ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಆಗಸ್ಟ್​ 28 ಹಾಗೂ 29ರಂದು ಸಿಇಟಿ ಪರೀಕ್ಷೆ

|
Google Oneindia Kannada News

ಬೆಂಗಳೂರು, ಜೂನ್ 8: ವೃತ್ತಿಪರ ಕೋರ್ಸ್‌ಗಳಿಗೆ ಸೀಟು ಹಂಚಿಕೆಯ ಮಾನದಂಡವಾಗಿ ಮುಂಬರುವ ಆಗಸ್ಟ್​ 28 ಹಾಗೂ 29ರಂದು ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಡಾ.ಸಿ.ಎನ್ ಅಶ್ವಥ್ ನಾರಾಯಣ ನೇತೃತ್ವದ ಸಭೆಯಲ್ಲಿ ಸಿಇಟಿ ಪರೀಕ್ಷೆ ಪರೀಕ್ಷೆಯ ದಿನಾಂಕ ಘೋಷಣೆಯಾಗಿದೆ. ವೃತ್ತಿಪರ ಕೋರ್ಸ್ ಹಂಚಿಕೆಗೆ ಈ ವರ್ಷ ಕೇವಲ ಸಿಇಟಿ ಪರೀಕ್ಷೆಯ ಅಂಕಗಳೇ ಮಾನದಂಡವನ್ನಾಗಿ ಪರಿಗಣಿಸಲು ಉನ್ನತ ಶಿಕ್ಷಣ ಇಲಾಖೆ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಯಿತು.

ಸಿಇಟಿ ಪರೀಕ್ಷೆ ಸಂಬಂಧ ಇಂದು ಮಂಗಳವಾರ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಯಿತು. ಸೀಟು ಹಂಚಿಕೆಗೆ ಈ ವರ್ಷ ಪಿಯುಸಿಯ ಶೇ.50 ಅಂಕ ಪರಿಗಣಿಸದೇ ಇರಲು ಸಭೆಯಲ್ಲಿ ತೀರ್ಮಾನ ತೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Karnataka CET 2021 Dates Announced, Test On Aug 28, 29

ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನ ತೆಗೆದುಕೊಂಡಿದ್ದು, ಒಂದು ವೇಳೆ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾದರೆ ಮಾತ್ರ ದಿನಾಂಕವನ್ನು ಮುಂದೂಡಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.

ಉನ್ನತ ಶಿಕ್ಷಣ ಇಲಾಖೆಯ ಸಭೆಯಲ್ಲಿ ಸಿಇಟಿ ಪರೀಕ್ಷೆ ಬರೆಯಲು ಇದ್ದ ಅರ್ಹತೆ ಅಂಕಗಳ ಮಾನದಂಡ ಬದಲಾವಣೆಗೂ ನಿರ್ಧಾರ ಮಾಡಲಾಗಿದ್ದು, ಈ ವರ್ಷ ಗ್ರೇಡ್ ಆಧಾರದಲ್ಲಿ ಪಿಯುಸಿ ಫಲಿತಾಂಶ ನೀಡುತ್ತಿರುವ ಕನಿಷ್ಠ ಅಂಕಗಳ ಮಾನದಂಡ ನಿಯಮ ಸಡಿಲಿಕೆ ಮಾಡಿ, ವಿಜ್ಞಾನ ವಿಭಾಗದ ಎಲ್ಲಾ ವಿದ್ಯಾರ್ಥಿಗಳಿಗೂ ಸಿಇಟಿ ಬರೆಯಲು ಅವಕಾಶ ಕಲ್ಪಿಸಿದೆ.

ಪಿಯುಸಿಯಲ್ಲಿ ಉತ್ತೀರ್ಣರಾದ ಆದ ವಿದ್ಯಾರ್ಥಿಗಳು ಸಿಇಟಿ ಬರೆಯಲು ಕನಿಷ್ಠ ಶೇ.40-45 ಅಂಕ ಕಡ್ಡಾಯವಾಗಿ ಪಡೆಯಬೇಕಿತ್ತು. ಈ ಅಂಕಗಳನ್ನು ಪಡೆಯದೇ ಇದ್ದಲ್ಲಿ ಸಿಇಟಿ ಬರೆಯಲು ಅರ್ಹತೆ ಪಡೆಯುತ್ತಿರಲಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಓಬಿಸಿ, ಸಾಮಾನ್ಯ ವಿದ್ಯಾರ್ಥಿಗಳಿಗೆ ಕನಿಷ್ಠ ಅಂಕ ನಿಯಮವನ್ನು ನಿಗದಿ ಮಾಡಲಾಗಿತ್ತು.

ಮಂಗಳವಾರ ನಡೆದ ಸಿಇಟಿ ಪರೀಕ್ಷೆ ನಿರ್ಧಾರದ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಆಯುಕ್ತ ಪ್ರದೀಪ್, ಕೆಇಎ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

Recommended Video

lockdown ಬಗ್ಗೆ ಮೋದಿ ಭಾಷಣ! | Oneindia Kannada

ಮೊದಲನೇ ವರ್ಷದ/ ಮೊದಲನೇ ಸೆಮಿಸ್ಟರ್‌ನ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನದ ಕೋರ್ಸ್‍ಗಳು ಮತ್ತು ಬಿ-ಫಾರ್ಮಾ-ಡಿ ಕೋರ್ಸ್‍ಗಳ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ.

English summary
KCET 2021 Date: Karnataka Common Entrance Test (KCET) will be held on August 28 and August 29, confirms Minister for Higher Education Ashwath Narayan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X