IAS: ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಗೆ ಕೇಂದ್ರದಲ್ಲಿ ಮಹತ್ವದ ಹುದ್ದೆ
ಬೆಂಗಳೂರು, ಮಾರ್ಚ್ 25: ಕರ್ನಾಟಕ ಕೇಡರ್‌ನ ಹಲವು ಐಎಎಸ್ ಅಧಿಕಾರಿಗಳು ಕೇಂದ್ರ ಸರ್ಕಾರದ ಸೇವೆಗೆ ನಿಯೋಜನೆಗೊಂಡಿದ್ದು, ಹಲವಾರು ಮಹತ್ವದ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟದ ನೇಮಕಾತಿ ಸಮಿತಿ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ ಅಜಯ್ ಸೇಠ್ ಅವರನ್ನು ಪ್ರಮುಖ ಹುದ್ದೆಗೆ ನೇಮಕ ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.
ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದೆ. ಸಂಪುಟ ನೇಮಕಾತಿ ಸಮಿತಿಯು ಅಜಯ್ ಸೇಠ್, ಐಎಎಸ್ (ಕೆಎನ್: 1987), ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ, ಅವರನ್ನು ಹಣಕಾಸು ಸಚಿವಾಲಯಕ್ಕೆ ಹಣಕಾಸು ಕಾರ್ಯದರ್ಶಿಯಾಗಿ ನೇಮಕ ಮಾಡುವ ಪ್ರಸ್ತಾಪಕ್ಕೆ ಅನುಮೋದನೆ ನೀಡಿದೆ ಎಂದು ಹೇಳಿದೆ.

ಅಜಯ್ ಸೇಠ್ ಕರ್ನಾಟಕ ಕೇಡರ್‌ನ 1987ನೇ ಬ್ಯಾಚ್ ಐಎಎಸ್ ಅಧಿಕಾರಿ. ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಅಜಯ್ ಸೇಠ್ ಅವರಿಗೆ ಕೆಲವು ದಿನಗಳ ಹಿಂದೆ ಕಂದಾಯ ಇಲಾಖೆಯ ಕಾರ್ಯದರ್ಶಿಯ ಹೆಚ್ಚುವರಿ ಪ್ರಭಾರವನ್ನು ಸಹ ನೀಡಿ ಆದೇಶವನ್ನು ಹೊರಡಿಸಲಾಗಿತ್ತು.
ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ: ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ ಅಜಯ್ ಸೇಠ್ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಪ್ರಸ್ತುತ ಅವರನ್ನು ಹಣಕಾಸು ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ತಿಳಿಸಿದೆ.
ಅಜಯ್ ಸೇಠ್ ಪ್ರಸ್ತುತ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಅಲ್ಲದೇ ಮಾರ್ಚ್ 1ರಿಂದ ಅವರಿಗೆ ಕಂದಾಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಯನ್ನು ಸಹ ನೀಡಲಾಗಿತ್ತು.
1987ರ ಬ್ಯಾಚ್‌ನ ಒಡಿಶಾ ಕೇಡರ್‌ನ ಐಎಎಸ್ ಅಧಿಕಾರಿ ತುಹಿನ್ ಕೆ ಪಾಂಡೆ ಅವರನ್ನು ಹಣಕಾಸು ಸಚಿವಾಲಯದಿಂದ ವರ್ಗಾವಣೆ ಮಾಡಿ, ಕಳೆದ ತಿಂಗಳು ಭಾರತೀಯ ಭದ್ರತಾ ಮತ್ತು ವಿನಿಮಯ ಮಂಡಳಿಯ (ಸೆಬಿ) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಬಳಿಕ ಹಣಕಾಸು ಕಾರ್ಯದರ್ಶಿ ಹುದ್ದೆ ಖಾಲಿಯಾಗಿತ್ತು. ಈ ಹುದ್ದೆಗೆ ಅಜಯ್ ಸೇಠ್ ನೇಮಕಗೊಂಡಿದ್ದಾರೆ.
ಅಜಯ್ ಸೇಠ್ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಬಿಟೆಕ್ ಪದವಿ ಮತ್ತು ಎಂಬಿಎ ಪದವಿಯನ್ನು ಪಡೆದಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿವಿಧ ಹುದ್ದೆಗಳಲ್ಲಿ ಅವರು ಕಾರ್ಯ ನಿರ್ವಹಣೆ ಮಾಡಿದ್ದಾರೆ.
2021ರಲ್ಲಿ ಅಜಯ್ ಸೇಠ್ ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದರು. ಕೇಂದ್ರ ಸೇವೆಗೆ ತೆರಳುವ ಮೊದಲು ಅವರು ಬೆಂಗಳೂರಿನ ನಮ್ಮ ಮೆಟ್ರೋ ಯೋಜನೆ ನಿರ್ವಹಣೆ ಮಾಡುವ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.
2018 ರಿಂದ ಅಜಯ್ ಸೇಠ್ ಬಿಎಂಆರ್‌ಸಿಎಲ್ ಎಂಡಿಯಾಗಿದ್ದರು. ನಮ್ಮ ಮೆಟ್ರೋ 2-ಎ, ನಮ್ಮ ಮೆಟ್ರೋ 3-ಬಿ, ವಿಮಾನ ನಿಲ್ದಾಣದ ಮೆಟ್ರೋ ಸಂಪರ್ಕ ಯೋಜನೆಗಳನ್ನು ಅವರ ಅವಧಿಯಲ್ಲಿಯೇ ವಿನ್ಯಾಸಗೊಳಿಸಲಾಗಿದೆ.
ಬಿಎಂಆರ್‌ಸಿಎಲ್‌ನ ಹಣಕಾಸು ಸ್ಥಿತಿಯನ್ನು ಸುಧಾರಿಸಲು ಅಜಯ್ ಸೇಠ್ ಹಲವಾರು ಕ್ರಮಗಳನ್ನು ಕೈಗೊಂಡಿದ್ದರು. ಖಾಸಗಿ ಸಂಸ್ಥೆಗಳ ಜೊತೆ ಒಪ್ಪಂದ ಮಾಡಿಕೊಂಡು ಯೋಜನೆಯನ್ನು ಜಾರಿಗೊಳಿಸುವ ತೀರ್ಮಾನದ ಹಿಂದೆ ಅಜಯ್ ಸೇಠ್ ಶ್ರಮವಿತ್ತು ಎಂದು ಅಧಿಕಾರಿಗಳು ನೆನಪಿಸಿಕೊಳ್ಳುತ್ತಾರೆ.
ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಗಳಾದ ಸಿ. ಶಿಖಾ, ಡಾ. ಅಜಯ್ ನಾಗಭೂಷಣ್ ಸೇರಿದಂತೆ ವಿವಿಧ ಅಧಿಕಾರಿಗಳು ಈಗಾಗಲೇ ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದು, ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications