ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದು (ಡಿ.28) ನಡೆದ ಸಚಿವ ಸಂಪುಟದ ಪ್ರಮುಖ ನಿರ್ಧಾರಗಳು!

|
Google Oneindia Kannada News

ಬೆಂಗಳೂರು, ಡಿ. 28: ಗೋ ಹತ್ಯೆ ನಿಷೇಧ ಕಾನೂನನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುವುದು ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಇಂದು (ಡಿಸೆಂಬರ್ 28) ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿಧಾನಸೌಧದ ಸಂಪುಟ ಸಭಾಂಗಣದಲ್ಲಿ ಸಂಪುಟ ಸಭೆ ನಡೆಯಿತು. ಬಳಿಕ ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಅವರು ಮಾಧ್ಯಮ ಗೋಷ್ಠಿ ನಡೆಸಿ, ಮಾಹಿತಿ ನೀಡಿದರು.

ಹೊಸ ವರ್ಷದ ವಿಧಾನಮಂಡಲ ಜಂಟಿ ಅಧಿವೇಶನವನ್ನು ಜನವರಿ 18ನೇ ತಾರೀಖಿನಿಂದ ಅಧಿವೇಶನ ಮಾಡುವ ಚಿಂತನೆ ಇದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಂಟಿ ಅಧಿವೇಶನ ನಡೆಸುವ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ದಿನ ನಿಗದಿ ಮಾಡುತ್ತೇವೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿ ಅವರು ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ್ದಾರೆ. ಜೊತೆಗೆ ಗೋಹತ್ಯೆ ನಿಷೇಧ ಸುಗ್ರಿವಾಜ್ಞೆ ಇಂದು ಕ್ಯಾಬಿನೆಟ್ ನಲ್ಲಿ ಚರ್ಚೆ ಆಗಿದೆ. ನಾಳೆ ರಾಜ್ಯಪಾಲರಿಗೆ ಕಳುಹಿಸಿ ಕೊಡುತ್ತೇವೆ ಎಂದು ಮಾಧುಸ್ವಾಮಿ ಹೇಳಿದ್ದಾರೆ. ಹಲವು ಮಹತ್ವದ ನಿರ್ಧಾರಗಳನ್ನು ಇಂದಿನ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

* ಹಳೆ ಮೈಸೂರು ಭಾಗದ ಕೆರೆ ತುಂಬುವ ಯೋಜನೆಗಗಳಿಗೆ ಅನುದಾನ ಬಿಡುಗಡೆ. 1400 ಕೋಟಿ ಅನುದಾನದಲ್ಲಿ ಹನಘಟ ಚಿಕ್ಕ ಡ್ಯಾಮ್ ಮೂಲಕ 12 ಕೆರೆ ಹಾಸನ, 3 ಕೆರೆ ಚಿಕ್ಕಮಗಳೂರು ಜಿಲ್ಲೆಯ ಕೆರೆಗಳಿಗೆ ನೀರು ತಂಬಿಸಲು 124 ಕೋಟಿ ರೂ. ಅನುದಾನ.

Karnataka Cabinet Meeting on Dec 28 : Highlights and Key decisions announced by Yediyurappa govt

* ರಾಜ್ಯದ ನಗರಪಾಲಿಕೆಗಳು, ನಗರಸಭೆಗಳು, ಪುರಸಭೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಪುಟದ ಒಪ್ಪಿಗೆ. ಶೇ.15 ರಿಂದ 30ರಷ್ಟು ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಪುಟದಲ್ಲಿ ಅನುಮೋದನೆ.

* ವಸತಿ ಮತ್ತು ವಾಣಿಜ್ಯ ಕಟ್ಟಡಗಳ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಪುಟ ಸಭೆಯಲ್ಲಿ ಪ್ರಸ್ತಾಪ. ಮುಂದಿನ ಅಧಿವೇಶನದಲ್ಲಿ ಈ ಸಂಬಂಧ ಮಸೂದೆ ಮಂಡನೆ ಮಾಡಲು ಸಂಪುಟದ ಒಪ್ಪಿಗೆ.

* ಶಾಲೆ ಆರಂಭಿಸುವ ಕುರಿತು ಸಂಪುಟದಲ್ಲಿ ಯಾವುದೇ ಚರ್ಚೆ ಆಗಿಲ್ಲ. ಶಾಲೆ ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಸಿಎಂ ಯಡಿಯೂರಪ್ಪ ಅವರಿಗೆ ವಹಿಸಿದ ಸಂಪುಟ.

Recommended Video

ಚಾಮರಾಜನಗರ: ವಕ್ಫ್ ಮಂಡಳಿಗೆ ಸೇರಬೇಕಾದ ಆಸ್ತಿಗಳ ಪತ್ತೆ ಹಾಗೂ ತೆರವು ಕಾರ್ಯ ಆರಂಭಿಸಿದ ಅಧಿಕಾರಿಗಳು | Oneindia

* ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಡಿಸೆಂಬರ್ 31ಕ್ಕೆ ನಿವೃತ್ತಿ. ಮುಂದಿನ ಮುಖ್ಯ ಕಾರ್ಯದರ್ಶಿಗಳ ಬಗ್ಗೆ ನಿರ್ಧಾರವಾಗಿಲ್ಲ ಎಂದು ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ್ದಾರೆ.

English summary
Karnataka Cabinet Meeting on Dec 28 : Highlights and Key decisions announced by Yediyurappa govt. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X