ಸಿಇಟಿ ಅರ್ಜಿಯ ತಿದ್ದುಪಡಿಗೆ 5 ದಿನಗಳ ಕಾಲಾವಕಾಶ
ಬೆಂಗಳೂರು, ಮಾ.5 : ಈ ಬಾರಿ ಸಿಇಟಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವಕಾಶ ಕಲ್ಪಿಸಿತ್ತು. ಮಾರ್ಚ್ 5 ಅರ್ಜಿಗಳನ್ನು ಭರ್ತಿ ಮಾಡಲು ಕೊನೆಯದಿನವಾಗಿದೆ. ಅರ್ಜಿ ಸಲ್ಲಿಸುವಾಗ ಆಗಿರುವ ತಪ್ಪುಗಳನ್ನು ಸರಿಪಡಿಸಲು ಐದು ದಿನಗಳ ಕಾಲಾವಕಾಶವನ್ನು ನೀಡಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಸಿಇಟಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಆಗಿರುವ ತಪ್ಪುಗಳನ್ನು ಸರಿಪಡಿಸುವುದಕ್ಕಾಗಿ ಅಭ್ಯರ್ಥಿಗಳಿಗೆ ಐದು ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದೆ. [ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?]

ಮಾರ್ಚ್ 6ರಿಂದ 10ರವರೆಗೆ ಅರ್ಜಿ ತಿದ್ದುಪಡಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ತಮ್ಮ ಬಳಕೆದಾರರ ಖಾತೆ ಮತ್ತು ಪಾಸ್‌ವರ್ಡ್ ಬಳಸಿ ತುಂಬಿರುವ ಅರ್ಜಿಯಲ್ಲಿರುವ ತಪ್ಪುಗಳನ್ನು ಸರಿ ಪಡಿಸಬಹುದು ಅಥವಾ ಅರ್ಜಿ ಅಪೂರ್ಣವಾಗಿದ್ದರೆ ಪೂರ್ಣಗೊಳಿಸಬಹುದು. [ಅರ್ಜಿ ತುಂಬಲು ಇಲ್ಲಿ ಕ್ಲಿಕ್ ಮಾಡಿ]
ಆನ್‌ಲೈನ್ ಮೂಲಕ ಅರ್ಜಿ : 2015ರ ಸಿಇಟಿ ಪರೀಕ್ಷೆ ನೋಂದಣಿ ಪ್ರಕ್ರಿಯೆಯನ್ನು ಆನ್‌ಲೈನ್ ಮೂಲಕ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಅರ್ಜಿ ಸಲ್ಲಿಸುವಾಗ ಗೊಂದಲಗಳು ಉಂಟಾದರೆ ಸಹಾಯಕವಾಗಲಿ ಎಂದು ಸಹಾಯವಾಣಿಯನ್ನು ತೆರೆಯಲಾಗಿದ್ದು 080-23460460 ದೂರವಾಣಿ ಸಂಖ್ಯೆಗೆ (ಬೆಳಗ್ಗೆ 9.30ರಿ ಸಂಜೆ 6) ಗಂಟೆಯ ತನಕ ಕರೆ ಮಾಡಬಹುದಾಗಿತ್ತು. [ಸಿಇಟಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ]












Click it and Unblock the Notifications