• search
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಂಪುಟ ವಿಸ್ತರಣೆ ಕಾಲ ಸನ್ನಿಹಿತ: ಗುಟ್ಟು ಬಿಟ್ಟ ಸಿಎಂ

|

ಬೆಂಗಳೂರು, ಸೆಪ್ಟೆಂಬರ್ 15: 'ಸಂಪುಟ ವಿಸ್ತರಣೆಯೂ ಇದೆ ಹಾಗೂ ಸಂಪುಟ ಪುನಾರಚನೆಯೂ ಇದೆ 'ಹೌದು ಹೀಗೆಂದು ಹೇಳಿದ್ದು ಸ್ವತಃ ಸಿಎಂ ಸಿದ್ದರಾಮಯ್ಯ. ಅನೇಕ ದಿಗಳಿಂದ ಎಲ್ಲರ ಕುತೂಹಲಕ್ಕೆ ಕಾರಣವಾಗಿರುವ ಸಂಪುಟ ಪುನಾರಚನೆಗೆ ಕಾಲ ಸನ್ನಿಹಿತವಾಗಿದೆ ಎಂಬುದು ಸಿಎಂ ಮಾತಿನಲ್ಲಿ ಮಂಗಳವಾರ ವ್ಯಕ್ತವಾಯಿತು.

ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಜನತಾ ದರ್ಶನ ಕಾರ್ಯಕ್ರಮದ ನಂತರ ಮಾತನಾಡಿದ ಸಿಎಂ ಮಾಧ್ಯಮದವರೊಂದಿಗೆ ಅನೇಕ ಸಂಗತಿಗಳನ್ನು ಹಂಚಿಕೊಂಡರು.['ಈಶ್ವರಪ್ಪ ಹಳ್ಳಿ ಹೆಂಗಸರಂತೆ ಮಾತಾಡುತ್ತಾರೆ']

karnataka

ಪ್ರತಿ ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸಬೇಕೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ ಈ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

ವೈದ್ಯಕೀಯ ಪರಿಹಾರಕ್ಕೆ ಕೋರಿ ಬರುವ ಅರ್ಜಿಗಳ ಸಂಖ್ಯೆ ಅಧಿಕವಾಗಿರುತ್ತದೆ. ವಿಕಲ ಚೇತನರ ಮಾಸಾಶನ, ಸಾಲ ಸೌಲಭ್ಯ, ನಿವೇಶನ ಹಾಗೂ ಮನೆ ಹಂಚಿಕೆಗೂ ಹೇರಳವಾಗಿ ಅರ್ಜಿಗಳು ಸ್ವೀಕೃತವಾಗುತ್ತವೆ. ಭೂ ವ್ಯಾಜ್ಯಗಳು, ಮನೆ ಮಾಲೀಕನ ಕಿರುಕುಳ, ಜೀವ ರಕ್ಷಣೆ, ಪೊಲೀಸರ ನಿರ್ಲಕ್ಷ್ಯ ಕುರಿತ ದೂರುಗಳೂ ಜನತಾ ದರ್ಶನದಲ್ಲಿ ದಾಖಲಾಗುತ್ತವೆ ಎಂದು ಮುಖ್ಯಮಂತ್ರಿ ವಿವರಿಸಿದರು.

ಒಂಭತ್ತನೇ ಸ್ಥಾನದಲ್ಲಿ ಕರ್ನಾಟಕ
ಕೈಗಾರಿಕಾ ಪ್ರಗತಿಯಲ್ಲಿ ರಾಷ್ಟ್ರದಲ್ಲಿಯೇ ಕರ್ನಾಟಕವು ಒಂಭತ್ತನೇ ಸ್ಥಾನದಲ್ಲಿದೆ ಎಂಬ ವಿಶ್ವ ಬ್ಯಾಂಕ್‌ನ ವರದಿ ತಮಗೆ ಸಂತಸ ತಂದಿದೆ. ಬಂಡವಾಳ ಹೂಡಿಕೆಗೆ ಅತ್ಯುತ್ತಮ ಗಮ್ಯಸ್ಥಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕದಲ್ಲಿ ತಮ್ಮ ಸರ್ಕಾರ ಜಾರಿಗೆ ತಂದ ನೂತನ ಕೈಗಾರಿಕಾ ನೀತಿಯು ಕೈಗಾರಿಕಾ-ಸ್ನೇಹಿಯಾಗಿದೆ. ಅಲ್ಲದೆ, ಬಂಡವಾಳ ಹೂಡಲು ಉದ್ಯಮಿಗಳಿಗೆ ವಿಪುಲ ಅವಕಾಶಗಳನ್ನು ಕಲ್ಪಿಸಿದೆ.

ಜಿಮ್ ಮುಂದೂಡಿಕೆ?
ರಾಜ್ಯವು ತೀವ್ರ ಬರಗಾಲಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ನವೆಂಬರ್ 23ರಿಂದ 25ರವರೆಗೆ ನಿಗದಿಯಾಗಿದ್ದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ(ಜಿಮ್)ವನ್ನು ಮುಂದೂಡಬೇಕೆಂಬ ಸಲಹೆಯ ಸಾಧಕ-ಬಾಧಕಗಳನ್ನು ಪರಿಶೀಲಿಸಲಾಗುತ್ತಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಹೀಗೆಯೇ ಮುಂದುವರೆದರೆ, ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಎರಡು ತಿಂಗಳು ಮುಂದೂಡುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಸಿದ್ದರಾಮಯ್ಯ ಅವರು ಉತ್ತರಿಸಿದರು.

