ಮೇ. 12, 13ರ ಕರ್ನಾಟಕ ಸಿಇಟಿ ಪರೀಕ್ಷೆ ವೇಳಾಪಟ್ಟಿ
ಬೆಂಗಳೂರು, ಏ. 28 : ಸಾರಿಗೆ ಸಂಘಟನೆಗಳು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ ಮುಂದೂಡಲಾಗಿದ್ದ ಸಿಇಟಿ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮೇ. 12 ಮತ್ತು 13ರಂದು ಪರೀಕ್ಷೆಗಳು ನಡೆಯಲಿವೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಏ.29 ಮತ್ತು 30ರಂದು ನಡೆಯಬೇಕಾಗಿದ್ದ ಸಿಇಟಿ ಪರೀಕ್ಷೆಗಳನ್ನು ಮೇ. 12 ಮತ್ತು 13ಕ್ಕೆ ಮುಂದೂಡಿ ಆದೇಶ ಹೊರಡಿಸಿತ್ತು. ಸದ್ಯ, ಈ ಪರೀಕ್ಷೆಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. [ಮುಷ್ಕರದಿಂದಾಗಿ ಸಿಇಟಿ ಪರೀಕ್ಷೆ ಮುಂದೂಡಿಕೆ]

ಪರೀಕ್ಷೆಯ ವೇಳಾಪಟ್ಟಿ
* ಮೇ 12 ರಂದು ಬೆಳಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ
ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ [ಎಸ್ಸೆಸ್ಸೆಲ್ಸಿ, ಪಿಯೂ ಫಲಿತಾಂಶ ದಿನಾಂಕ ದೇವರಿಗ್ಗೊತ್ತು]
* ಮೇ 13ರಂದು ಬೆಳಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ
ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ [ಪರೀಕ್ಷೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ]
* ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ಮೇ 13ರಂದು ಸಂಜೆ 4.45ರಿಂದ 5.45ರವರೆಗೆ ನಡೆಯಲಿದೆ.












Click it and Unblock the Notifications