ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುರುವಾರ ಸಚಿವ ಸಂಪುಟ ಸಭೆ: ಕುಮಾರಸ್ವಾಮಿ ಇಂದ ಮಹತ್ವದ ಘೋಷಣೆ?

|
Google Oneindia Kannada News

ಬೆಂಗಳೂರು, ಜುಲೈ 11: ಗುರುವಾರ ಬೆಳಿಗ್ಗೆ ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಸಿಎಂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಭೆ ನಡೆಯಲಿದೆ.

ಎಲ್ಲ ಸಚಿವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರಾದರೂ ಅದು ಕೇವಲ ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾತ್ರವೇ ನೀಡಿದ್ದು, ಸಿಎಂ ಕುಮಾರಸ್ವಾಮಿ ಅವರು ರಾಜೀನಾಮೆ ಅಂಗೀಕಾರ ಮಾಡಿಲ್ಲದ ಕಾರಣ ನಾಳಿನ ಸಂಪುಟ ಸಭೆಯಲ್ಲಿ ಎಲ್ಲ ಸಚಿವರು ಭಾಗವಹಿಸಲಿದ್ದಾರೆ.

ನಾಳಿನ ಸಭೆಯಲ್ಲಿ ಕುಮಾರಸ್ವಾಮಿ ಅವರು ಅತ್ಯಂತ ಮಹತ್ವದ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ ಎಂಬ ಗುಮಾನಿ ಇದೆ.

Karnataka cabinet meeting on Thursday in Vidhan Soudha

ಕೆಲವು ದಿನಗಳ ಹಿಂದೆ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಸಚಿವರು ತಮ್ಮ-ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಬಗ್ಗೆ ನಿರ್ಣಯ ತಳೆದಿದ್ದರು. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಅವರೇ ರಾಜೀನಾಮೆ ಸಲ್ಲಿಸುವ ನಿರ್ಣಯ ತಳೆಯುವ ಸಾಧ್ಯತೆ ಇದೆ.

ಬುಧವಾರ ತಡ ರಾತ್ರಿ ಕಾಂಗ್ರೆಸ್ ಮುಖಂಡರಾದ ಗುಲಾಂ ನಬಿ ಆಜಾದ್, ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಕೆ.ಸಿ.ವೇಣುಗೋಪಾಲ್ ಅವರು ಪರಸ್ಪರ ಸಭೆ ನಡೆಸಿ ಆ ನಂತರ ದೇವೇಗೌಡರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು. ಅಲ್ಲೇ ಕುಮಾರಸ್ವಾಮಿ ಅವರನ್ನೂ ಭೇಟಿಯಾಗಿ ಪರಿಸ್ಥಿತಿಯನ್ನು ವಿವರಿಸಿದ್ದಾರೆ ಎನ್ನಲಾಗಿದೆ.

ಪರಿಸ್ಥಿತಿ ಸಂಪೂರ್ಣ ಕೈಮೀರಿ ಹೋಗಿರುವ ಕಾರಣ, ಜುಲೈ 12 ರಂದು ನಡೆವ ಅಧಿವೇಶನದಲ್ಲಿ ಬಹುಮತ ಸಾಬೀತಿಗೆ ರಾಜ್ಯಪಾಲರಿಂದ ಸೂಚನೆ ಸಿಗುವ ಮೊದಲೇ ತಾವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಬಗ್ಗೆ ಕುಮಾರಸ್ವಾಮಿ ಚಿಂತಿಸಿದ್ದಾರೆ ಎನ್ನಲಾಗುತ್ತಿದೆ.

English summary
Karnataka cabinet meeting has been called on Thursday in Vidhan Soudha. CM Kumaraswamy may announce very important decision in the meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X