ಕರ್ನಾಟಕ; ಸಿಇಟಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು, ಮೇ 13 : ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಏಪ್ರಿಲ್‌ನಲ್ಲಿ ನಡೆಯಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಮುಂದೂಡಲಾಗಿತ್ತು. ಈಗ ಪರೀಕ್ಷೆ ನಡೆಸುವ ಹೊಸ ದಿನಾಂಕವನ್ನು ಘೋಷಣೆ ಮಾಡಲಾಗಿದೆ.

ಬುಧವಾರ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ ಅವರು ಹೊಸ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದರು. ಜುಲೈ 30 ಮತ್ತು 31ರಂದು ಈ ಬಾರಿಯ ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಹೇಳಿದರು.

Karnataka CET Exam 2020 Date Announced

ಮೊದಲು ಏಪ್ರಿಲ್ 22 ಮತ್ತು 23ರಂದು ಸಿಇಟಿ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟವಾಗಿತ್ತು. ಆದರೆ, ಕೊರೊನಾ ಹಡರದಂತೆ ತಡೆಯಲು ಲಾಕ್ ಡೌನ್ ಜಾರಿಗೊಳಿಸಿದ ಕಾರಣ ಪರೀಕ್ಷೆಯನ್ನು ಮೂಂದೂಡಲಾಗಿತ್ತು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸಿಇಟಿ ಪರೀಕ್ಷೆ ದಿನಾಂಕವನ್ನು ಅಂತಿಮಗೊಳಿಸಲಾಗಿದೆ. ಪರೀಕ್ಷೆಯ ವೇಳಾಪಟ್ಟಿ ಶೀಘ್ರದಲ್ಲಿಯೇ ಬಿಡುಗಡೆಗೊಳ್ಳುವ ನಿರೀಕ್ಷೆ ಇದೆ.

ಲಾಕ್ ಡೌನ್ ಘೋಷಣೆಯಾದ ಪರಿಣಾಮ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯ ಇಂಗ್ಲಿಶ್ ಪರೀಕ್ಷೆ ಇನ್ನೂ ಬಾಕಿ ಇದೆ. ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದ ಬಳಿಕ ಸಿಇಟಿ ಪರೀಕ್ಷೆ ನಡೆಯಲಿದೆ.

ಕೊರೊನಾ ಹಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ್ದು 3ನೇ ಹಂತದ ಲಾಕ್ ಡೌನ್ ದೇಶದಲ್ಲಿ ಜಾರಿಯಲ್ಲಿದೆ. ಮೇ 17ರ ಬಳಿಕ 4ನೇ ಹಂತದ ಲಾಕ್ ಡೌನ್ ಜಾರಿಗೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+