ರಾಗಿ ಸಂಗ್ರಹಿಸುವ ಬಗ್ಗೆ ಸಿದ್ದರಾಮಯ್ಯ ಸರ್ಕಾರದಿಂದ ಬಿಗ್ ಅಪ್‌ಡೇಟ್!
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವು ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದು, ಹಾಗೇ ಬಡವರ ಪರವಾಗಿ ನಾವಿದ್ದೀವಿ ಎಂಬ ಆಶ್ವಾಸನೆ ನೀಡುತ್ತಿದೆ. ಆದ್ರೆ ಇದೇ ವೇಳೆ ವಿರೋಧ ಪಕ್ಷಗಳ ನಾಯಕರು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿರುದ್ಧ ಹಲವು ಗಂಭೀರ ಆರೋಪ ಮಾಡುತ್ತಿದ್ದಾರೆ. ಹೀಗಿದ್ದಾಗ ಕರ್ನಾಟಕದ ರೈತರಿಗೆ ಸಹಾಯಕವಾಗುವ ಮಹತ್ವದ ನಿರ್ಧಾರವನ್ನ ಇದೀಗ ಸಿದ್ದರಾಮಯ್ಯ ಅವರ ಸರ್ಕಾರ ಕೈಗೊಂಡಿದೆ.
ಹೌದು, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕ ಸಚಿವ ಸಂಪುಟ ಸಭೆ ನಡೆದಿದೆ. ಈ ಕ್ಯಾಬಿನೆಟ್ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದ ಯೋಜನೆಗಳಿಗೆ ಅಸ್ತು ಎನ್ನಲಾಗಿದೆ. ಇದರ ಜೊತೆಗೆ ರಾಗಿ ಬೆಳೆದಿದ್ದ ರೈತರಿಗೆ ಕೂಡ ಕರ್ನಾಟಕ ಸರ್ಕಾರದಿಂದ ಸಿಹಿಸುದ್ದಿ ಸಿಕ್ಕಿದೆ. ಹಾಗಾದರೆ ಕರ್ನಾಟಕದಲ್ಲಿ ಅಧಿಕಾರದಲ್ಲಿ ಇರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಗಿ ಬೆಳೆದ ರೈತರಿಗೆ ನೀಡಿರುವ ಸಿಹಿಸುದ್ದಿ ಏನು ಗೊತ್ತಾ?

ಕ್ಯಾಬಿನೆಟ್ ಸಭೆಯ ಪ್ರಮುಖ ನಿರ್ಣಯ
* ಆಹಾರ & ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಎಲ್ಲಾ ಸಗಟು ಗೋದಾಮಿಗೆ 12 ಕೋಟಿ ರೂಪಾಯಿಯ ವೆಚ್ಚದಲ್ಲಿ, ಸಿಸಿ ಕ್ಯಾಮೆರಾ ಅಳವಡಿಕೆಗೆ ಕೆಟಿಟಿಪಿ ಕಾಯ್ದೆ ಅನ್ವಯ ಟೆಂಡರ್ ಕರೆಯಲು ನಿರ್ಧಾರಿಸಲಾಗಿದೆ.
* ಹಾಗೇ 44 ಕೋಟಿ ರೂ. ವೆಚ್ಚದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ, ಲೋಕಲ್ ಪ್ಲಾನಿಂಗ್ ಏರಿಯಾ ವ್ಯಾಪ್ತಿಯ ನಂಜನಗೂಡು ತಾಲೂಕು ಮತ್ತು ಶ್ರೀರಂಗಪಟ್ಟಣ ತಾಲೂಕಿನ ಗ್ರಾಮಗಳ ಅಭಿವೃದ್ಧಿ ಕಾರ್ಯ & ತ್ಯಾಜ್ಯ ನೀರು ಸಂಸ್ಕರಣೆ ಘಟಕದ ಅನುಷ್ಠಾನಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ.
* ಗದಗ ಮತ್ತು ಬೆಟಗೇರಿ ನಗರಸಭೆಗೆ ಅಮೃತ 2.0 ಯೋಜನೆ ಅಡಿ, ಅಂದಾಜು 34 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಠಾನಕ್ಕೆ ಅನುಮತಿಯ ಕೂಡ ಸಂಪುಟ ಸಭೆಯಲ್ಲಿ ನೀಡಲಾಗಿದೆ.

* 1 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ ರಾಜ್ಯದ ಆಯ್ದ 17 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪರಿಸರ ಪರಿಹಾರ ನಿಧಿ ಅಡಿಯಲ್ಲಿ, ಒಟ್ಟು 750 ಕೋಟಿ ರೂಪಾಯಿ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಹಾಗೂ ಉನ್ನತೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
* ಮತ್ತೊಂದು ಕಡೆ, ಪ್ರಸಕ್ತ ಸಾಲಿನಲ್ಲಿ ವಿಕಲಚೇತನರಿಗೆ 36 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ 4,000 ಹೆಚ್ಚುವರಿ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಲು ನಿರ್ಧಾರವನ್ನ ಈ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಕೈಗೊಳ್ಳಲಾಗಿದೆ.
* ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ, ರೈತರಿಂದ 4 ಲಕ್ಷ ಮೆಟ್ರಿಕ್ ಟನ್ ರಾಗಿ ಸಂಗ್ರಹಿಸಲು ಅಗತ್ಯ ಇರುವ 80 ಲಕ್ಷ ಗೋಣಿ ಚೀಲ ಖರೀದಿಗೆ 76 ಕೋಟಿ ಅನುದಾನ ಒದಗಿಸಲು ಸಮ್ಮತಿ ಕೂಡ ಸೂಚಿಸಲಾಗಿದೆ. ಈ ಮೂಲಕ ರಾಗಿ ಬೆಳೆಗಾರರಿಗೆ ಸಿಹಿಸುದ್ದಿ ನೀಡಿದೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ.
ಒಟ್ನಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು, ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಈಗ ಕರ್ನಾಟಕ ಸರ್ಕಾರ ಕೈಗೊಂಡಿದೆ. ಹಾಗೇ ಪ್ರಮುಖವಾಗಿ ರಾಗಿ ಬೆಳೆಗಾರರಿಗು ಕೂಡ ಸಿಹಿಸುದ್ದಿ ಸಿಕ್ಕಿದೆ. ಜತೆಗೆ, ಕೋಟ್ಯಂತರ ರೂಪಾಯಿ ವೆಚ್ಚದ ಯೋಜನೆಗಳಿಗೂ ಅನುಮತಿ ನೀಡಲಾಗಿದೆ. 1 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ ರಾಜ್ಯದ ಆಯ್ದ 17 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪರಿಸರ ಪರಿಹಾರ ನಿಧಿ ಅಡಿಯಲ್ಲಿ, ಒಳಚರಂಡಿ ವ್ಯವಸ್ಥೆ ಸರಿಪಡಿಸಲು ಈಗ ನಿರ್ಧಾರ ಕೈಗೊಳ್ಳಲಾಗಿದೆ. ಹಾಗೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಯೋಜನೆಗೂ ಅಸ್ತು ಎನ್ನಲಾಗಿದ್ದು, ಹಲವು ಯೋಜನೆಗಳಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.












Click it and Unblock the Notifications