ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭಾ ಚುನಾವಣೆ: ಸಿಇಟಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ

|
Google Oneindia Kannada News

ಬೆಂಗಳೂರು, ಮಾರ್ಚ್ 11: ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್ 23ರಂದು ನಡೆಯಬೇಕಿದ್ದ ಸಿಇಟಿ ಪರೀಕ್ಷೆ ಮುಂದೂಡುವ ಸಾಧ್ಯತೆ ಇದೆ. ಏಪ್ರಿಲ್ 23ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಇರುವುದರಿಂದ ಪರೀಕ್ಷೆಗೆ ಕೂರಲಿರುವ ಅಭ್ಯರ್ಥಿಗಳು, ಅವರ ಪೋಷಕರಿಗೆ ಮತದಾನ ಮಾಡಲು ಅಡ್ಡಿಯಾಗುವ ಸಾಧ್ಯತೆ ಇದೆ.

ರಾಜ್ಯ ಮತ್ತು ಹೊರ ರಾಜ್ಯಗಳ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಹಾಗಾಗಿ ಪರೀಕ್ಷೆ ದಿನಾಂಕ ಬದಲಾವಣೆ ಬಗ್ಗೆ ಇಂದು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಕೇಂದ್ರ ಚುನಾವಣಾ ಆಯೋಗವು 2019ರ ಲೋಕಸಭಾ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಶುಕ್ರವಾರದಿಂದ 2ನೇ ಪಿಯುಸಿ ಪರೀಕ್ಷೆ, 6 ಲಕ್ಷ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ಶುಕ್ರವಾರದಿಂದ 2ನೇ ಪಿಯುಸಿ ಪರೀಕ್ಷೆ, 6 ಲಕ್ಷ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಏಪ್ರಿಲ್ 18 ಮತ್ತು 23ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ. ಏಪ್ರಿಲ್ 18 ರಂದು 14 ಸ್ಥಾನ, ಏಪ್ರಿಲ್ 23ರಂದು ಉಳಿದ 14 ಸ್ಥಾನಗಳಿಗೆ ಮತದಾನ ನಡೆಯಲಿದೆ. ಚುನಾವಣಾ ಫಲಿತಾಂಶ ಮೇ 23ರಂದು ಘೋಷಣೆಯಾಗಲಿದೆ.

Karnataka CET 2019 clashes with state poll date

ಏಪ್ರಿಲ್ 11ಕ್ಕೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಮೇ 23ರಂದು ಮತಗಳ ಎಣಿಕೆ ನಡೆಯಲಿದೆ. ಎರಡನೇ ಹಂತದ ಚುನಾವಣೆ ಏಪ್ರಿಲ್‌ 18ರಂದು ನಡೆಯಲಿದೆ. 3ನೇ ಹಂತದ ಚುನಾವಣೆ ಏಪ್ರಿಲ್ 23ರಂದು ನಡೆಯಲಿದೆ. 4ನೇ ಹಂತ 29 ಏಪ್ರಿಲ್, 5ನೇ ಹಂತ ಮೇ6ರಂದು, ಮೇ 12ಕ್ಕೆ 6ನೇ ಹಂತ, 7ನೇ ಹಂತದ ಚುನಾವಣೆ ಮೇ 19ರಂದು ನಡೆಯಲಿದೆ.

ಮೊದಲ ಹಂತದಲ್ಲಿ 20 ರಾಜ್ಯಗಳ 91 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.ಒಂದೇ ಹಂತದಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಆಂಧ್ರ, ಅರುಣಾಚಲ, ಗೋವಾ, ಗುಜರಾತ್‌, ಹರ್ಯಾಣ, ಹಿಮಾಚಲ ಪ್ರದೇಶ, ಕೇರಳ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಪಂಜಾಬ್, ಸಿಕ್ಕಿಂ, ತೆಲಂಗಾಣ, ತಮಿಳುನಾಡು, ಉತ್ತರಾಖಂಡ್, ಅಂಡಮಾನ್- ನಿಕೋಬಾರ್, ದಾದ್ರಾ ನಗರ್‌ಹವೇಲಿ, ದಮನ್ ಅಂಡ್ ದಿಯು, ಲಕ್ಷದ್ವೀಪ, ದಿಲ್ಲಿ, ಪುದುಚೇರಿ, ಚಂಡೀಗಢ.

English summary
The CET 2019, which is set to kick off on April 23, as the date coincides with the second phase loksabha elections in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X