ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್‌ ಗಾಂಧಿ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ : ಎಚ್.ಡಿ.ಕುಮಾರಸ್ವಾಮಿ ಸಂದರ್ಶನ

By Gururaj
|
Google Oneindia Kannada News

Recommended Video

ತಮ್ಮ ಸಂದರ್ಶನದಲ್ಲಿ ಹಲವು ವಿಷಯಗಳನ್ನ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು, ಜುಲೈ 17 : 'ಸ್ವತಃ ಕಾಂಗ್ರೆಸ್ ಪಕ್ಷವೇ ಮುಂದೆ ಬಂದು ನೀಡಿದ ಸಹಕಾರದಿಂದ ಮೈತ್ರಿ ಸರ್ಕಾರವನ್ನು ರಚನೆ ಮಾಡಿದ್ದೇವೆ. ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್‌ ಗಾಂಧಿ ಅವರು ನನಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಕರ್ನಾಟಕದ ಮಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿ ಪ್ರವಾಸದಲ್ಲಿದ್ದಾರೆ. ಮಂಗಳವಾರ ರಾತ್ರಿ ಅವರು ರಾಷ್ಟ್ರೀಯ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದರು. ರಾಜ್ಯ ರಾಜಕಾರಣದ ಹಲವು ವಿಚಾರಗಳ ಬಗ್ಗೆ ಅವರು ಸಂದರ್ಶನದಲ್ಲಿ ಮಾತನಾಡಿದರು.

ಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಆಯವ್ಯಯದ Highlightsಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಆಯವ್ಯಯದ Highlights

'ಕಾಂಗ್ರೆಸ್ ಪಕ್ಷದ ಸಹಕಾರದೊಂದಿಗೆ ಸುಮಾರು 34 ಸಾವಿರ ಕೋಟಿ ರೂ.ಗಳ ರೈತರ ಸಾಲವನ್ನು ಮನ್ನಾ ಮಾಡಿದ್ದೇನೆ. ರೈತರ ಸಾಲ ಮನ್ನಾದಿಂದ ಅವರ ಸಮಸ್ಯೆ ಪರಿಹಾರವಾಗುವುದಿಲ್ಲ ಎನ್ನುವ ವಾಸ್ತಾಂಶವೂ ನನಗೆ ತಿಳಿದಿದೆ' ಎಂದರು.

ಸಿಎಂ ಕುಮಾರಸ್ವಾಮಿಗೆ ಕಿರುಕುಳ ನೀಡುತ್ತಿರುವ ಕಾಂಗ್ರೆಸ್ ನಾಯಕರ್ಯಾರು?!ಸಿಎಂ ಕುಮಾರಸ್ವಾಮಿಗೆ ಕಿರುಕುಳ ನೀಡುತ್ತಿರುವ ಕಾಂಗ್ರೆಸ್ ನಾಯಕರ್ಯಾರು?!

'ಕರ್ನಾಟಕದ ಜನತೆಗೆ ಉತ್ತಮ ಆಡಳಿತ ನೀಡಲು ನನಗೆ ಒಂದು ಅವಕಾಶವನ್ನು ರಾಹುಲ್ ಗಾಂಧಿ ಅವರು ಕಲ್ಪಿಸಿ ಕೊಟ್ಟಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಆಭಾರಿಯಾಗಿದ್ದೇನೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂದರ್ಶನದಲ್ಲಿ ತಿಳಿಸಿದರು. ಸಂದರ್ಶನದ ವಿವರ ಚಿತ್ರಗಳಲ್ಲಿ...

ಎಚ್.ಡಿ.ಕುಮಾರಸ್ವಾಮಿ ಸಂದರ್ಶನ

ಎಚ್.ಡಿ.ಕುಮಾರಸ್ವಾಮಿ ಸಂದರ್ಶನ

'ಕಾಂಗ್ರೆಸ್ ಪಕ್ಷವೇ ಮುಂದೆ ಬಂದು ನೀಡಿದ ಸಹಕಾರದಿಂದಾಗಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ರಚನೆ ಮಾಡಿದ್ದೇವೆ. ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್‌ ಗಾಂಧಿ ಅವರು ನನಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ'.

'ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಮತ್ತು ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರಿಂದಲೂ ಸರ್ಕಾರ ನಡೆಸಲು ಸಹಕಾರ ದೊರೆಯುತ್ತಿದೆ. ಇತ್ತೀಚೆಗಷ್ಟೇ ನಾನು ನನ್ನ ಚೊಚ್ಚಲ 2.19 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಿದ್ದೇನೆ' ಎಂದು ಕುಮಾರಸ್ವಾಮಿ ಹೇಳಿದರು.

ತಪ್ಪಿಗಾಗಿ ಪಶ್ಚಾತಾಪ ಪಟ್ಟಿದ್ದೇನೆ

ತಪ್ಪಿಗಾಗಿ ಪಶ್ಚಾತಾಪ ಪಟ್ಟಿದ್ದೇನೆ

'ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಲು ನನಗೆ ಒಂದು ಅವಕಾಶವನ್ನು ರಾಹುಲ್ ಗಾಂಧಿ ಅವರು ಕಲ್ಪಿಸಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಆಭಾರಿಯಾಗಿದ್ದೇನೆ. 2006ರಲ್ಲಿ ನಾನು ಮಾಡಿದ ತಪ್ಪಿಗಾಗಿ ಪಶ್ಚಾತಾಪ ಪಟ್ಟಿದ್ದೇನೆ' ಎಂದು ಕುಮಾರಸ್ವಾಮಿ ಹೇಳಿದರು.

