Karnataka Cabinet: ಈ ಪ್ರಮುಖ ನಾಯಕರಿಗೆ ಸಚಿವ ಸ್ಥಾನ ನಿರಾಕರಣೆ- ಯಾರು ತಿಳಿಯಿರಿ
ಬೆಂಗಳೂರು, ಮೇ 27: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು 24 ಸಚಿವ ಸ್ಥಾನಗಳಿಗೆ ಶಾಸಕರ ಹೆಸರನ್ನು ಅಂತಿಮಗೊಳಿಸಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದೆ. ರಾಜ್ಯದ ಹಲವಾರು ಪ್ರಮುಖ ನಾಯಕರಿಗೆ ಕ್ಯಾಬಿನೆಟ್ ಸ್ಥಾನವನ್ನು ನಿರಾಕರಿಸಿದೆ.
ಆರ್.ವಿ.ದೇಶಪಾಂಡೆ
ಒಂಬತ್ತು ಬಾರಿ ಶಾಸಕರಾಗಿರುವ, ಮಾಜಿ ಸಚಿವರಾಗಿದ್ದ ಇವರು ಹೊಸದಾಗಿ ಆಯ್ಕೆಯಾದ ಶಾಸಕರಿಗೆ ಪ್ರಮಾಣ ವಚನ ಬೋಧಿಸಲು ಹಂಗಾಮಿ ಸ್ಪೀಕರ್ ಆಗಿದ್ದರು. ಹಳಿಯಾಳದ 76 ವರ್ಷದ ಶಾಸಕರಿಗೆ ಸ್ಪೀಕರ್ ಸ್ಥಾನವನ್ನು ನೀಡಲಾಯಿತು ಎಂದು ವರದಿಯಾಗಿತ್ತು. ಆದರೆ, ಅವರ ಅದನ್ನು ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಅವರು ಕ್ಯಾಬಿನೆಟ್ ಸಚಿವ ಸ್ಥಾನದ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದರು. ಆದರೆ ಕಾಂಗ್ರೆಸ್ ಅವರ ಬೇಡಿಕೆಯನ್ನು ನಿರಾಕರಿಸಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಅವರಿಗೆ ಹೆಚ್ಚಿನ ವಯಸ್ಸಾಗಿದೆ. ಈ ಹಿನ್ನೆಲೆಯಲ್ಲಿ ಹೊಸಬರಿಗೆ ಸ್ಥಾನ ನೀಡಬೇಕು ಎಂದು ಹೇಳಲಾಗಿದೆ. ಆದರೆ, ಆರ್‌ವಿ ದೇಶಪಾಂಡೆ ಅವರನ್ನು ಸಚಿವರನ್ನಾಗಿ ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಒತ್ತಾಯ ಮಾಡಿದ್ದರು. ಇದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ಲಕ್ಷ್ಮಣ ಸವದಿ
ಬೆಳಗಾವಿ ಜಿಲ್ಲೆಯ ಅಥಣಿಯ 63 ವರ್ಷದ ನಾಯಕ ಲಕ್ಷ್ಮಣ ಸವದಿ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತು. ಆ ನಂತರ ಬಿಜೆಪಿ ನಾಯಕತ್ವದ ವಿರುದ್ಧ ಅಸಮಾಧಾನಗೊಂಡು ಅವರು ಕಾಂಗ್ರೆಸ್ ಸೇರಿದರು. ಕಾಂಗ್ರೆಸ್ ಅವರನ್ನು ಮುಕ್ತವಾಗಿ ಬರಮಾಡಿಕೊಂಡಿತು.

