Heavy Rain: ಮಳೆ.. ಮಳೆ.. ಮುಂದಿನ 5 ದಿನ ಭರ್ಜರಿ ಮಳೆ!

ಮಳೆಯ ಅಬ್ಬರ ಮತ್ತೆ ಶುರುವಾಗಿದೆ, ರಾತ್ರಿ ಪೂರ್ತಿ ಭರ್ಜರಿ ಮಳೆ ಬಿದ್ದು ಇಳೆ ತಂಪಾಗಿ ಬೆಂಗಳೂರು ಮತ್ತೆ ಕೂಲ್ ಕೂಲ್ ಆಗಿದೆ. ಬೆಂಗಳೂರು ಮಾತ್ರವಲ್ಲ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಿದೆ. ಹಾಗಾದ್ರೆ ಈ ಮಳೆ ಇಲ್ಲಿಗೆ ನಿಲ್ಲುತ್ತಾ? ಅಥವಾ ಇನ್ನು ಎಷ್ಟು ದಿನಗಳ ಕಾಲ ಮಳೆ ಸುರಿಯಬಹುದು? ಸಂಪೂರ್ಣ ಮಾಹಿತಿಗೆ ಮುಂದೆ ಓದಿ.

ಮಳೆ ವಿಚಾರದಲ್ಲಿ ಈಗ ಎಲ್ಲಾ ಅಂದುಕೊಂಡಂತೆ ನಡೆಯುತ್ತಿದ್ದು, ಬೆಂಗಳೂರಿಗೆ 15 ದಿನ ಮೊದಲೇ ಮುಂಗಾರು ಪ್ರವೇಶ ಆಗಿದೆ. ಇದು ಕನ್ನಡಿಗರಿಗೆ ಖುಷಿ ಕೊಟ್ಟಿದೆ. ಮತ್ತೊಂದ್ಕಡೆ ಇದೇ ರೀತಿಯಾಗಿ ಮಳೆ ಇನ್ನೂ ಕೆಲವು ದಿನಗಳ ಕಾಲ ಅಬ್ಬರಿಸುವ ಮುನ್ಸೂಚನೆ ಇದ್ದು, ಮುಂಗಾರು ಮಳೆಯ ಅಬ್ಬರಕ್ಕೆ ಕನ್ನಡಿಗರು ಫುಲ್ ಖುಷ್ ಆಗಿದ್ದಾರೆ. ಹಾಗಾದರೆ ಯಾವ, ಯಾವ ಜಿಲ್ಲೆಗಳಿಗೆ ಭರ್ಜರಿ ಮಳೆಯಾಗುತ್ತೆ? ಆ ಮಾಹಿತಿಗಾಗಿ ಮುಂದೆ ಓದಿ.

Karnataka Capital Bengaluru Receives Monsoon Rain And Heavy Rain Is Possible For Next 5 Days

ಯಾವ ಯಾವ ಜಿಲ್ಲೆಯಲ್ಲಿ ಮಳೆ?

ಜೂನ್ 1ರಿಂದ ಮಳೆ ಅಬ್ಬರ ಮತ್ತೆ ಶುರುವಾಗುವ ನಿರೀಕ್ಷೆ ಇತ್ತು. ಆ ನಿರೀಕ್ಷೆಗೆ ತಕ್ಕಂತೆ ಇದೀಗ ಮಳೆ ಬಿದ್ದಿದೆ ಬೆಂಗಳೂರು ಸೇರಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಸೇರಿ ಕೊಡಗು & ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆ ಮುನ್ಸೂಚನೆ ಇತ್ತು. ಬೆಂಗಳೂರು ಸುತ್ತಮುತ್ತಲ ಪ್ರದೇಶದಲ್ಲಿ ಕೂಡ ಮಳೆಯಾಗುವ ನಿರೀಕ್ಷೆ ಇತ್ತು. ಅದೇ ರೀತಿ ನಿನ್ನೆಯಿಂದ ಈ ರೀತಿ ಭರ್ಜರಿ ಮಳೆ ಬರುತ್ತಿದೆ. ಮತ್ತೊಂದು ಕಡೆ ಮುಂದಿನ 5 ದಿನಗಳ ಕಾಲ ಹೀಗೆಯೇ ಮಳೆ ಬೀಳಲಿದೆ. ಹಾಗಾದ್ರೆ ಉತ್ತರ ಕರ್ನಾಟಕದಲ್ಲಿ ಮಳೆ ಬೀಳುವುದು ಯಾವಾಗ? ಮುಂದೆ ಓದಿ.

ಉತ್ತರ ಕರ್ನಾಟಕದಲ್ಲೂ ಅಬ್ಬರ

ಜೂನ್ 3 ರಂದು ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ & ರಾಯಚೂರು ಸೇರಿದಂತೆ ಯಾದಗಿರಿ, ಬೀದರ್, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಈ ಮೂಲಕ ಕರ್ನಾಟಕ ಪೂರ್ತಿ ಮಳೆ ಆವರಿಸಿ ಅಬ್ಬರಿಸಲಿದೆ. ಉತ್ತರ ಕನ್ನಡ, ತುಮಕೂರು, ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿ ಚಿಕ್ಕಬಳ್ಳಾಪುರ, ಕೋಲಾರ, ವಿಜಯಪುರ ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆ ಬೀಳಲಿದೆ ಎಂದು ತಿಳಿಸಲಾಗಿದೆ. ಈ ಮೂಲಕ ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಯಲ್ಲಿ ಕೂಡ, ಮುಂಗಾರು ಮಳೆ ಭಾರಿ ಆರ್ಭಟ ತೋರಿಸಲಿದ್ದು ಈ ಸುದ್ದಿ ರೈತರಿಗೆ ಖುಷಿ ಕೊಟ್ಟಿದೆ.

