ಮುಂದಿನ 3 ಗಂಟೆಗಳಲ್ಲಿ ಭರ್ಜರಿ ಮಳೆ ಅಲರ್ಟ್!

ಮಳೆರಾಯ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ, ಮೇ ತಿಂಗಳ ಆರಂಭದಲ್ಲಿ ಮಳೆಯ ಅಬ್ಬರಕ್ಕೆ ಜನರು ಕೂಡ ಫುಲ್ ಖುಷ್ ಆಗಿದ್ದರು. ಆದರೆ ಆ ನಂತರ ಮತ್ತೆ ಮಳೆ ಬ್ರೇಕ್‌ನ ಪಡೆದುಕೊಂಡಿತ್ತು. ಆದರೆ ಈಗ ಮತ್ತೆ ಮಳೆಯ ಅಬ್ಬರ ಶುರುವಾಗಿದೆ. ಅದರಲ್ಲೂ ಮುಂದಿನ 3 ಗಂಟೆ ಅವಧಿಯಲ್ಲಿ ಭರ್ಜರಿಯಾಗಿ ಮಳೆ ಸುರಿಯುವ ಮುನ್ಸೂಚನೆ ಸಿಕ್ಕಿದೆ.

ಮಳೆ ಇಲ್ಲದೆ ಬೆಳೆ ಒಣಗುತ್ತಿದ್ದ ಸಮಯದಲ್ಲಿ ಮಳೆ ಬಂದಿತ್ತು. ಹಾಗೇ ಬೋರ್‌ಗಳು ಬತ್ತಿ ಹೋಗಿ, ಕುಡಿಯುವ ನೀರಿಗೂ ಜನರು ಪರದಾಡುವ ಸಮಯದಲ್ಲಿ ಮಳೆ ಬಂದು ಒಂದಷ್ಟು ನೆಮ್ಮದಿ ನೀಡಿತ್ತು. ಆದರೆ ದಿಢೀರ್ ಕಳೆದ ಒಂದು ವಾರದಿಂದ ಮಳೆ ಕಣ್ಮರೆ ಆಗಿದ್ದ ಕಾರಣ ಮತ್ತೆ ಬಿಸಿ ಬಿಸಿ ಅನುಭವ ಆಗುತ್ತಿತ್ತು. ಆದರೆ ಇದೀಗ ಮತ್ತೆ ಮಳೆ ಅಬ್ಬರಿಸಲು, ಭರ್ಜರಿ ಅಬ್ಬರದಿಂದ ಸುರಿಯಲು ಶುರು ಮಾಡಿದೆ. ಹೀಗಾಗಿ ಕರ್ನಾಟಕ ತಂಪು ತಂಪು ಕೂಲ್ ಕೂಲ್ ಆಗಿದೆ. ಅದರಲ್ಲೂ ಇದೀಗ ಮುಂದಿನ 3 ಗಂಟೆ ಅವಧಿಯಲ್ಲಿ, ಭರ್ಜರಿ ಮಳೆ ಸುರಿಯುವ ವಾರ್ನಿಂಗ್ ನೀಡಲಾಗಿದೆ.

Karnataka Capital Bengaluru Will Receive Heavy Rain In Next 3 Hours

ಮುಂದಿನ 3 ಗಂಟೆಯಲ್ಲಿ ಭಾರಿ ಮಳೆ!

ಹೌದು, ಈಗ ಭರ್ಜರಿ ಮಳೆಯ ಎಚ್ಚರಿಕೆ ನೀಡಿರುವುದು ಬೆಂಗಳೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ. ಮಳೆ ಇಲ್ಲದೆ ಬೆಂಗಳೂರು ಕೂಡ ಬಿಸಿ ಏರಿ ನರಳಿತ್ತು. ಹೀಗಿದ್ದಾಗ ಮಳೆಯ ಅಬ್ಬರ ಮತ್ತೆ ಶುರುವಾಗಿದೆ. ಭಾರಿ ಅಬ್ಬರದಿಂದ ಮಳೆ ಬರಲು ಆರಂಭ ಮಾಡಿದೆ. ಇಂದು ಬೆಳಗ್ಗೆಯಿಂದ ಬೆಂಗಳೂರಿನಲ್ಲಿ ಭಾರಿ ಬಿಸಿಲು ಇದ್ದ ಕಾರಣ, ಜನ ಕೂಡ ಮಳೆ ಯಾವಾಗ ಬರುತ್ತಪ್ಪಾ? ಅಂತಾ ಗೊಣಗುತ್ತಿದ್ದರು. ಹೀಗಿದ್ದಾಗ, ಮಧ್ಯಾಹ್ನ ಮೋಡಗಳು ಬೆಂಗಳೂರಿಗೆ ಮುತ್ತಿಗೆ ಹಾಕಿದ್ದವು. ಆ ನಂತರ ದಿಢೀರ್ ಮಳೆಯ ಆಗಮನ ಆಯಿತು.

ಯಾವ ಜಿಲ್ಲೆಗಳಲ್ಲಿ ಮತ್ತೆ ಮಳೆ?

ಜೂನ್ 1ರಿಂದ ಮಳೆ ಅಬ್ಬರ ಮತ್ತೆ ಶುರುವಾಗುವ ನಿರೀಕ್ಷೆ ಇತ್ತು, ಇಂದು ಮಳೆ ಆರ್ಭಟದ ಮುನ್ಸೂಚನೆ ಸಿಕ್ಕಿತ್ತು. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕೊಡಗು & ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆಯ ಮುನ್ಸೂಚನೆ ಇತ್ತು. ಬೆಂಗಳೂರು ಸುತ್ತಮುತ್ತ ಕೂಡ ಮಳೆಯಾಗುವ ನಿರೀಕ್ಷೆ ಇತ್ತು. ಅದರಂತೆ ಈಗ ಮಳೆ ಅಬ್ಬರ ಶುರುವಾಗಿದೆ. ಅಲ್ಲದೆ, ಜೂನ್ 3 ರಂದು ಮಳೆ ತನ್ನ ಅಸಲಿ ಮುಖ ತೋರಿಸಲಿದೆ ಎಂಬ ಮಾಹಿತಿ ಇದೆ.

ಕಲಬುರಗಿ, ವಿಜಯಪುರ, ಗದಗ...

ಜೂನ್ 3 ರಂದು ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ & ರಾಯಚೂರು ಸೇರಿದಂತೆ ಯಾದಗಿರಿ, ಬೀದರ್, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗೆ ಭಾರಿ & ಭರ್ಜರಿ ಮಳೆ ಆಗಮನಕ್ಕೆ ಈಗ ಮುಹೂರ್ತ ಫಿಕ್ಸ್ ಆಗಿದೆ. ರೈತರು ಕೂಡ ಈ ಸುದ್ದಿಯನ್ನ ಕೇಳಿ ನೆಮ್ಮದಿ ನಿಟ್ಟುಸಿರು ಬಿಟ್ಟಿದ್ದಾರೆ.

ಮಳೆಯ ಅಬ್ಬರ ಮತ್ತೆ ಶುರುವಾಗಿದೆ, ರಾತ್ರಿ ಪೂರ್ತಿ ಭರ್ಜರಿ ಮಳೆ ಬಿದ್ದು ಇಳೆ ತಂಪಾಗಿ ಬೆಂಗಳೂರು ಮತ್ತೆ ಕೂಲ್ ಕೂಲ್ ಆಗಿದೆ. ಬೆಂಗಳೂರು ಮಾತ್ರವಲ್ಲ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಿದೆ. ಹಾಗಾದ್ರೆ ಈ ಮಳೆ ಇಲ್ಲಿಗೆ ನಿಲ್ಲುತ್ತಾ? ಅಥವಾ ಇನ್ನು ಎಷ್ಟು ದಿನಗಳ ಕಾಲ ಮಳೆ ಸುರಿಯಬಹುದು? ಸಂಪೂರ್ಣ ಮಾಹಿತಿಗೆ ಮುಂದೆ ಓದಿ.

ಮಳೆ ವಿಚಾರದಲ್ಲಿ ಈಗ ಎಲ್ಲಾ ಅಂದುಕೊಂಡಂತೆ ನಡೆಯುತ್ತಿದ್ದು, ಬೆಂಗಳೂರಿಗೆ 15 ದಿನ ಮೊದಲೇ ಮುಂಗಾರು ಪ್ರವೇಶ ಆಗಿದೆ. ಇದು ಕನ್ನಡಿಗರಿಗೆ ಖುಷಿ ಕೊಟ್ಟಿದೆ. ಮತ್ತೊಂದ್ಕಡೆ ಇದೇ ರೀತಿಯಾಗಿ ಮಳೆ ಇನ್ನೂ ಕೆಲವು ದಿನಗಳ ಕಾಲ ಅಬ್ಬರಿಸುವ ಮುನ್ಸೂಚನೆ ಇದ್ದು, ಮುಂಗಾರು ಮಳೆಯ ಅಬ್ಬರಕ್ಕೆ ಕನ್ನಡಿಗರು ಫುಲ್ ಖುಷ್ ಆಗಿದ್ದಾರೆ.