ಕಳಸಾ-ಬಂಡೂರಿ : ಮಧ್ಯಂತರ ಅರ್ಜಿ ಸಲ್ಲಿಸಲು ಪರಿಶೀಲನೆ
ಮಹದಾಯಿ ನದಿ ಪಾತ್ರದಲ್ಲಿ ಕಳಸಾ-ಬಂಡೂರಿ ನಾಲಾ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಎದುರಾಗಿರುವ ಸಮಸ್ಯೆಯನ್ನು ಬಗೆಹರಿಸಲು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ನವದೆಹಲಿಯಲ್ಲಿ ರಾಜ್ಯ ವಕೀಲ ತಂಡದ ಮುಖ್ಯಸ್ಥ ಫಾಲಿ ಎಸ್ ನಾರಿಮನ್ ಅವರನ್ನು ಭೇಟಿಯಾಗಿ ಭಾರತ ಸರ್ವೋಚ್ಚ ನ್ಯಾಯಾಲಯದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸುವ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಜನತೆಗೆ, ವಿಶೇಷವಾಗಿ ಆ ಭಾಗದ ರೈತರಿಗೆ, ನ್ಯಾಯ ದೊರಕಿಸಿಕೊಡುವ ಪ್ರಾಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದರು.

ಕಾವೇರಿ: ಸಂಕಷ್ಟವನ್ನು ಹಂಚಿಕೊಳ್ಳಬೇಕು
ತಮಿಳುನಾಡಿಗೆ ನೀರು ಬಿಡಲಾಗದು ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿಯವರು ಬರೆದಿರುವ ಪತ್ರಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ಕೊಡಲು ನೀರು ಎಲ್ಲಿದೆ? ಎಂದು ಪ್ರಶ್ನಿಸಿದರಲ್ಲದೆ, ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಾಧಿಕರಣದ ತೀರ್ಪಿಗೆ ಅನುಗುಣವಾಗಿ ತಮಿಳುನಾಡು ಸರ್ಕಾರ ಸಂಕಷ್ಟ ಸೂತ್ರವನ್ನು ಒಪ್ಪಿಕೊಂಡು, ಸಂಕಷ್ಟವನ್ನು ಹಂಚಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಕೃಷ್ಣ ರಾಜ ಸಾಗರ ತುಂಬಿದ ನಂತರ ಕಾವೇರಿಗೆ ಬಾಗಿನ
ಕೃಷ್ಣ ರಾಜ ಸಾಗರ ಜಲಾಶಯದ ಪೂರ್ಣ ಪ್ರಮಾಣದ ಮಟ್ಟ 124 ಅಡಿಗೆ ಪ್ರತಿಯಾಗಿ ಜಲಾಶಯದಲ್ಲಿ ಪ್ರಸ್ತುತ ನೀರಿನ ಮಟ್ಟ 106 ಅಡಿ ಇದೆ. ಅಂದರೆ 49 ಟಿಎಂಸಿಗೆ ಪ್ರತಿಯಾಗಿ ಜಲಾಶಯದಲ್ಲಿ 26 ಟಿಎಂಸಿ ನೀರು ಸಂಗ್ರಹವಿದೆ. ಕೃಷ್ಣ ರಾಜ ಸಾಗರ ಜಲಾಶಯ ತುಂಬಿದ ನಂತರ ದಕ್ಷಿಣದ ಗಂಗೆ ಕಾವೇರಿ ಮಾತೆಗೆ ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಲಾಗುವುದು ಎಂದು ಅವರು ಹೇಳಿದರು.[ಐಐಟಿ ಮೈಸೂರಿನ ಕೈ ತಪ್ಪಲು ಸಿದ್ದು ಕಾರಣ ಅಂದ್ರು ಪ್ರತಾಪ್]

ವಿದ್ಯುತ್ ಖರೀದಿ
ಉತ್ತರ ಭಾರತದ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ರಾಜ್ಯದಲ್ಲಿ ಎದುರಾಗಿರುವ ವಿದ್ಯುತ್ ಸಮಸ್ಯೆಯನ್ನು ಪರಿಹರಿಸಬಹುದು ಎಂಬ ಪತ್ರಕರ್ತರೋರ್ವರ ಸಲಹೆಯನ್ನು ತಳ್ಳಿ ಹಾಕಿದ ಸಿದ್ದರಾಮಯ್ಯ ಅವರು, ಉತ್ತರ ಭಾರತದ ರಾಜ್ಯಗಳಿಂದ ವಿದ್ಯುತ್ ಖರೀದಿಸಲು ಮಾರ್ಗಗಳಿಲ್ಲ (ಕಾರಿಡಾರ್ ಇಲ್ಲ). ವಾಸ್ತವಿಕ ನೆಲಗಟ್ಟಿನಲ್ಲಿ ಮಾತನಾಡಿ ಎಂದರು. ಅಲ್ಲದೆ, ರಾಜ್ಯದ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಲು ತಮ್ಮ ಸರ್ಕಾರ ಎಲ್ಲಾ ಪ್ರಾಮಾಣಿಕ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದು ಪುನರುಚ್ಚರಿಸಿದರು.

ರಾಘವೇಶ್ವರ ಶ್ರೀ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗುವುದು. ಇಂತಹ ಪ್ರಕರಣಗಳಲ್ಲಿ ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ. ಯಾರ ಒತ್ತಡಕ್ಕೂ ಹಾಗೂ ಯಾವ ಒತ್ತಡಕ್ಕೂ ಮಣಿಯುವುದಿಲ್ಲ. ನೆಲದ ನ್ಯಾಯವೇ ಅಂತಿಮ ಎಂದು ಸ್ಪಷ್ಟಪಡಿಸಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ಇನ್ನಷ್ಟು siddaramaiah ಸುದ್ದಿಗಳುView All

English summary
Bengaluru: Karnataka CM Siddaramaiah finally told about Cabinet reshuffle. The state government taking steps towards protecting farmer.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more