Caste Census Report: ಜಾತಿಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟ

ಬೆಂಗಳೂರು, ಜನವರಿ 16: ವಿಧಾನಸೌಧದಲ್ಲಿ ಇಂದು (ಗುರುವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಜಾತಿಗಣತಿ ವರದಿ ಮುಚ್ಚಿದ ಲಕೋಟೆಯಲ್ಲಿರುವುದನ್ನು ತೆರೆಯಲು ತೀರ್ಮಾನಸಲಾಗಿದೆ. ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಮುಂದಿಡಲು ನಿರ್ಧರಿಸಲಾಗಿದೆ. ಆ ಮೂಲಕ ಕರ್ನಾಟಕವೇ ಎದುರು ನೋಡುತ್ತಿದ್ದ ಜಾತಿಗಣತಿ ವರದಿ ಬಗ್ಗೆ ಸಿದ್ದರಾಮಯ್ಯ ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 35 ವಿಷಯಗಳು ಚರ್ಚೆ ಮತ್ತು ನಿರ್ಣಯಕೈಗೊಳ್ಳಲಾಗಿದೆ. ಅದರಲ್ಲಿ ಪ್ರಮುಖವಾಗಿ, ಜಾತಿಗಣತಿ ವರದಿ ಮುಚ್ಚಿದ ಲಕೋಟೆಯಲ್ಲಿರುವುದನ್ನು ತೆರೆಯಲು ಮುಂದಿನ ಕ್ಯಾಬಿನೆಟ್‌ಗೆ ತರಲು ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಹೆಚ್​.ಕೆ.ಪಾಟೀಲ್ ತಿಳಿಸಿದ್ದಾರೆ.

Karnataka Cabinet took an important decision about the caste census report

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟದಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ಮಾಡುವುದಿಲ್ಲ. ಬದಲಾಗಿ ಮುಂದಿನ ಸಚಿವ ಸಂಪುಟದ ಮುಂದೆ ಇಡಲಾಗುವುದು ಎಂದು ತಿಳಿಸಿದ್ದರು. ಅದರಂತೆ ಇಂದಿನ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ.

ಇನ್ನೂ ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ 1997 ರ ಕಾಯ್ದೆಯ ಸಿಂಧುತ್ವವನ್ನು ಎತ್ತಿ ಹಿಡಿಯಲು ಸರ್ವೋಚ್ಛ ನ್ಯಾಯಾಲಯದ ಮುಂದೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಯನ್ನು ಪರಿಗಣಿಸಬೇಕೆಂದು ಕೋರಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ.

ಈ ಹಿಂದೆ ಮಾನ್ಯ ಉಚ್ಛ ನ್ಯಾಯಾಲಯ ಅನುಮೋದಿಸಿದ ಕರ್ನಾಟಕ ವಿಧಾನ ಮಂಡಲ ಅಂಗೀಕರಿಸಿದ ಅಧಿನಿಯಮವನ್ನು ಎತ್ತಿಹಿಡಿಯಲು 1997 ರಲ್ಲಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಈಗಾಗಲೇ ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಸಚಿವ ಸಂಪುಟ ಸಭೆಯ ನಂತರ ಸಂಪುಟದ ನಿರ್ಣಯದ ಕುರಿತು ವಿವರಿಸಿದರು.

ಸರ್ವೋಚ್ಛ ನ್ಯಾಯಾಲಯವು ದಿನಾಂಕ: 10.12.2024ರ ತೀರ್ಪಿನಂತೆ ಬೆಂಗಳೂರು ಅರಮನೆ ಮೈದಾನಕ್ಕೆ ಸೇರಿದ 15 ಎಕರೆ 17.5 ಗುಂಟೆ ಜಮೀನನ್ನು ಉಪಯೋಗಿಸಿಕೊಳ್ಳುವುದಕ್ಕೆ ನಿಗಧಿಪಡಿಸಿದ ಟಿ.ಡಿ.ಆರ್ ದರದ ಬಗ್ಗೆ ಸಚಿವ ಸಂಪುಟವು ಇಂದು ಚರ್ಚಿಸಿತು. ನ್ಯಾಯಾಂಗ ನಿಂದನೆ ಅರ್ಜಿಯ ವಿಷಯದಲ್ಲಿ ಕಾನೂನಿನ ಪ್ರಕಾರ ಅಗತ್ಯ ಕ್ರಮ ವಹಿಸಲು ಸಚಿವ ಸಂಪುಟವು ಸಂಬAಧಪಟ್ಟ ಇಲಾಖೆಗೆ ನಿರ್ದೇಶಿಸಿತು.

ಸರ್ವೋಚ್ಛ ನ್ಯಾಯಾಲಯದ ದಿನಾಂಕ: 21.12.2024ರ ಆದೇಶಾನುಸಾರ ರೂ.2,53,500 ಪ್ರ.ಚ.ಮೀಟರ್‌ಗೆ (ಬಳ್ಳಾರಿ ರಸ್ತೆ) ಮತ್ತು ರೂ.2,04,000 ಪ್ರ.ಚ.ಮೀಟರ್‌ಗೆ ವನ್ನು (ಜಯಮಹಲ್ ರಸ್ತೆ) ಮೌಲ್ಯದಂತೆ ಟಿ.ಡಿ.ಆರ್ ವನ್ನು ನೀಡಲು ಅಂದಾಜು ರೂ.3011.00 ಕೋಟಿಗಳ ಆರ್ಥಿಕ ಹೊರೆ ಬಗ್ಗೆ ಈಗಾಗಲೇ ರಾಜ್ಯ ಸರ್ಕಾರ ಸರ್ವೋಚ್ಛ ನ್ಯಾಯಾಲಯದಲ್ಲಿ ಅಪೀಲು ಸಲ್ಲಿಸಿದ್ದರೂ ಸಹ ಅದನ್ನು ತಿರಸ್ಕರಿಸಲಾಗಿರುತ್ತದೆ.

ಅಲ್ಲದೇ, ಸರ್ವೋಚ್ಛ ನ್ಯಾಯಾಲಯದ 2001 ರ ಆದೇಶವನ್ನು ಉಲ್ಲಂಘಿಸಿ ಸುಮಾರು ಬೆಂಗಳೂರು ಅರಮನೆಯ ೨ ಲಕ್ಷ ಚ.ಮೀಟರ್ ವ್ಯಾಪ್ತಿಯಲ್ಲಿ ಖಾಯಂ ಕಟ್ಟಡಗಳನ್ನು ನಿರ್ಮಿಸಿರುವ ಮಹಾರಾಜರ ಉತ್ತರಾಧಿಕಾರಿಗಳ ಮೇಲೆ ನ್ಯಾಯಾಂಗದ ನಿಂದನೆ ಅರ್ಜಿಯನ್ನು ಸಲ್ಲಿಸಲು ಸಹ ಸಚಿವ ಸಂಪುಟ ತೀರ್ಮಾನಿಸಿದೆ. ೧೫ ದಿನಗಳಲ್ಲಿ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ದಿನಾಂಕ: 09.01.2025 ರಂದು ಸರ್ಕಾರದ ವತಿಯಿಂದ ನೋಟಿಸ್‌ಗಳನ್ನು ಜಾರಿ ಮಾಡಲಾಗಿದೆ ಎಂದು ಹೆಚ್‌ ಕೆ ಪಾಟೀಲ್‌ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+