• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕ ಸಿಇಟಿ ಪರೀಕ್ಷೆ 2020; ವೇಳಾಪಟ್ಟಿ

|

ಬೆಂಗಳೂರು, ಮೇ 13 : ಈ ಬಾರಿಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಜುಲೈ 30 ಮತ್ತು 31ರಂದು ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಬುಧವಾರ ಬೆಳಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ ಸಿಇಟಿ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದ್ದರು. ಸಂಜೆ ಪರೀಕ್ಷಾ ವೇಳಾಪಟ್ಟಿಯನ್ನು ಅವರು ಟ್ವೀಟರ್‌ನಲ್ಲಿ ಬಿಡುಗಡೆ ಮಾಡಿದ್ದಾರೆ.

ಕರ್ನಾಟಕ; ಸಿಇಟಿ ಪರೀಕ್ಷೆ ದಿನಾಂಕ ಪ್ರಕಟ

ಕರ್ನಾಟಕ ಸರ್ಕಾರದ ನಿರ್ದೇಶನದ ಅನ್ವಯ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೊದಲನೇ ವರ್ಷದ/ಮೊದಲ ಸೆಮಿಸ್ಟರ್ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ ಕೋರ್ಸ್‌ ಮತ್ತು ಬಿ-ಫಾರ್ಮ್ ಮತ್ತು ಫಾರ್ಮಾ-ಡಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಪರೀಕ್ಷೆಗಳನ್ನು ನಡೆಸಲಿದೆ.

ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ವಿಶೇಷ ಕ್ರ್ಯಾಶ್ ಕೋರ್ಸ್ ಬಗ್ಗೆ ಅಶ್ವತ್ಥ ನಾರಾಯಣ ಮಾಹಿತಿ

ಜುಲೈ 1 ರಿಂದ ದೇಶಾದ್ಯಂತ ಸಿಬಿಎಸ್ಇ ಪರೀಕ್ಷೆ ಆರಂಭ

ವೇಳಾಪಟ್ಟಿ ಹೀಗಿದೆ...

* 30/7/2020 ಗುರುವಾರ ಬೆಳಗ್ಗೆ 10.30ರಿಂದ 11.50 ಜೀವಶಾಸ್ತ್ರ (60 ಅಂಕ), ಮಧ್ಯಾಹ್ನ 2.30ರಿಂದ 3.50ರ ತನಕ ಗಣಿತ (60 ಅಂಕ).

*31/7/2020 ಶುಕ್ರವಾರ ಬೆಳಗ್ಗೆ 10.30ರಿಂದ 11.50 ತನಕ ಭೌತಶಾಸ್ತ್ರ (60 ಅಂಕ), ಮಧ್ಯಾಹ್ನ 2.30ರಿಂದ 3.50ರ ತನಕ ರಸಾಯನ ಶಾಸ್ತ್ರ (60 ಅಂಕಗಳು)

* 1/8/2020 ಶನಿವಾರ ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರ ತನಕ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ (50 ಅಂಕಗಳು)

ಮೊದಲು ಏಪ್ರಿಲ್ 22 ಮತ್ತು 23ರಂದು ಸಿಇಟಿ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟ ಮಾಡಲಾಗಿತ್ತು. ಆದರೆ, ಕೊರೊನಾ ಹಡರದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಕಾರಣ ಪರೀಕ್ಷೆಯನ್ನು ಮೂಂದೂಡಲಾಗಿತ್ತು. ಈಗ ಹೊಸ ವೇಳಾಪಟ್ಟಿ ಪ್ರಕಟವಾಗಿದೆ.

English summary
Karnataka higher education minister Dr.C.N.Ashwath Narayan announced that Common Entrance Test (CET) will be held on 30th and 31st July, 2020. Here are the time table.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X