ತುಂಬುತ್ತಿವೆ ಕರ್ನಾಟಕದ ಡ್ಯಾಂಗಳು

ಮಳೆ ಇಲ್ಲದೆ ಬೆಳೆ ಕಳೆದುಕೊಳ್ಳುವ ಹಂತಕ್ಕೆ ಬಂದು ಚಿಂತೆಯಲ್ಲಿ ಮುಳುಗಿದ್ದ, ಕನ್ನಡ ನಾಡಿನ ರೈತರಿಗೆ ಭಾರಿ ಸುದ್ದಿ ಸಿಕ್ಕಿದೆ. ಏನಂದರೆ ಕರ್ನಾಟಕದಲ್ಲಿ ಮಳೆ ಭಾರಿ ಆರ್ಭಟ ತೋರಿಸುತ್ತಿದ್ದು ಇದರ ಜೊತೆಗೆ ಮತ್ತೊಂದು ಗುಡ್‌ನ್ಯೂಸ್ ಸಿಕ್ಕಿದೆ. ಮುಂಗಾರು ಮಳೆಯ ಆಗಮನಕ್ಕೆ ಮೊದಲೇ ಕರ್ನಾಟಕದಲ್ಲಿ ಭರ್ಜರಿ ಮಳೆಯಾಗುತ್ತೆ ಅಂತ, ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ಮಳೆ ಅಬ್ಬರದ ಪರಿಣಾಮ, ಈಗಾಗಲೇ ಕರ್ನಾಟಕದ ಡ್ಯಾಂಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಕೂಡ ಬರುತ್ತಿದೆ.

ಭರ್ಜರಿ ಮಳೆಗೆ ತುಂಬುತ್ತಿವೆ ಡ್ಯಾಂ!

ಮಳೆ ಇಲ್ಲದೆ ಮನುಷ್ಯರ ಬದುಕು ಊಹೆಗೂ ನಿಲುಕದು. ಯಾಕಂದ್ರೆ ಮನುಷ್ಯರ ಬಹು ಮುಖ್ಯ ಅಂಶ ಅಂದ್ರೆ ನೀರು. ಹೀಗಾಗಿ ನೀರು ಇಲ್ಲದೆ ಮನುಷ್ಯರು ಏನೂ ಮಾಡಲು ಆಗೋದಿಲ್ಲ. ಆದ್ರೆ ಮನುಷ್ಯ ತಾನೇ ಮಾಡಿಕೊಂಡಿದ್ದ ತಪ್ಪುಗಳಿಂದ ಸಾಕಷ್ಟು ಸಮಸ್ಯೆ ಎದುರಿಸುವ ವಾತಾವರಣ ನಿರ್ಮಾಣ ಆಗಿದೆ. ಸರಿಯಾದ ಸಮಯಕ್ಕೆ ಮಳೆಯೇ ಬೀಳುತ್ತಿಲ್ಲ. ಬಿಸಿಲು & ಬಿಸಿ ಗಾಳಿ ಕೂಡ ಹೆಚ್ಚಾಗುತ್ತಿದೆ. ಹೀಗಾಗಿ ಮನುಷ್ಯರು ಪರದಾಡುತ್ತಿದ್ದು ನೀರಿಗೆ ಯುದ್ಧವೇ ನಡೆಯುತ್ತೇನೋ.? ಎಂಬ ಭಯವು ಕೂಡ ಆವರಿಸಿತ್ತು. ಇದೇ ಸಮಯದಲ್ಲಿ ಸರಿಯಾಗಿ ಭರ್ಜರಿ ಮಳೆ ಬರುತ್ತಿದ್ದು, ಕಾವೇರಿ ನದಿ ಸೇರಿದಂತೆ ಹಲವು ಡ್ಯಾಂಗಳು ತುಂಬುತ್ತಿವೆ.

ಮಳೆ ಅಬ್ಬರಕ್ಕೆ ಅಂಡರ್‌ಪಾಸ್ ಬಂದ್!

ಬೆಂಗಳೂರಿನಲ್ಲಿ ಮಳೆ ಅಬ್ಬರಿಸಿದ ರೀತಿಗೆ ಅಂಡರ್‌ಪಾಸ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ನೀರು ಅವಾಂತರ ಸೃಷ್ಟಿ ಮಾಡಿತ್ತು. ಅದರಲ್ಲೂ ಬೆಂಗಳೂರು ಹೃದಯ ಭಾಗದಲ್ಲಿ ಈ ಸಮಸ್ಯೆ ಹೆಚ್ಚಾಗಿತ್ತು. ಹೀಗೆ ಭಾರಿ ಮಳೆ ಬಿದ್ದ ಸುದ್ದಿ ಗೊತ್ತಾಗದೆ ನೇರವಾಗಿ ರಸ್ತೆಗಳಿಗೆ ಬೈಕ್ & ಕಾರ್‌ನಲ್ಲಿ ಎಂಟ್ರಿ ಕೊಟ್ಟ ಸವಾರರು ರೋಡ್‌ನಲ್ಲಿ ನಿಂತಿದ್ದ ಎದೆ ಎತ್ತರದ ನೀರು ನೋಡಿ ಬೆಚ್ಚಿಬಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+