'ಅಂದು ಬಿಜೆಪಿ ಪಕ್ಷದೊಂದಿಗೆ ಕೈಜೋಡಿಸಿದ್ದು ನನ್ನ ರಾಜಕೀಯ ಜೀವನದಲ್ಲಿ ಕಪ್ಪುಚುಕ್ಕೆಯಾಗಿ ಉಳಿದುಕೊಂಡಿದೆ. ಆ ತಪ್ಪನ್ನು ತಿದ್ದಿಕೊಳ್ಳಲು ನನಗೆ ಒಂದು ಅವಕಾಶ ಸಿಕ್ಕಿದೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಸರ್ಕಾರ ರಚಿಸಿದ್ದೇವೆ' ಎಂದು ಸ್ಪಷ್ಟಪಡಿಸಿದರು.

ಐದು ವರ್ಷಗಳ ಕಾಲ ಶ್ರಮಿಸುವೆ

ಐದು ವರ್ಷಗಳ ಕಾಲ ಶ್ರಮಿಸುವೆ

'ಎಲ್ಲರನ್ನೂ ಒಗ್ಗೂಡಿಸಿಕೊಂಡು ರಾಜ್ಯದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಜನತೆಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎನ್ನುವ ವಿಶ್ವಾಸವನ್ನು ಹೊಂದಿದ್ದೇನೆ' ಎಂದರು.

'ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಸಾಲ ಮನ್ನಾ ಮಾಡಲು ಕಷ್ಟ ಪಟ್ಟಿದ್ದೇನೆ. ಉತ್ತಮವಾದ ಕೆಲಸಗಳನ್ನು ಮಾಡುತ್ತಿದ್ದೇನೆ. ಆದರೂ ನನ್ನನ್ನು ಜನರು ಬೆಂಬಲಿಸುತ್ತಿಲ್ಲ. ಅವರಿಂದ ಪ್ರೋತ್ಸಾಹ ದೊರೆಯುತ್ತಿಲ್ಲ. ಅವರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎನ್ನುವ ನೋವನ್ನು ವ್ಯಕ್ತ ಪಡಿಸುವಾಗ ಪಕ್ಷದ ಖಾಸಗಿ ಸಭೆಯಲ್ಲಿ ಭಾವನಾತ್ಮಕವಾಗಿದ್ದು ನಿಜ' ಎಂದು ತಿಳಿಸಿದರು.

ಕಾಂಗ್ರೆಸ್ ಕಿರುಕುಳ ನೀಡುತ್ತಿದೆ ಎಂದಿಲ್ಲ

ಕಾಂಗ್ರೆಸ್ ಕಿರುಕುಳ ನೀಡುತ್ತಿದೆ ಎಂದಿಲ್ಲ

'ನನ್ನನ್ನು ಜನರು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎನ್ನುವ ನೋವನ್ನು ವ್ಯಕ್ತಪಡಿಸುವಾಗ ಪಕ್ಷದ ಖಾಸಗಿ ಸಭೆಯಲ್ಲಿ ಭಾವನಾತ್ಮಕವಾಗಿದ್ದು ನಿಜ. ಹಾಗೆಂದ ಮಾತ್ರಕ್ಕೆ ಕಾಂಗ್ರೆಸ್ ಪಕ್ಷ ನನಗೆ ಕಿರುಕುಳ ನೀಡುತ್ತಿದೆ ಎಂದು ಭಾವಿಸುವ ಅಗತ್ಯವಿಲ್ಲ' ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

'ಕಾಂಗ್ರೆಸ್ ಪಕ್ಷದ ಸಹಕಾರದೊಂದಿಗೆ ಸುಮಾರು 34 ಸಾವಿರ ಕೋಟಿ ರೂ.ಗಳ ರೈತರ ಸಾಲವನ್ನು ಮನ್ನಾ ಮಾಡಿದ್ದೇನೆ. ರೈತರ ಸಾಲ ಮನ್ನಾದಿಂದ ಅವರ ಸಮಸ್ಯೆಗಳು ಪರಿಹಾರವಾಗುವುದಿಲ್ಲ ಎನ್ನುವ ವಾಸ್ತಾಂಶವನ್ನು ಸಹ ನಾನು ಅರಿತಿದ್ದೇನೆ. ಅವರಿಗಾಗಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಅವರ ಜೀವನಮಟ್ಟವನ್ನು ಮೇಲೆತ್ತಲು ಪ್ರಯತ್ನಿಸುತ್ತೇನೆ' ಎಂಮದು ಕುಮಾರಸ್ವಾಮಿ ಭರವಸೆ ನೀಡಿದರು.

ಐಪೋನ್ ವಿಚಾರದ ಕುರಿತು ಸ್ಪಷ್ಟನೆ

ಐಪೋನ್ ವಿಚಾರದ ಕುರಿತು ಸ್ಪಷ್ಟನೆ

'ರಾಜ್ಯದ ಸಂಸದರೊಬ್ಬರು ಐಫೋನ್ ನೀಡಿರುವ ಬಗ್ಗೆ ಮಾಡಿರುವ ಟ್ವೀಟ್ ಅನ್ನು ಗಮನಿಸಿದ್ದೇನೆ. ಈ ಬಗ್ಗೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ, ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದು ಭಾವಿಸಿದ್ದೇನೆ' ಎಂದು ಕುಮಾರಸ್ವಾಮಿ ಹೇಳಿದರು.

English summary
Karnataka Chief Minister H.D.Kumaraswamy in New Delhi for three days visit. National media interviewed H.D.Kumaraswamy on July 17, 2018. Here is a details of the interview.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X