• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
LIVE

Karnataka Cabinet Expansion Live: ನೂತನ ಸಚಿವರುಗಳಿಗೆ ಖಾತೆ ಹಂಚಿಕೆ ಕಸರತ್ತು

|
Google Oneindia Kannada News

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ ಕಾರ್ಯಕ್ರಮದ ಅಪ್ಡೇಟ್ ಇಲ್ಲಿದೆ. ಆಗಸ್ಟ್ 4 ರಂದು ಬೊಮ್ಮಾಯಿ ಸಂಪುಟ ರಚನೆ, ವಿಸ್ತರಣೆ ನಿಗದಿಯಂತೆ 2:15ಕ್ಕೆ ರಾಜಭವನದಲ್ಲಿ ಸಂಪನ್ನವಾಗಿದೆ. 29 ಸಚಿವರುಗಳು ಪ್ರಮಾಣ ವಚನ ಸ್ವೀಕರಿಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಯಡಿಯೂರಪ್ಪ ಸಂಪುಟದಲ್ಲಿದ್ದ ಏಳು ಮಂದಿ ಹಿರಿಯರಿಗೆ ಕೊಕ್ ನೀಡಲಾಗಿದೆ. ಹೈಕಮಾಂಡ್ ಅಣತಿಯಂತೆ ಹೊಸಬರು, ಅನುಭವವುಳ್ಳರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಬೊಮ್ಮಾಯಿ ಸಂಪುಟಕ್ಕೆ ಆಯ್ಕೆಯಾದವರ ಪೈಕಿ 8 ಲಿಂಗಾಯತ, 7 ಒಬಿಸಿ, 7 ಒಕ್ಕಲಿಗ, 3 ದಲಿತ, 1 ಎಸ್ ಟಿ ಮತ್ತು ಒಬ್ಬ ಮಹಿಳೆಗೆ ಸ್ಥಾನ ಕಲ್ಪಿಸಲಾಗಿದೆ.

ವಿಧಾನಸೌಧದಲ್ಲಿ ಜುಲೈ 26ರಂದು ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ 2ನೇ ವರ್ಷದ ಸಂಭ್ರಮಾಚರಣೆ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದರು. ಜುಲೈ 27ರಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಿಗ್ಗಾಂವ್ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿಯನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಯಿತು. ಬುಧವಾರ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅಗಸ್ಟ್ 4ರಂದು ಬೊಮ್ಮಾಯಿ ಸಂಪುಟಕ್ಕೆ 29 ಮಂದಿ ಸೇರ್ಪಡೆಗೊಂಡಿದ್ದಾರೆ.

   ಕಣ್ಣೀರಿಡುತ್ತಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ |Oneindia Kannada

   ಬೊಮ್ಮಾಯಿ ಸಚಿವ ಸಂಪುಟ ಪ್ರಮಾಣ ವಚನ ಲೈವ್

   ಪ್ರಮಾಣ ವಚನ ಸಮಾರಂಭದ ಅಪ್ಡೇಟ್ಸ್ ಈ ಪುಟದಲ್ಲಿ ನಿಮಗೆ ಸಿಗಲಿದೆ...

