ಸಂಪುಟ ಪುನಾರಚನೆ : ಯಾರ ಕೈ ತಪ್ಪಲಿದೆ ಸಚಿವ ಸ್ಥಾನ?

By: ವಿಕಾಸ್ ನಂಜಪ್ಪ
Subscribe to Oneindia Kannada

ಬೆಂಗಳೂರು, ಮೇ 16 : ಕರ್ನಾಟಕ ಸರ್ಕಾರ ಮೂರು ವರ್ಷಗಳನ್ನು ಪೂರ್ಣಗೊಳಿಸಿ ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನಾರಚನೆ ಮಾಡಲು ನಿರ್ಧರಿಸಿದ್ದು, ಸಚಿವ ಸ್ಥಾನ ಪಡೆಯಲು ಲಾಬಿಯೂ ಆರಂಭವಾಗಿದೆ.

ಸಂಪುಟದಲ್ಲಿರುವ ನಿಷ್ಕ್ರೀಯ ಸಚಿವರನ್ನು ಕೈ ಬಿಟ್ಟು ಹೊಸ ಮುಖಗಳಿಗೆ ಅವಕಾಶ ನೀಡಿ ಎಂಬುದು ಶಾಸಕರ ಒತ್ತಾಯವಾಗಿದೆ. ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ಕೆಲವು ಸಚಿವರನ್ನು ಕೈ ಬಿಟ್ಟು, ಹೊಸಬರಿಗೆ ಅವಕಾಶ ಕೊಡಲು ಚಿಂತನೆ ನಡೆಸಿದ್ದಾರೆ.
['ಸಚಿವ ಸಂಪುಟದಿಂದ ಕೈ ಬಿಟ್ಟರೂ ಸಂತೋಷ']

ವಸತಿ ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಗಳ ಸಚಿವರು ಬದಲಾವಣೆಯಾಗುವುದು ಖಚಿತ ಎಂಬುದು ಸದ್ಯದ ಸುದ್ದಿ. ವಸತಿ ಖಾತೆಯ ಸಾಧನೆ ತೃಪ್ತಿದಾಯಕವಾಗಿಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳೇ ಕೆಲವು ದಿನಗಳ ಹಿಂದೆ ಹೇಳಿದ್ದರು. ಪತ್ರಿಕೆ ಸೋರಿಕೆ ವಿಚಾರದಲ್ಲಿ ಶಿಕ್ಷಣ ಇಲಾಖೆ ವಿವಾದಕ್ಕೆ ಸಿಲುಕಿದೆ. [ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಕೊಟ್ಟ ಸಿದ್ದರಾಮಯ್ಯ]

ಪಕ್ಷದ ಮೂಲಗಳ ಮಾಹಿತಿ ಪ್ರಕಾರ ಸಿದ್ದರಾಮಯ್ಯ ಅವರು ಏಳು ಸಚಿವರ ಪಟ್ಟಿಯನ್ನು ತಯಾರು ಮಾಡಿದ್ದು, ಅವರನ್ನು ಸಂಪುಟದಿಂದ ಕೈಬಿಡಲಿದ್ದಾರೆ. ಹೈಕಮಾಂಡ್ ನಾಯಕರ ಜೊತೆಗೂ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಏಳು ಸಚಿವರನ್ನು ಕೈ ಬಿಟ್ಟು ಹೊಸಬರಿಗೆ ಅವಕಾಶ ನೀಡಲಾಗುತ್ತದೆ. ವಿವರಗಳು ಚಿತ್ರಗಳಲ್ಲಿ..... [ಸಂಪುಟ ಪುನಾಚರನೆ, 10ಕ್ಕೂ ಹೆಚ್ಚು ಸಚಿವರ ಬದಲಾವಣೆ]

ಮುಖ್ಯಮಂತ್ರಿ ಬದಲಾವಣೆ ಇಲ್ಲ

ಮುಖ್ಯಮಂತ್ರಿ ಬದಲಾವಣೆ ಇಲ್ಲ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮೊದಲು ನಾಯಕತ್ವ ಬದಲಾವಣೆ ಕೂಗು ಎದ್ದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿ ದಲಿತ ನಾಯಕರಿಗೆ ಅವಕಾಶ ಕೊಡಿ ಎಂದು ಹೈಕಮಾಂಡ್ ನಾಯಕರಿಗೆ ಹಲವು ಶಾಸಕರು ಪತ್ರ ಬರೆದಿದ್ದರು. ಆದರೆ, ಹೈಕಮಾಂಡ್ ನಾಯಕರು ನಾಯಕತ್ವ ಬದಲಾವಣೆ ಸಾಹಸಕ್ಕೆ ಕೈ ಹಾಕಿಲ್ಲ. ಸಂಪುಟ ಪುನಾರಚನೆ ಮಾಡುವಂತೆ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದಾರೆ.

