ಒಂದೂವರೆ ಲಕ್ಷ ವಿದ್ಯಾರ್ಥಿಗಳಿಗೆ ಒನ್ ಇಂಡಿಯಾದಿಂದ ಆಲ್ ದಿ ಬೆಸ್ಟ್

ಬೆಂಗಳೂರು, ಮೇ 9: ವೃತ್ತಿ ಶಿಕ್ಷಣ ಕೋರ್ಸ್‌ಗಳಿಗೆ ನಡೆಯುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೇ.12 ಹಾಗೂ 13ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ವೈದ್ಯಕೀಯ, ಇಂಜಿನಿಯರಿಂಗ್, ದಂತ ವೈದ್ಯಕೀಯ, ಹೋಮಿಯೋಪಥಿ, ಆರ್ಯುವೇದಿಕ್ ಸೇರಿದಂತೆ ವೃತ್ತಿ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಈ ಬಾರಿ ಒಟ್ಟು 1,57,580 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ರಾಜ್ಯಾದ್ಯಂತ 343 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಬೆಂಗಳೂರಿನಲ್ಲಿ 73 ಕೇಂದ್ರಗಳನ್ನು ತೆರೆಯಲಾಗಿದ್ದು, ಇದರಲ್ಲಿ 82079 ವಿದ್ಯಾ ರ್ಥಿಗಳಿದ್ದರೆ, 75501 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲಿದ್ದಾರೆ. [ ಮೇ.12ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ]

ಬೆಂಗಳೂರಿನಲ್ಲೇ ಅತ್ಯಧಿಕ 38787 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. 2219 ಹೊರನಾಡ ಗಡಿನಾಡ ಕನ್ನಡಿಗರು 58 ಪರೀಕ್ಷಾ ಕೇಂದ್ರಗಳಲ್ಲಿ ಹಾಜರಾಗಲಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿವಾರ್ಹಕ ನಿರ್ದೇಶಕಿ ಸುಷ್ಮಾ ಗೋಡಬೋಲೆ ಹೇಳಿದ್ದಾರೆ.

Karnataka CET 2015 Exam on May 12 and 13- KEA

* ಮೇ 12ರಂದು ಬೆಳಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ ಮಧ್ಯಾಹ್ನ 2.30ರಿಂದ 3.30ರವರೆಗೆ ಗಣಿತ ವಿಷಯಕ್ಕೆ ಪರೀಕ್ಷೆ ನಡೆಯಲಿದೆ. [ಮುಷ್ಕರದಿಂದಾಗಿ ಸಿಇಟಿ ಪರೀಕ್ಷೆ ಮುಂದೂಡಿಕೆ]
* ಮೇ 13ರಂದು ಬೆಳಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.30ರವರೆಗೆ ರಸಾಯನಶಾಸ್ತ್ರ, ಸಂಜೆ
* 4.45ರಿಂದ 5.45ರವರೆಗೆ ಹೊರನಾಡು ಗಡಿನಾಡು ಕನ್ನಡಿಗರಿಗೆ ಪರೀಕ್ಷೆ ಜರುಗಲಿದೆ
* ಪ್ರತಿ ವಿಷಯಕ್ಕೆ 60 ಅಂಕಗಳನ್ನು ನಿಗದಿಪಡಿಸಲಾಗಿದ್ದು, ತಪ್ಪು ಉತ್ತರಕ್ಕೆ ನಕಾರತ್ಮಕ ಅಂಕ ಇರುವುದಿಲ್ಲ.
* ಮೇ 16ರಂದು ಕೃಷಿ ಕೋರ್ಸ್‌ಗಳಿಗೆ ಸಂಬಂಧಿಸಿದ ಪ್ರಾಯೋಗಿಕ ಪರೀಕ್ಷೆ.
* ಹೆಚ್ಚಿನ ವಿವರಗಳಿಗೆ ಸಹಾಯವಾಣಿ ಕೇಂದ್ರ ಆರಂಭಿಸಿದ್ದು , 080-23460460ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

Karnataka CET 2015 Exam on May 12 and 13- KEA

ಕೀ ಉತ್ತರಗಳು ಪ್ರಕಟ ಯಾವಾಗ?: ತಾತ್ಕಾಲಿಕ ಸರಿ ಉತ್ತರಗಳನ್ನು ಮೇ 15ರಂದು ಪ್ರಕಟಿಸಲಾಗುವುದು. ಈ ಸರಿ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಮೇ 18ರವರೆಗೆ ಅವಕಾಶವಿರುತ್ತದೆ. ಮೇ 26ರಂದು ಫಲಿತಾಂಶ ಪ್ರಕಟವಾಗಲಿದೆ. ರೈತರ ಮಕ್ಕಳಿಗೆ ಕೃಷಿ ಕೋಟಾ ಮೀಸಲಾತಿಯನ್ನು ಶೇ.23.8ರಿಂದ ಶೇ.40ಕ್ಕೆ ಹೆಚ್ಚಿಸಲಾಗಿದೆ. [ಕಾಮೆಡ್ ಕೆ ಆನ್ಲೈನ್ ಟೆಸ್ಟ್ ಟಿಕೆಟ್ ಇಲ್ಲಿ ಪಡೆಯಿರಿ]

ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ತಮ್ಮ ಕೇಂದ್ರಗಳಿಗೆ ಅರ್ಧಗಂಟೆ ಮುಂಚಿತವಾಗಿ ಹಾಜರಿರಬೇಕು. ಪರೀಕ್ಷೆ ವೇಳೆ ಮೊಬೈಲ್, ಲ್ಯಾಪ್‌ಟ್ಯಾಪ್ ಸೇರಿದಂತೆ ಯಾವುದೇ ರೀತಿಯ ವಸ್ತುಗಳನ್ನು ತರಬಾರದು. ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತರಲೇಬೇಕು ಎಂದು ಸೂಚನೆ ನೀಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳಿಗೂ ಒನ್ ಇಂಡಿಯಾ ವತಿಯಿಂದ ಆಲ್ ದಿ ಬೆಸ್ಟ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+