   Karnataka Political Developments Live Updates and News

   Newest First Oldest First
   10:56 PM, 4 Aug
   ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳ ಪರಿಶೀಲನೆಗೆ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ, ಸಚಿವರುಗಳನ್ನು ಜಿಲ್ಲೆಗಳಿಗೆ, ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ಹಂಚಿಕೆ ಮಾಡಿ ಆದೇಶಿಸಿದ್ದಾರೆ.
   5:43 PM, 4 Aug
   ನೂತನ ಸಚಿವರುಗಳಿಗೆ ಖಾತೆ ಹಂಚಿಕೆ ಕಸರತ್ತು
   ರಾಜ್ಯ ಸರ್ಕಾರದಲ್ಲಿ ಒಟ್ಟು 34 ಶಾಸಕರು ಸಚಿವರಾಗಬಹುದು. ಉಳಿದಿರುವ 4 ಸ್ಥಾನಗಳನ್ನು ಕಾಯ್ದಿರಿಸಲು ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡಿದೆ.ಈಗ ಯಾರಿಗೆ ಯಾವ ಖಾತೆ ಸಿಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.
   4:52 PM, 4 Aug
   ಸಚಿವ ಸಂಪುಟ ಸಭೆ
   ನೂತನ ಸಚಿವರ ಪ್ರಮಾಣ ವಚನದ ಬಳಿಕ ಸಚಿವ ಸಂಪುಟ ಸಭೆ. 5 ಗಂಟೆಗೆ ವಿಧಾನಸೌಧದಲ್ಲಿ ಸಂಪುಟ ಸಭೆ ನಡೆಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
   4:44 PM, 4 Aug
   ಬೋವಿ ಸಮುದಾಯಕ್ಕೆ ಕೈತಪ್ಪಿದ ಮಂತ್ರಿ ಪದವಿ, ಭೋವಿ ಶ್ರೀಗಳು ಅಸಮಾಧಾನ
   ಭೋವಿ ಜನಾಂಗಕ್ಕೆ ಸಚಿವ ಸ್ಥಾನ ಕೈ ತಪ್ಪಿದ್ದ ಹಿನ್ನೆಲೆಯಲ್ಲಿ ಚಿತ್ರದುರ್ಗ ನಗರದಲ್ಲಿರುವ ಬೋವಿಗುರುಪೀಠದ ಸಿದ್ದರಾಮೇಶ್ವರ ಸ್ವಾಮೀಜಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು
   3:28 PM, 4 Aug
   ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಕ್ತಾಯ
   ರಾಜಭವನದಲ್ಲಿ ರಾಷ್ಟ್ರಗೀತೆಗೆ ಗೌರವ ಸೂಚಿಸಿ ಸಮಾರಂಭಕ್ಕೆ ಮುಕ್ತಾಯ ಹಾಡಲಾಯಿತು. ನೆರೆದಿದ್ದ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಿದರು.
   3:27 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮುನಿರತ್ನ
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮುನಿರತ್ನ
   ರಾಜ ರಾಜೇಶ್ವರಿ ನಗರ ಕ್ಷೇತ್ರದ ನಾಯ್ಡು ಸಮುದಾಯಕ್ಕೆ ಸೇರಿರುವ ಮುನಿರತ್ನಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   3:23 PM, 4 Aug
   ಪ್ರಮಾಣ ವಚನ ಸ್ವೀಕರಿಸಿದ ಶಂಕರ್ ಪಾಟೀಲ್ ಮುನೇನಕೊಪ್ಪ
   ಪ್ರಮಾಣ ವಚನ ಸ್ವೀಕರಿಸಿದ  ಶಂಕರ್ ಪಾಟೀಲ್ ಮುನೇನಕೊಪ್ಪ
   ನವಲಗುಂದ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಂಕರ್ ಪಾಟೀಲ್ ಮುನೇನಕೊಪ್ಪಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ, ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   3:21 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಾಲಪ್ಪ ಆಚಾರ್
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಾಲಪ್ಪ ಆಚಾರ್
   ಯಲಬುರ್ಗಿ ಕ್ಷೇತ್ರದ ರೆಡ್ಡಿ ಸಮುದಾಯಕ್ಕೆ ಸೇರಿರುವ ಹಾಲಪ್ಪ ಆಚಾರ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   3:20 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ ಸುನಿಲ್ ಕುಮಾರ್
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ ಸುನಿಲ್ ಕುಮಾರ್
   ಕಾರ್ಕಳ ಕ್ಷೇತ್ರದ ದಲಿತ ಸಮುದಾಯಕ್ಕೆ ಸೇರಿರುವ ವಿ ಸುನಿಲ್ ಕುಮಾರ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   3:18 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಸಿ ನಾಗೇಶ್
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಸಿ ನಾಗೇಶ್
   ತಿಪಟೂರು ಕ್ಷೇತ್ರದ ಬ್ರಾಹ್ಮಣ ಸಮುದಾಯಕ್ಕೆ ಸೇರಿರುವ ಬಿ.ಸಿ ನಾಗೇಶ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   3:13 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆ. ಸಿ ನಾರಾಯಣ ಗೌಡ
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆ. ಸಿ ನಾರಾಯಣ ಗೌಡ
   ಕೆ. ಆರ್ ಪೇಟೆ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಕೆ. ಸಿ ನಾರಾಯಣ ಗೌಡ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   3:11 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಾಗರಾಜ್ ಎಂ. ಟಿ.ಬಿ
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಾಗರಾಜ್ ಎಂ. ಟಿ.ಬಿ
   ಎಂಎಲ್‌ಸಿ ನಾಗರಾಜ್ ಎಂ. ಟಿ.ಬಿ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   3:10 PM, 4 Aug
   ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶಶಿಕಲಾ ಜೊಲ್ಲೆ
   ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶಶಿಕಲಾ ಜೊಲ್ಲೆ
   ನಿಪ್ಪಾಣಿ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕಿ ಶಶಿಕಲಾ ಜೊಲ್ಲೆ ಅವರು ಬೊಮ್ಮಾಯಿ ಸಂಪುಟದ ಸಚಿವೆಯಾಗಿ ದೇವರ ಹಾಗೂ ಕ್ಷೇತ್ರದ ಜನರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   3:07 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆ ಗೋಪಾಲಯ್ಯ
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆ ಗೋಪಾಲಯ್ಯ
   ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಶಾಸಕ ಕೆ ಗೋಪಾಲಯ್ಯ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   3:05 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ. ಸುಧಾಕರ್
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ. ಸುಧಾಕರ್
   ಚಿಕ್ಕಬಳ್ಳಾಪುರ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಶಾಸಕ ಡಾ. ಸುಧಾಕರ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   3:02 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೈರತಿ ಬಸವರಾಜು
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೈರತಿ ಬಸವರಾಜು
   ಕೆ. ಆರ್ ಪುರ ಕ್ಷೇತ್ರದ ಕುರುಬ ಸಮುದಾಯಕ್ಕೆ ಸೇರಿರುವ ಶಾಸಕ ಬೈರತಿ ಬಸವರಾಜು ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   3:01 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಸಿ ಪಾಟೀಲ್
