KCET Results 2023: ನಾಳೆ ಬೆಳಗ್ಗೆ ಸಿಇಟಿ ಫಲಿತಾಂಶ ಪ್ರಕಟ, ರಿಸಲ್ಟ್ ನೋಡುವುದು ಹೇಗೆ?
ಬೆಂಗಳೂರು, ಜೂನ್ 14: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಫಲಿತಾಂಶ ಗುರುವಾರ( ಜೂನ್ 15) ರ ಬೆಳಗ್ಗೆ ಪ್ರಕಟವಾಗಲಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಳಗ್ಗೆ 11ರ ನಂತರ ಕೆಇಎ ವೆಬ್ ಸೈಟ್ http://kea.kar.nic.in ಸಿಇಟಿ ಫಲಿತಾಂಶ ಸಿಗಲಿದೆ ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು , ಗುರುವಾರ ಬೆಳಗ್ಗೆ 9.30ಕ್ಕೆ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಸಿಇಟಿ ಫಲಿತಾಂಶ ಪ್ರಕಟಿಸಲಿದ್ದಾರೆ.

ಈ ಹಿಂದೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್ 12 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಸುಮಾರು 30 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ವಿವರಗಳಲ್ಲಿ ಹೊಂದಾಣಿಕೆಯಾಗದ ಕಾರಣ ಫಲಿತಾಂಶದ ದಿನಾಂಕವನ್ನು ಮುಂದುಡಲಾಗಿತ್ತು. ಮೇ 20 ರಿಂದ ಮೇ 22ರವರೆಗೆ ರಾಜ್ಯಾದ್ಯಂತ 592 ಪರೀಕ್ಷಾ ಕೇಂದ್ರಗಳಲ್ಲಿ ಕೆಸಿಇಟಿ ಪರೀಕ್ಷೆ ನಡೆದಿದ್ದು, ರಾಜ್ಯದಲ್ಲಿ ಒಟ್ಟು 2.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ನೋಡುವುದು ಹೇಗೆ?
*ಮೊದಲು ಕೆಇಎ ಅಧೀಕೃತ ವೆಬ್‌ಸೈಟ್ http://kea.kar.nic.inಗೆ ಭೇಟಿ ನೀಡಿ
*ಮುಖಪುಟದಲ್ಲಿ ಲಭ್ಯವಿರುವ KCET ಫಲಿತಾಂಶ 2023 ಲಿಂಕ್ ಅನ್ನು ಕ್ಲಿಕ್ ಮಾಡಿ.
*ಓಪನ್ ಆದ ಪುಟದಲ್ಲಿ ನೋಂದಣಿ ಸಂಖ್ಯೆ, ಜನ್ಮ ದಿನಾಂಕ, ಮತ್ತು ಪಾಸ್‌ವರ್ಡ್, ನಮೂದಿಸಿ ಲಾಗಿನ್ ಆಗಿ.
*ನಂತರ ಪರದೆಯ ಮೇಲೆ ನಿಮ್ಮ 2023ರ ಕೆಸಿಇಟಿ ಫಲಿತಾಂಶ ಕಾಣಸಿಗುತ್ತದೆ.
*ಮುಂದಿನ ಅಗತ್ಯತೆಗಾಗಿ ಫಲಿತಾಂಶ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.
ಇಂಜಿನಿಯರಿಂಗ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್‌ಸಿ ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ.












Click it and Unblock the Notifications