ಮೇ 28ರಂದು ಸಿಇಟಿ ಫಲಿತಾಂಶ ಪ್ರಕಟ

Posted By:
Subscribe to Oneindia Kannada

ಬೆಂಗಳೂರು, ಮೇ 26 : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 28ರಂದು ಸಿಇಟಿ ಫಲಿತಾಂಶವನ್ನು ಪ್ರಕಟಿಸಲಿದೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ.

ಮೇ 28ರ ಶನಿವಾರ ಉನ್ನತ ಶಿಕ್ಷಣ ಸಚಿವ ಟಿ.ಬಿ.ಜಯಚಂದ್ರ ಅವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. [ದ್ವಿತೀಯ ಪಿಯು ಫಲಿತಾಂಶ : ಯಾವ ಜಿಲ್ಲೆಗೆ ಯಾವ ಸ್ಥಾನ]

kea

ಮೇ 4 ಮತ್ತು 6ರಂದು ಸಿಇಟಿ ಪರೀಕ್ಷೆ ನಡೆದಿತ್ತು. ರಾಜ್ಯದ 391 ಪರೀಕ್ಷಾ ಕೇಂದ್ರಗಳಲ್ಲಿ 1 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. [ಈ ವರ್ಷ ನೀಟ್ ತಲೆಬಿಸಿ ಇಲ್ಲ, ಸಿಇಟಿ ಸಾಕು]

ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯಬೇಕೆ? ಎಂಬ ಗೊಂದಲ ಉಂಟಾಗಿತ್ತು. ಆದರೆ, ಕೇಂದ್ರ ಸರ್ಕಾರ ನೀಟ್ ಪರೀಕ್ಷೆ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಿದ್ದು, ಒಂದು ವರ್ಷಗಳ ಕಾಲ ನೀಟ್ ಪರೀಕ್ಷೆಯಿಂದ ವಿನಾಯಿತಿ ಸಿಕ್ಕಿದೆ.

ಮುಂದಿನ ವರ್ಷ ವಿದ್ಯಾರ್ಥಿಗಳು ವೈದ್ಯಕೀಯ, ದಂತ ವೈದ್ಯಕೀಯ ಸೀಟುಗಳನ್ನು ಪಡೆಯಲು ನೀಟ್ ಪರೀಕ್ಷೆ ಬರೆಯಬೇಕು. ಆದರೆ, ಈ ವರ್ಷ ಸಿಇಟಿ ಪರೀಕ್ಷೆ ಫಲಿತಾಂಶದ ಆಧಾರದ ಮೇಲೆಯೇ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Examination Authority (KEA) will announce Karnataka CET exam result on May 28, 2016 Saturday.
Please Wait while comments are loading...