ಶಿಕ್ಷಣ ಖಾತೆಯಲ್ಲಿ ಬದಲಾವಣೆ?

ಶಿಕ್ಷಣ ಖಾತೆಯಲ್ಲಿ ಬದಲಾವಣೆ?

ದ್ವಿತೀಯ ಪಿಯುಸಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ, ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ವಿಚಾರದಲ್ಲಿ ಶಿಕ್ಷಣ ಇಲಾಖೆ ವಿವಾದಕ್ಕೆ ಸಿಲುಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರನ್ನು ಕೈ ಬಿಟ್ಟು, ಹೊಸಬರಿಗೆ ಅವಕಾಶ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅಂಬರೀಶ್ ಕೈ ತಪ್ಪಲಿದೆ ಸಚಿವ ಸ್ಥಾನ?

ಅಂಬರೀಶ್ ಕೈ ತಪ್ಪಲಿದೆ ಸಚಿವ ಸ್ಥಾನ?

ವಸತಿ ಇಲಾಖೆ ಸಾಧನೆ ತೃಪ್ತಿ ತಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವು ದಿನಗಳ ಹಿಂದೆ ವಿಧಾನಸಭೆಯಲ್ಲಿ ಹೇಳಿದ್ದರು. ವಸತಿ ಖಾತೆ ಸಚಿವ ಅಂಬರೀಶ್ ಅವರನ್ನು ಕೈ ಬಿಟ್ಟು ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. 'ಸಂಪುಟ ಪುನಾರಚನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮನ್ನು ಸಂಪುಟದಿಂದ ಕೈಬಿಟ್ಟರೂ ಸಂತೋಷ' ಎಂದು ಈಗಾಗಲೇ ಅಂಬರೀಶ್ ಹೇಳಿದ್ದಾರೆ.

ಸಾರಿಗೆ ಖಾತೆಯಲ್ಲಿ ಬದಲಾವಣೆ

ಸಾರಿಗೆ ಖಾತೆಯಲ್ಲಿ ಬದಲಾವಣೆ

ಅಚ್ಚರಿ ಎಂಬಂತೆ ಸಾರಿಗೆ ಖಾತೆಯಲ್ಲಿಯೂ ಬದಲಾವಣೆಯಾಗುವ ಸಾಧ್ಯತೆ ಇದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಸಂಪುಟದಿಂದ ಕೈ ಬಿಟ್ಟು ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ಲಭ್ಯವಾಗಿದೆ.

ರೋಷನ್ ಬೇಗ್ ಕೈತಪ್ಪಲಿದೆ ಪಟ್ಟ?

ರೋಷನ್ ಬೇಗ್ ಕೈತಪ್ಪಲಿದೆ ಪಟ್ಟ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂಲಸೌಕರ್ಯ ಸಚಿವ ರೋಷನ್ ಬೇಗ್ ಅವರನ್ನು ಕೈಬಿಟ್ಟು ಬೆಂಗಳೂರು ನಗರಕ್ಕೆ ಸೇರಿದ ಶಾಸಕರೊಬ್ಬರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಶಾಂತಿನಗರ ಕ್ಷೇತ್ರದ ಶಾಸಕ ಹ್ಯಾರೀಸ್ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂದು ಮಾತುಗಳು ಕೇಳಿಬರುತ್ತಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Congress in Karnataka is on course correction mode. Siddaramaiah announced that there would be a cabinet reshuffle at the end of this month and the lobbying has already begun. The Chief Minister of Karnataka, Siddaramaiah against whom his own party men have complained is expected to drop under performers in his cabinet and induct some young faces.
Please Wait while comments are loading...