Karnataka CET 2025: ಸಿಇಟಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ; ಇಲ್ಲಿದೆ ಮಾಹಿತಿ
Karnataka CET 2025 Exam Schedule: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ರ ಸಿಇಟಿ ಪರೀಕ್ಷೆ ದಿನಾಂಕಗಳನ್ನು ಘೋಷಣೆ ಮಾಡಿದೆ. ಹಾಗಾದ್ರೆ ಯಾವಾಗಿನಿಂದ ಎಲ್ಲಿಯವರೆಗೂ ಪರೀಕ್ಷೆಗಳು ನಡೆಯಲಿದ ಎನ್ನುವ ಸಂಪೂರ್ಣ ವಿವರವನ್ನು ದಿನಾಂಕಗಳ ಸಹಿತ ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಿಇಟಿ ಪರೀಕ್ಷೆ ಏಪ್ರಿಲ್ 15ರಿಂದ ಆರಂಭವಾಗಲಿದ್ದು, ಏಪ್ರಿಲ್ 17ರ ವರೆಗೆ ನಡೆಯಲಿದೆ. ಕನ್ನಡ ಭಾಷಾ ಪರೀಕ್ಷೆ ಏಪ್ರಿಲ್ 15ಕ್ಕೆ ನಿಗದಿಯಾಗಿದೆ. ಜನವರಿ 23ರಿಂದ ಅರ್ಜಿ ಸಲ್ಲಿಕೆ ಆರಂಭ ಆಗಿದ್ದು, 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಸಾಧ್ಯತೆಯಿದೆ.

ಈ ಹಿಂದೆ ಈ ಪರೀಕ್ಷೆಯನ್ನು ಏಪ್ರಿಲ್ 18ಕ್ಕೆ ನಿಗದಿ ಮಾಡಲಾಗಿತ್ತು. ಆದರೆ ಏಪ್ರಿಲ್ 18ರಂದು ಗುಡ್ ಫ್ರೈಡೇ ಇರುವುದರಿಂದ ಸರ್ಕಾರ ಪರೀಕ್ಷೆ ದಿನಾಂಕವನ್ನು ಬದಲಿಸುವ ನಿರ್ಧಾರವನ್ನು ಕೈಗೊಂಡಿದೆ. ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ನಡೆಸುವ ಸಿಇಟಿ ಪರೀಕ್ಷೆಗೆ ಜನವರಿ 23ರಿಂದ ಅರ್ಜಿ ಸಲ್ಲಿಕೆ ಆರಂಭ ಆಗಿದ್ದು, ಈ ವರ್ಷ 3,30,000 ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುವ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.
ಏಪ್ರಿಲ್ 15ರಂದು ಕನ್ನಡ ಪರೀಕ್ಷೆ ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. 10ನೇ ತರಗತಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿತವರು, ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಮತ್ತು ಕೆಇಎ ನಡೆಸಿದ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೂ ವಿನಾಯಿತಿ ಇರುತ್ತದೆ.
ಏಪ್ರಿಲ್ 16 ರಂದು 10:30ರಿಂದ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2:30ರಿಂದ ರಾಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಮರುದಿನ ಅಂದರೆ ಏಪ್ರಿಲ್ 17ರಂದು ಬೆಳಗ್ಗೆ ಗಣಿತ ಮತ್ತು ಮಧ್ಯಾಹ್ನ ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ.
ಮೌಲ್ಯಮಾಪನ ಯಾವಾಗ?: 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ಕ್ಕೆ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಕರ್ನಾಟಕ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆ 2 ಅನ್ನು ಮೇ 2025ರಲ್ಲಿ ತಾತ್ಕಾಲಿಕವಾಗಿ ನಡೆಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರು ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯಕ್ಕೂ ಸಿದ್ಧರಾಗಲಿದ್ದಾರೆ.
ಬಹುತೇಕ ಏಪ್ರಿಲ್ ಕೊನೆಯ ವಾರದೊಳಗೆ ಮೌಲ್ಯಮಾಪನ ಮುಗಿಯಲಿದ್ದು, ಈ ಬಾರಿಯ ಪರೀಕ್ಷೆಯ ಫಲಿತಾಂಶ ಮೇ ಮೊದಲ ವಾರದಲ್ಲಿ ಪ್ರಕಟ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಬಾರಿ ಈಗಾಗಲೇ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನವೂ ಮುಗಿಯುವ ಹಂತಕ್ಕೆ ಬಂದಿದ್ದು, ಏಪ್ರಿಲ್ ತಿಂಗಳಲ್ಲೇ ಫಲಿತಾಂಶ ಬರುವ ನಿರೀಕ್ಷೆಯಿದೆ. ಈಗಾಗಲೇ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗುವ ದಿನಾಂಕ ತಿಳಿಸಲಾಗಿದೆ. ಜಿಲ್ಲಾ ಕೇಂದ್ರಗಳಲ್ಲೂ ಮೌಲ್ಯಮಾಪನ ನಡೆಯಲಿದೆ.
ಏಪ್ರಿಲ್ ಕೊನೆಯ ವಾರದವರೆಗೂ ಮೌಲ್ಯಮಾಪನ ಮುಂದುವರೆಯಲಿವೆ ಎಂದು ತಿಳಿದುಬಂದಿದೆ. ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು 2024 ರಲ್ಲಿ ಮೇ 9ರಂದು ಬೆಳಗ್ಗೆ 10:40ಕ್ಕೆ ಪ್ರಕಟ ಮಾಡಲಾಗಿತ್ತು. ಈ ಬಾರಿ ಮೌಲ್ಯಮಾಪನ ಬೇಗನೇ ಶುರು ಆಗುವುದರಿಂದ ಫಲಿತಾಂಶವೂ ಶೀಘ್ರವೇ ಪ್ರಕಟ ಆಗಲಿದೆ. ಜೂನ್‌ನಲ್ಲಿಯೇ ಪಿಯುಸಿ ಪ್ರಥಮ ತರಗತಿಗಳನ್ನು ಆರಂಭಿಸುವ ಉದ್ದೇಶದಿಂದ ಮಂಡಳಿಯು ಈ ಕ್ರಮ ತೆಗೆದುಕೊಂಡಿದೆ ಎನ್ನಲಾಗುತ್ತಿದೆ.












Click it and Unblock the Notifications