Get Updates
Get notified of breaking news, exclusive insights, and must-see stories!

B Khata: ಬೆಂಗಳೂರು ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಬಿ-ಖಾತೆಗಳಿಗೂ ಎ-ಖಾತಾ ಮಾನ್ಯತೆ ಭಾಗ್ಯ

ಬೆಂಗಳೂರು, ಜುಲೈ 19: ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಬಿ-ಖಾತಾ ಗೊಂದಲಗಳಿಗೆ ತೆರೆ ಎಳೆಯಲು ರಾಜ್ಯ ಸರ್ಕಾರ ಮುಂದಾಗಿದೆ. 2024ರ ಸೆ.30 ರವರೆಗೆ ಬಿಬಿಎಂಪಿ ನೀಡಿರುವ ಎಲ್ಲಾ ಬಿ-ಖಾತಾಗಳಿಗೆ ಎ ಖಾತಾ ಮಾನ್ಯತೆ ನೀಡಲು ನಿರ್ಧಾರವನ್ನ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಅಕ್ರಮ ಮತ್ತು ಅನಿಯಂತ್ರಿತ ಕಟ್ಟಡ ಮತ್ತು ವಿನ್ಯಾಸಗಳನ್ನು ನಿಯಂತ್ರಿಸುವಲ್ಲಿ ಶಿಸ್ತು ತರಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಎಚ್‌ಕೆ ಪಾಟೀಲ್ ಹೇಳಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ "ಎ" ಮತ್ತು "ಬಿ" ಖಾತಾ ನೀಡುವುದನ್ನು ನಿಯಂತ್ರಿಸಲು ಸಚಿವ ಸಂಪುಟ ನಿರ್ಣಯವನ್ನು ಕೈಗೊಂಡಿತು. ಮಲಪ್ರಭಾ ನದಿಗೆ ಅಡ್ಡಲಾಗಿರುವ ಮುನವಳ್ಳಿ ಆರ್‌ಬಿಸಿಗೆ ನವಿಲುತೀರ್ಥ ಆಣೆಕಟ್ಟಿನ ಚೈನೇಜ್. 0+098 ರಿಂದ ಚೈನೇಜ್ 0+433 ವರೆಗೆ ಅಕ್ವಾಡಕ್ಟ್ ಅನ್ನು ಎಂಎಸ್ ಪೈಪ್‌ನೊಂದಿಗೆ ನಿರ್ಮಿಸುವ ಕಾಮಗಾರಿಯನ್ನು ರೂ.19.05 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

Karnataka Cabinet Nod For Regularisation Of B Khata Properties

ಅಂತರ್ಜಲ ಬಳಕೆಗೆ ನಿರಾಕ್ಷೇಪಣಾ ನೀಡುವ ಸಂಬAಧ ಕೇಂದ್ರಿಯ ಅಂತರ್ಜಲ ಪ್ರಾಧಿಕಾರ ಇವರು ಹೊರಡಿಸಿರುವ ಮಾರ್ಗಸೂಚಿಯನ್ನು ಸೂಕ್ತ ಮಾರ್ಪಾಡುಗಳೊಂದಿಗೆ ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿತು. ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳದಲ್ಲಿ ಅಲ್ಪಸಂಖ್ಯಾತರ ವಿದ್ಯಾಥಿನಿಯರಿಗಾಗಿ ವಸತಿ ಸಹಿತ ಪದವಿ ಪೂರ್ವ ಕಾಲೇಜನ್ನು ರೂ.17.09 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಿ 400 ವಿದ್ಯಾರ್ಥಿನಿಯರ ಸಂಖ್ಯಾ ಬಲದೊಂದಿಗೆ ಪ್ರಾರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿತು

ಚಿಕ್ಕಮಗಳೂರು ಜಿಲ್ಲೆ, ನರಸಿಂಹರಾಜಪುರ ಪಟ್ಟಣದ ರಸ್ತೆಯನ್ನು ರೂ.60.00 ಕೋಟಿಗಳ ಅಂದಾಜು ಮೊತ್ತದಲ್ಲಿ ಅಗಲೀಕರಣ ಮಾಡುವ ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನಲ್ಲಿ ತಾಲ್ಲೂಕು ಪ್ರಜಾಸೌಧ ಕಟ್ಟಡ ಕಾಮಗಾರಿಯನ್ನು ರೂ.16.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಬೆಂಗಳೂರು ನಗರದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೋಲಾರ ಜಿಲ್ಲೆಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಒಟ್ಟು 126 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಯ 5 ವರ್ಷಗಳ ಪೋಷಣೆ ಮತ್ತು ನಿರ್ವಹಣೆ (O&M) ಕಾಮಗಾರಿಯನ್ನು ರೂ.128.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲಾ ಕಾಲೇಜುಗಳ ಕಟ್ಟಡ ನಿರ್ಮಾಣದ 4 ಕಾಮಗಾರಿಗಳನ್ನು ಒಟ್ಟು ರೂ.64.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಕಿತ್ತೂರು ಕೋಟೆ ಆವರಣದಲ್ಲಿ ರೂ.30.00 ಕೋಟಿ ವೆಚ್ಚದ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂಸ್ವಾಧೀನಪಡಿಸಿಕೊಂಡಿದ್ದ ಜಮೀನಗಳನ್ನು ಭೂಸ್ವಾಧೀನ ಕಾಯ್ದೆ 1894ರ ಕಲಂ48(1)ರಡಿ ಭೂಸ್ವಾಧೀನದಿಂದ ಕೈಬಿಟ್ಟಿರುವ 29 ಪ್ರಕರಣಗಳಲ್ಲಿ, ಸಂಬಂಧಪಟ್ಟ ಎಲ್ಲಾ ಬಾಧಿತ ವ್ಯಕ್ತಿಗಳಿಗೆ ನೋಟೀಸ್ ನೀಡಿ, ವಿವರಣೆ ಪಡೆದು, ನಿಯಮಬಾಹಿರವಾಗಿ ಭೂಸ್ವಾಧೀನದಿಂದ ಕೈಬಿಟ್ಟಿರುವ ಅಧಿಸೂಚನೆಗಳನ್ನು ಹಿಂಪಡೆಯಲು ಹಾಗೂ ಇದಕ್ಕೆ ಕಾರಣಕರ್ತರಾಗಿರುವ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು; ಸಚಿವ ಸಂಪುಟ ನಿರ್ಧರಿಸಿದೆ.

ಹಾರಂಗಿ ಜಲಾಶಯದ ಕೆಳಭಾಗದಲ್ಲಿ ಕೊಡಗು ಜಿಲ್ಲೆಯ ಕುಶಾಲನಗರದ ಹುಲುಗುಂದ ಗ್ರಾಮದ ಬಳಿ ಕಮಾನು ಸೇತುವೆ (Arch Bridge) ಯನ್ನು ರೂ.36.50 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಸಚಿವ ಸಂಪುಟ ನಿರ್ಣಯಿಸಿದೆ. ಹೇಮಾವತಿ ಯೋಜನೆಯಡಿಯಲ್ಲಿನ ನಾಗಮಂಗಲ ಶಾಖಾ ನಾಲೆಯ ಸರಪಳಿ 0.00 ಕಿ.ಮೀ ನಿಂದ 78.46 ಕಿ.ಮೀ ವರೆಗೆ ಅಭಿವೃದ್ಧಿಪಡಿಸುವ ರೂ.560.00 ಕೋಟಿಗಳ ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+