ಅಥಣಿಯಿಂದ ಟಿಕೆಟ್ ನೀಡಿತು. ಈ ಕ್ಷೇತ್ರದಿಂದ ಲಕ್ಷ್ಮಣ ಸವದಿ ಅವರು ಅಭೂತಪೂರ್ವವಾಗಿ ಗೆದ್ದು ಬೀಗಿದರು. ಅಥಣಿಯ ನೆರೆಯ ಕ್ಷೇತ್ರಗಳಾದ ಕಾಗವಾಡ ಮತ್ತು ಕುಡಚಿ ವಿಧಾನಸಭಾ ಕ್ಷೇತ್ರಗಳಲ್ಲಿ ವ್ಯಾಪಕ ಪ್ರಚಾರ ನಡೆಸಿದರು. ಲಿಂಗಾಯತ ನಾಯಕರಾಗಿರುವ ಅವರು ಕ್ಯಾಬಿನೆಟ್ ಸ್ಥಾನದ ನಿರೀಕ್ಷೆಯಲ್ಲಿದ್ದರು. ಆದರೆ ಪಕ್ಷವು ಅವರಿಗೆ ಸ್ಥಾನ ನೀಡಲು ನಿರಾಕರಿಸಿದೆ. ಸಚಿವ ಸ್ಥಾನ ನಿರಾಕರಿಸಿದ್ದಕ್ಕೆ ಅವರ ಬೆಂಬಲಿಗರು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕಾಶ ಹುಕ್ಕೇರಿ
ಪ್ರಕಾಶ ಹುಕ್ಕೇರಿ ಅವರು ಹಿರಿಯ ಕಾಂಗ್ರೆಸ್ ನಾಯಕರಾಗಿದ್ದಾರೆ. ಮಾಜಿ ಸಚಿವರು, ಶಾಸಕರು ಮತ್ತು ಸಂಸದರು ಆಗಿದ್ದಾರೆ. ಪ್ರಸ್ತುತ ವಿಧಾನಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 76 ವರ್ಷದ ಅವರು ಎಂಎಲ್‌ಸಿ ಕೋಟಾದಲ್ಲಿ ಕ್ಯಾಬಿನೆಟ್ ಸ್ಥಾನವನ್ನು ನಿರೀಕ್ಷಿಸುತ್ತಿದ್ದರು. ಆದರೆ ವಯಸ್ಸಿನ ವಿಚಾರವಾಗಿ ಕಾಂಗ್ರೆಸ್ ಅವರಿಗೆ ಸಚಿವ ಸ್ಥಾನವನ್ನು ನಿರಾಕರಿಸಿದೆ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರು.

ಟಿ.ಬಿ.ಜಯಚಂದ್ರ
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ಸಂಪುಟ ಸ್ಥಾನವನ್ನು ನಿರಾಕರಿಸಲಾಗಿದೆ. 6 ಬಾರಿ ಶಾಸಕರಾಗಿರುವ ಇವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರು. 2018 ರ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ, ಅವರು ಸಿರಾ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ.
ಬಿ ಕೆ ಹರಿಪ್ರಸಾದ್
ಬಿಲ್ಲವ ಸಮುದಾಯಕ್ಕೆ ಸೇರಿದ 68 ವರ್ಷದ ಬಿಕೆ ಹರಿಪ್ರಸಾದ್ ಅವರು ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದರು. ಅವರು ಹಾಲಿ ಎಂಎಲ್‌ಸಿ ಆಗಿದ್ದಾರೆ. ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಲು ಹಲವು ದಿನಗಳಿಂದ ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದರು. ಅವರೂ ಅವರ ಮನವಿಯನ್ನು ಹೈಕಮಾಂಡ್‌ಗೆ ಸ್ವೀಕರಿಸಿಲ್ಲ. ಹರಿಪ್ರಸಾದ್ ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ.
ಅಜಯ್ ಸಿಂಗ್, ಅಶೋಕ್ ಪಟ್ಟಣ್, ಗಣೇಶ್ ಹುಕ್ಕೇರಿ, ರಿಜ್ವಾನ್ ಅರ್ಷದ್, ವಿನಯ್ ಕುಲಕರ್ಣಿ ಮತ್ತು ಎನ್‌ಎ ಹ್ಯಾರಿಸ್ ಅವರಿಗೂ ಸಚಿವ ಸ್ಥಾನವನ್ನು ನಿರಾಕರಿಸಲಾಗಿದೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications