Cabinet Reshuffle: ಸಚಿವ ಸಂಪುಟ ಪುನಾರಚನೆ; ಹೈಕಮಾಂಡ್ ಕರೆದ ತಕ್ಷಣ ದೆಹಲಿಗೆ ಪ್ರಯಾಣ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಚಿವ ಸಂಪುಟ ಪುನಾರಚನೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಸಂಪುಟದಲ್ಲಿ ಬದಲಾವಣೆಯಾಗಲಿದೆ ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿದ್ದು, ಹಲವು ಶಾಸಕರು ಸಚಿವ ಸ್ಥಾನದ ಆಕಾಂಕ್ಷೆಯಲ್ಲಿದ್ದಾರೆ. ಈ ಗೊಂದಲಗಳಿಗೆ ಸಿದ್ದರಾಮಯ್ಯ ಕೊನೆಗೂ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಇನ್ನೂ ಯಾವುದೇ ಅಧಿಕೃತ ಸೂಚನೆ ಬಂದಿಲ್ಲ ಎಂದು ತಿಳಿಸಿದ್ದಾರೆ. "ಹೈಕಮಾಂಡ್ ನಮ್ಮನ್ನು ಕರೆದ ತಕ್ಷಣ ನಾವು ದೆಹಲಿಗೆ ಹೋಗುತ್ತೇವೆ" ಎಂದೂ ಸಿಎಂ ಸ್ಪಷ್ಟಪಡಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಸಂಪುಟದಲ್ಲಿ ಬದಲಾವಣೆಯಾಗಲಿದೆ ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿದೆ. ಹಲವು ಶಾಸಕರು ಸಚಿವ ಸ್ಥಾನದ ಆಕಾಂಕ್ಷೆಯಲ್ಲಿದ್ದಾರೆ. ಗುಂಪು ಗುಂಪಾಗಿ ದೆಹಲಿಗೆ ತೆರಳಿ, ಹೈಕಮಾಂಡ್ ಭೇಟಿಯಾಗಿಯೂ ಬಂದಿದ್ದಾರೆ. ಆದರೆ ಸದ್ಯಕ್ಕೆ ಹೈಕಮಾಂಡ್ ಕಡೆಯಿಂದ ಹಸಿರು ನಿಶಾನೆಗಾಗಿ ಕಾಯುತ್ತಿದ್ದೇವೆ ಎಂಬ ಸುಳಿವನ್ನು ಸಿದ್ದರಾಮಯ್ಯ ನೀಡಿದ್ದಾರೆ. ದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕರೊಂದಿಗೆ ನಡೆಯಲಿರುವ ಸಭೆಯ ನಂತರವಷ್ಟೇ ಯಾರಿಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ ಮತ್ತು ಯಾರಿಗೆ ಕೋಕ್ ನೀಡಲಾಗುವುದು ಎಂಬುದು ತಿಳಿಯಲಿದೆ.
ಕಳೆದ ಕೆಲವು ದಿನಗಳಿಂದ ಸಂಪುಟ ಪುನಾರಚನೆಯ ಬಗ್ಗೆ ಭಾರಿ ಚರ್ಚೆಗಳು ನಡೆಯುತ್ತಿವೆ. ಹಲವು ಶಾಸಕರು ಸಚಿವ ಸ್ಥಾನದ ಆಕಾಂಕ್ಷೆಯಲ್ಲಿದ್ದು, ಹೈಕಮಾಂಡ್‌ನ "ಬುಲಾವ್"ಗಾಗಿ ಕಾಯುತ್ತಿದ್ದಾರೆ. ಈ ಬದಲಾವಣೆಯು ರಾಜ್ಯ ರಾಜಕಾರಣದಲ್ಲಿ ಯಾವ ಹೊಸ ತಿರುವು ನೀಡಲಿದೆ ಎಂಬುದು ಕುತೂಹಲಕಾರಿಯಾಗಿದೆ. ಸದ್ಯ ಕರ್ನಾಟಕದಲ್ಲಿ ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದರಿಂದ ಸದ್ಯದಲ್ಲೇ ಹೈಕಮಾಂಡ್ ಸಂಪುಟ ಪುನಾರಚನೆ ಬಗ್ಗೆ ಸಿಹಿಸುದ್ದಿ ನೀಡುವ ನಿರೀಕ್ಷೆ ಇದೆ.
ವಿಜಯ್ ಸಾಧನೆ ಅಚ್ಚರಿ ತಂದಿದೆ
ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಬಗ್ಗೆಯೂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಇನ್ನು ತಮಿಳುನಾಡಿನಲ್ಲಿ ಬದಲಾವಣೆಯನ್ನು ಬಯಸಿದ ಯುವಜನತೆ ಹೆಚ್ಚಾಗಿ ನಟ ಮತ್ತು ಟಿವಿಕೆ (TVK) ಸ್ಥಾಪಕ ವಿಜಯ್ ಅವರಿಗೆ ಮತ ನೀಡಿದ್ದಾರೆ. ನಟ ವಿಜಯ್ ಅವರ ಈ ಸಾಧನೆಯು ಅಚ್ಚರಿ ತಂದಿದೆ ಎಂದಿದ್ದಾರೆ. ಪಶ್ಚಿಮ ಬಂಗಾಳದ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, "ಮಮತಾ ಬ್ಯಾನರ್ಜಿ ಅವರು ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿದ್ದರು. ಹೀಗಾಗಿ ಅಲ್ಲಿ ಆಡಳಿತ ವಿರೋಧಿ ಅಲೆ ಪ್ರಮುಖ ಪಾತ್ರ ವಹಿಸಿರಬಹುದು ಎಂದು ನಾನು ಭಾವಿಸುತ್ತೇನೆ" ಎಂದಿದ್ದಾರೆ. ಇದರ ಜೊತೆಗೆ, ಚುನಾವಣಾ ಪ್ರಕ್ರಿಯೆಯಲ್ಲಿ ಸುಮಾರು 91 ಲಕ್ಷ ಮತಗಳನ್ನು ತೆಗೆದುಹಾಕಿರುವುದು ಕೂಡ ಅಲ್ಲಿನ ಫಲಿತಾಂಶದ ಮೇಲೆ ಪ್ರಭಾವ ಬೀರಿದ ಮತ್ತೊಂದು ಪ್ರಮುಖ ಕಾರಣ ಇರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೇರಳದ ಫಲಿತಾಂಶದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಸಿದ್ದರಾಮಯ್ಯ ಅವರು, "ಕೇರಳದಲ್ಲಿ ನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಪಡೆದುಕೊಂಡಿದ್ದೇವೆ" ಎಂದು ತಿಳಿಸುವ ಮೂಲಕ ಚುನಾವಣಾ ಫಲಿತಾಂಶದ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ. ನೆರೆಹೊರೆಯ ರಾಜ್ಯಗಳ ಚುನಾವಣಾ ಫಲಿತಾಂಶಗಳು ಹೊಸ ರಾಜಕೀಯ ಬದಲಾವಣೆಗಳಿಗೆ ಸಾಕ್ಷಿಯಾಗಿವೆ ಎಂದು ಸಿದ್ದರಾಮಯ್ಯ ವಿಶ್ಲೇಷಿಸಿದ್ದಾರೆ.













Click it and Unblock the Notifications