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಸಿ ಪಾಟೀಲ್
   ಹಿರೇಕೆರೂರು ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕ ಬಿ.ಸಿ ಪಾಟೀಲ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ರೈತ, ಬಸವಣ್ಣ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   3:00 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಸ್ . ಟಿ ಸೋಮಶೇಖರ್
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಸ್ . ಟಿ ಸೋಮಶೇಖರ್
   ಯಶವಂತಪುರ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಶಾಸಕ ಎಸ್. ಟಿ ಸೋಮಶೇಖರ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು
   2:58 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಭು ಚೌವಾಣ್
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಭು ಚೌವಾಣ್
   ಔರಾದ್ ಕ್ಷೇತ್ರದ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿರುವ ಶಾಸಕ ಪ್ರಭು ಚೌವಾಣ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   2:57 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅರೆಬೈಲ್ ಶಿವರಾಂ ಹೆಬ್ಬಾರ್
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅರೆಬೈಲ್ ಶಿವರಾಂ ಹೆಬ್ಬಾರ್
   ಯಲ್ಲಾಪುರ ಕ್ಷೇತ್ರದ ಬ್ರಾಹ್ಮಣ ಸಮುದಾಯಕ್ಕೆ ಸೇರಿರುವ ಶಾಸಕ ಅರೆಬೈಲ್ ಶಿವರಾಂ ಹೆಬ್ಬಾರ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   2:56 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮುರುಗೇಶ್ ನಿರಾಣಿ
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮುರುಗೇಶ್ ನಿರಾಣಿ
   ಬೀಳಗಿ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕ ಮುರುಗೇಶ್ ನಿರಾಣಿ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ರೈತರು, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   2:50 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೋಟಾ ಶ್ರೀನಿವಾಸ ಪೂಜಾರಿ
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೋಟಾ ಶ್ರೀನಿವಾಸ ಪೂಜಾರಿ
   ಬಿಲ್ಲವ ಸಮುದಾಯಕ್ಕೆ ಸೇರಿರುವ ಶಾಸಕ(MLC) ಕೋಟಾ ಶ್ರೀನಿವಾಸ ಪೂಜಾರಿ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   2:47 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಆನಂದ್ ಸಿಂಗ್
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಆನಂದ್ ಸಿಂಗ್
   ಹೊಸಪೇಟೆ ಕ್ಷೇತ್ರದ ರಜಪೂತ್ ಸಮುದಾಯಕ್ಕೆ ಸೇರಿರುವ ಶಾಸಕ ಆನಂದ್ ಸಿಂಗ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ವಿಜಯನಗರ ಪಂಪಾ ವಿರುಪಾಕ್ಷ ತಾಯಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   2:46 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ. ಸಿ ಪಾಟೀಲ
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ. ಸಿ ಪಾಟೀಲ
   ನರಗುಂದ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕ ಸಿ. ಸಿ ಪಾಟೀಲ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   2:42 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಶ್ವಥ್ ನಾರಾಯಣ
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಶ್ವಥ್ ನಾರಾಯಣ
   ಮಲ್ಲೇಶ್ವರ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಶಾಸಕ ಅಶ್ವಥ್ ನಾರಾಯಣ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   2:38 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಆರಗ ಜ್ಞಾನೇಂದ್ರ
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಆರಗ ಜ್ಞಾನೇಂದ್ರ
   ತೀರ್ಥಹಳ್ಳಿ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಶಾಸಕ ಆರಗ ಜ್ಞಾನೇಂದ್ರ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   2:35 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆ. ಸಿ ಮಾಧುಸ್ವಾಮಿ
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆ. ಸಿ ಮಾಧುಸ್ವಾಮಿ
   ಚಿಕ್ಕನಾಯಕನಹಳ್ಳಿ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕ ಜೆ.ಸಿ ಮಾಧುಸ್ವಾಮಿ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   2:34 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಂಗಾರ
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಂಗಾರ
   ಸುಳ್ಯ ಕ್ಷೇತ್ರದ ದಲಿತ ಸಮುದಾಯಕ್ಕೆ ಸೇರಿರುವ ಶಾಸಕ ಅಂಗಾರ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   2:31 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಉಮೇಶ್ ಕತ್ತಿ
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಉಮೇಶ್ ಕತ್ತಿ
   ಹುಕ್ಕೇರಿ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕ ಉಮೇಶ್ ಕತ್ತಿ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   2:29 PM, 4 Aug
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ ಸೋಮಣ್ಣ
   ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ ಸೋಮಣ್ಣ
   ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕ ವಿ ಸೋಮಣ್ಣ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
   READ MORE

   English summary
   CM Basavaraj Bommai Cabinet Swearing-in Ceremony Live : Karnataka Cabinet Expansion: Ministers oath-taking ceremony will be held at 2.15pm. Check out live updates, news and highlights.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X