚಾರದಲ್ಲಿ ಒಮ್ಮತಕ್ಕೆ ಬಂದಿದ್ದಾರೆ. ನವದೆಹಲಿಯಲ್ಲಿ ಗುಲಾಂ ನಬಿ ಆಜಾದ್ ಜತೆ ನಡೆಸಿದ ಸಭೆ ವೇಳೆ ಹಣಕಾಸು ಖಾತೆಯನ್ನು ತಮ್ಮ ಪಕ್ಷಕ್ಕೆ ನೀಡದೆ ಇದ್ದರೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬೆದರಿಕೆ ಒಡ್ಡಿದ್ದರು ಎನ್ನಲಾಗಿದೆ.

  ಹಣಕಾಸು ಖಾತೆಯನ್ನು ತಮಗೆ ನೀಡಿದರೆ ಪ್ರಣಾಳಿಕೆಯಲ್ಲಿ ನೀಡಿದ 53,000 ಕೋಟಿ ರೂ. ರೈತರ ಸಾಲಮನ್ನಾ ಭರವಸೆಯನ್ನು ಅನುಷ್ಠಾನಗೊಳಿಸಲು ಸಾಧ್ಯ ಎಂಬ ಸಲುವಾಗಿ ಕುಮಾರಸ್ವಾಮಿ ಅವರು ಪಟ್ಟುಹಿಡಿದಿದ್ದರು.

  ಸಾಲಮನ್ನಾ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಂತಿಮ ನಿರ್ಧಾರ ತೆಗೆದುಕೊಂಡಿದ್ದು, ಎರಡು ಹಂತಗಳಲ್ಲಿ ಸಾಲಮನ್ನಾ ಮಾಡುವುದಾಗಿ ತಿಳಿಸಿದ್ದಾರೆ. ಅದರ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು 15 ದಿನಗಳ ಕಾಲಾವಕಾಶ ಕೇಳಿದ್ದಾರೆ.

  ಸಂಪುರ ರಚನೆ ಸಂಬಂಧ ಈಗಾಗಲೇ ಸಾಕಷ್ಟು ನಕಾರಾತ್ಮಕ ಅಭಿಪ್ರಾಯಗಳಿಗೆ ಒಳಗಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರವು ಇನ್ನೂ ವಿಳಂಬ ಮಾಡಲು ಬಯಸಿಲ್ಲ. 2019ರ ಲೋಕಸಭೆ ಚುನಾವಣೆ ವೇಳೆಗೆ ಸಮ್ಮಿಶ್ರ ಸರ್ಕಾರದ ಉಳಿವು ಎರಡೂ ಪಕ್ಷಗಳಿಗೆ ಮಹತ್ವದ್ದಾಗಿದೆ.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  The JD(S) will get to keep the finance portfolio, while the Congress would handle the home ministry, sources tell OneIndia.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more