ಸರ್ಕಾರದ ವಿರುದ್ದ ಬಿಬಿಎಂಪಿ ಗುತ್ತಿಗೆದಾರರಿಂದ ಕಮಿಷನ್ ಆರೋಪ: ಸಂಪುಟ ಸಭೆಯಲ್ಲಿ ಚರ್ಚೆ?

ಬೆಂಗಳೂರು, ಆಗಸ್ಟ್‌ 10: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ ಮೂರು ತಿಂಗಳು ಕಳೆದಿಲ್ಲ. ಆಗಲೇ ಸರ್ಕಾರ ಹಾಗೂ ಸಚಿವರ ವಿರುದ್ಧ ಸಾಲು ಸಾಲು ಆರೋಪಗಳು ಕೇಳಿ ಬಂದಿದ್ದು, ಇಂದು (ಗುರುವಾರ) ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಲಿವೆ.

ಹೌದು, ಬಿಬಿಎಂಪಿ ಗುತ್ತಿಗೆದಾರರು ಮಾಡಿರುವ 15% ಕಮಿಷನ್ ಆರೋಪದ ಹಿನ್ನಲೆ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರು ಕಾಮಗಾರಿಯನ್ನು ಸ್ಥಗಿತಗೊಳಿಸಲು ನಿರ್ಧಾರ ಮಾಡಿದ್ದು, ಸರ್ಕಾರಕ್ಕೂ ತಲೆನೋವು ಉಂಟಾಗಿದೆ.ಈ ನಿಟ್ಟಿನಲ್ಲಿ ವಿಧಾನಸೌಧದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Karnataka Cabinet Meeting Led By Cm Siddaramaiah Today

ಬಾಕಿ ಬಿಲ್ ಪಾವತಿ ಹಾಗೂ ಕಮಿಷನ್‌ ಆರೋಪದ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಸರ್ಕಾರದ ವಿರುದ್ದ ಹಲವು ಆರೋಪಗಳು ಕೇಳಿ ಬರುತ್ತಿವೆ. ಈ ಎಲ್ಲಾ ವಿಚಾರಗಳ ಕುರಿತು ಸಿದ್ದರಾಮಯ್ಯ ಸಂಪುಟದಲ್ಲಿ ಚರ್ಚೆಯಾಗಲಿದೆ. ಇನ್ನೂ ಬಿಬಿಎಂಪಿ ಗುತ್ತಿಗೆದಾರರು ನ್ಯಾಯಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರನ್ನ ಭೇಟಿಯಾಗಿದ್ದಾರೆ. ಅಲ್ಲದೇ ಈ ರೀತಿಯ ಆರೋಪಗಳಿಂದ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಮುಜುಗರ ಉಂಟಾಗಲಿದೆ ಎಂದು ಇದೀನ ಸಭೆಯಲ್ಲಿ ಚರ್ಚೆಯಾಗಲಿದೆ.

ಇನ್ನು ಬಿಬಿಎಂಪಿ ಗುತ್ತಿಗೆದಾರರು ಬಹಿರಂಗವಾಗಿ ಅಸಮಾಧಾನವನ್ನ ಹೊರಹಾಕುತ್ತಿದ್ದು, ವಿಪಕ್ಷ ನಾಯಕರನ್ನ ಭೇಟಿ ಮಾಡಿ ನ್ಯಾಯಕ್ಕಾಗಿ ಚರ್ಚೆ ನಡೆಸುತ್ತಿದ್ದಾರೆ. ಸದ್ಯ ಬಿಬಿಎಂಪಿ ಗುತ್ತಿಗೆದಾರರ ಆರೋಪ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮಾಡಿರುವ ಆರೋಪದ ಬೆನ್ನಲ್ಲೇ ಬಿಜೆಪಿ ನಾಯಕಿರು ಸಹ ಈ ಕುರಿತು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಈ ವಿಚಾರಗಳಲ್ಲದೇ ರಾಮನಗರ ಮಹಿಳಾ ತಜ್ಞೆ ಡಾ. ಉಷಾ ಕದರಮಂಡಲಗಿ ಕಡ್ಡಾಯ ನಿವೃತ್ತಿಗೆ ಸಂಪುಟ ಅನುಮೋದನೆ ಸಾಧ್ಯತೆ. ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಡಾ.ಎಂ.ಎಚ್‌. ನಾಗೇಶ್ ಸೇವೆಯಿಂದ ವಜಾ, 5 ವರ್ಷ ಕಾರಾಗೃಹ ಶಿಕ್ಷೆಗೆ ಒಳಪಟ್ಟಿರುವ ಕಾರಣದಿಂದ ವಜಾ ಸಾಧ್ಯತೆ. ಇನ್ನೂ ಎಸ್‌ಸಿ,ಎಸ್‌ಟಿ ಶಾಸಕರ ಕ್ಷೇತ್ರಗಳಲ್ಲಿ 20 ಸಂಚಾರಿ ಆಸ್ಪತ್ರೆಗಳ ಸ್ಥಾಪನೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಗುವ ಸಾಧ್ಯತೆ ಇದೆ.

ಇನ್ನೂ ಬೆಂಗಳೂರಿನ ಏರೋಸ್ಪೇಸ್ ಹಾಗೂ ರಕ್ಷಣಾ ಉತ್ಕೃಷ್ಟತಾ ಕೇಂದ್ರ ಸ್ಥಾಪನೆಗೆ ಅನುಮೋದನೆ. ಅಂದಾಜು 316 ಕೋಟಿ‌ ರೂ ಯೋಜನೆಗೆ ಒಪ್ಪಿಗೆ ನೀಡುವ ಸಾಧ್ಯತೆ. ಬೆಳಗಾವಿ ವೈದ್ಯಕೀಯ ಕಾಲೇಜಿನಲ್ಲಿ 325 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ 189 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ. ಅಲ್ಲದೇ ಸಾರಿಗೆ ಸಂಸ್ಥೆಗಳ ವಾಹನಗಳಲ್ಲಿ ವಹಿಕಲ್ ಟ್ರ್ಯಾಕಿಂಗ್ ಸಿಸ್ಟಂ ಮತ್ತು ಪ್ಯಾನಿಕ್ ಬಟನ್ ಅಳವಡಿಕೆಗೆ 30.74 ಕೋಟಿ ರೂ. ಯೋಜನೆಗೆ ಸಂಪುಟ ಅಸ್ತು ಎನ್ನುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+