ತುಂಬುತ್ತಿವೆ ಕರ್ನಾಟಕದ ಡ್ಯಾಂಗಳು

ಮಳೆ ಇಲ್ಲದೆ ಬೆಳೆ ಕಳೆದುಕೊಳ್ಳುವ ಹಂತಕ್ಕೆ ಬಂದು ಚಿಂತೆಯಲ್ಲಿ ಮುಳುಗಿದ್ದ, ಕನ್ನಡ ನಾಡಿನ ರೈತರಿಗೆ ಭಾರಿ ಸುದ್ದಿ ಸಿಕ್ಕಿದೆ. ಏನಂದರೆ ಕರ್ನಾಟಕದಲ್ಲಿ ಮಳೆ ಭಾರಿ ಆರ್ಭಟ ತೋರಿಸುತ್ತಿದ್ದು ಇದರ ಜೊತೆಗೆ ಮತ್ತೊಂದು ಗುಡ್‌ನ್ಯೂಸ್ ಸಿಕ್ಕಿದೆ. ಮುಂಗಾರು ಮಳೆಯ ಆಗಮನಕ್ಕೆ ಮೊದಲೇ ಕರ್ನಾಟಕದಲ್ಲಿ ಭರ್ಜರಿ ಮಳೆಯಾಗುತ್ತೆ ಅಂತ, ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ಮಳೆ ಅಬ್ಬರದ ಪರಿಣಾಮ, ಈಗಾಗಲೇ ಕರ್ನಾಟಕದ ಡ್ಯಾಂಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಕೂಡ ಬರುತ್ತಿದೆ.

ಭರ್ಜರಿ ಮಳೆಗೆ ತುಂಬುತ್ತಿವೆ ಡ್ಯಾಂ!

ಮಳೆ ಇಲ್ಲದೆ ಮನುಷ್ಯರ ಬದುಕು ಊಹೆಗೂ ನಿಲುಕದು. ಯಾಕಂದ್ರೆ ಮನುಷ್ಯರ ಬಹು ಮುಖ್ಯ ಅಂಶ ಅಂದ್ರೆ ನೀರು. ಹೀಗಾಗಿ ನೀರು ಇಲ್ಲದೆ ಮನುಷ್ಯರು ಏನೂ ಮಾಡಲು ಆಗೋದಿಲ್ಲ. ಆದ್ರೆ ಮನುಷ್ಯ ತಾನೇ ಮಾಡಿಕೊಂಡಿದ್ದ ತಪ್ಪುಗಳಿಂದ ಸಾಕಷ್ಟು ಸಮಸ್ಯೆ ಎದುರಿಸುವ ವಾತಾವರಣ ನಿರ್ಮಾಣ ಆಗಿದೆ. ಸರಿಯಾದ ಸಮಯಕ್ಕೆ ಮಳೆಯೇ ಬೀಳುತ್ತಿಲ್ಲ. ಬಿಸಿಲು & ಬಿಸಿ ಗಾಳಿ ಕೂಡ ಹೆಚ್ಚಾಗುತ್ತಿದೆ. ಹೀಗಾಗಿ ಮನುಷ್ಯರು ಪರದಾಡುತ್ತಿದ್ದು ನೀರಿಗೆ ಯುದ್ಧವೇ ನಡೆಯುತ್ತೇನೋ.? ಎಂಬ ಭಯವು ಕೂಡ ಆವರಿಸಿತ್ತು. ಇದೇ ಸಮಯದಲ್ಲಿ ಸರಿಯಾಗಿ ಭರ್ಜರಿ ಮಳೆ ಬರುತ್ತಿದ್ದು, ಕಾವೇರಿ ನದಿ ಸೇರಿದಂತೆ ಹಲವು ಡ್ಯಾಂಗಳು ತುಂಬುತ್ತಿವೆ.

ಮಳೆ ಅಬ್ಬರಕ್ಕೆ ಅಂಡರ್‌ಪಾಸ್ ಬಂದ್!

ಬೆಂಗಳೂರಿನಲ್ಲಿ ಮಳೆ ಅಬ್ಬರಿಸಿದ ರೀತಿಗೆ ಅಂಡರ್‌ಪಾಸ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ನೀರು ಅವಾಂತರ ಸೃಷ್ಟಿ ಮಾಡಿತ್ತು. ಅದರಲ್ಲೂ ಬೆಂಗಳೂರು ಹೃದಯ ಭಾಗದಲ್ಲಿ ಈ ಸಮಸ್ಯೆ ಹೆಚ್ಚಾಗಿತ್ತು. ಹೀಗೆ ಭಾರಿ ಮಳೆ ಬಿದ್ದ ಸುದ್ದಿ ಗೊತ್ತಾಗದೆ ನೇರವಾಗಿ ರಸ್ತೆಗಳಿಗೆ ಬೈಕ್ & ಕಾರ್‌ನಲ್ಲಿ ಎಂಟ್ರಿ ಕೊಟ್ಟ ಸವಾರರು ರೋಡ್‌ನಲ್ಲಿ ನಿಂತಿದ್ದ ಎದೆ ಎತ್ತರದ ನೀರು ನೋಡಿ ಬೆಚ್ಚಿಬಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+