ಉಗ್ರರ ವಿರುದ್ಧ ಸಮರಕ್ಕೆ ದೇಶ ಸಜ್ಜು: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಬೆಂಬಲ
ಬೆಂಗಳೂರು, ಏಪ್ರಿಲ್ 24: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಇಬ್ಬರು ಕನ್ನಡಿಗರು ಸೇರಿದಂತೆ ಸುಮಾರು 28 ಪ್ರವಾಸಿಗರು ಉಗ್ರರ ದಾಳಿಗೆ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ದೇಶದ ಎಲ್ಲಾ ರಾಜ್ಯಗಳು ಎಚ್ಚೆತ್ತುಕೊಂಡಿದ್ದು, ಕರ್ನಾಟಕದಲ್ಲಿಯೂ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಿದ್ದೇನೆ. ಭಾರತದಲ್ಲಿ ನೆಲೆಸಿರುವ ವಿದೇಶದವರ ಬಗ್ಗೆ ಕಣ್ಗಾವಲು ಇರಿಸಲು ಕೇಂದ್ರ ಗೃಹ ಇಲಾಖೆ ರಾಜ್ಯಗಳಿಗೆ ಸೂಚನೆ ನೀಡಿದೆ. ಉಗ್ರರು ಯಾವುದೇ ರಾಜ್ಯದಲ್ಲಿ ಇರಲಿ ಅವರನ್ನು ಮಟ್ಟಹಾಕಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದಿದ್ದಾರೆ.

ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರ ಚಟುವಟಿಕೆಗಳಿಗೆ ಅವಕಾಶ ಕೊಡಕೂಡದು. ಪಹಲ್ಗಾಮ್ ಘಟನೆ ಅತ್ಯಂತ ಹೇಯ ಹಾಗೂ ಅಮಾನುಷವಾದುದ್ದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದರು.
ಪುಲ್ವಾಮಾ ಘಟನೆಯೂ ಇದೇ ಜಿಲ್ಲೆಯಲ್ಲಿ ನಡೆದಿದ್ದರಿಂದ ಎಚ್ಚರಿಕೆಯಿಂದ ಇರಬೇಕಾಗಿತ್ತು. ಬಂದೋಬಸ್ತ್ ಸಡಿಲಗೊಳಿಸಬಾರದಿತ್ತು. ಇಲ್ಲಿ ಗುಪ್ತಚರ ವ್ಯವಸ್ಥೆಯ ವೈಫಲ್ಯವಾಗಿದೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಘಟನೆ ನಡೆದ ಬಳಿಕ ಕ್ರಮ ತೆಗೆದುಕೊಳ್ಳುವುದು ಬೇರೆ. ಘಟನೆಯಾಗದಂತೆ ತೆಗೆದುಕೊಳ್ಳುವ ಕ್ರಮಗಳು ಬೇರೆ. ಅದನ್ನು ಕೇಂದ್ರ ಸರ್ಕಾರ ಮಾಡಬೇಕಿತ್ತು ಎಂದು ಹೇಳಿದರು.
ಪುಲ್ವಾಮಾದಲ್ಲಿ 40 ಸೈನಿಕರು ಪ್ರಾಣತೆತ್ತರು. ಈ ಘಟನೆಯಲ್ಲಿ 28 ಜನ ನಾಗರಿಕರು ಮೃತರಾಗಿದ್ದಾರೆ. ಇದನ್ನು ತಪ್ಪಿಸಲು ಕ್ರಮ ವಹಿಸಬೇಕಿತ್ತು. ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ಉಗ್ರರು ಯಾವುದೇ ಧರ್ಮಕ್ಕೆ ಸೇರಿರಲಿ ಅವರೆಲ್ಲರನ್ನೂ ಮಟ್ಟ ಹಾಕಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ, ಅದಕ್ಕೆ ಬೇಕಾಗಿರುವ ಎಲ್ಲಾ ಸಹಕಾರ, ಬೆಂಬಲವನ್ನು ನಾವು, ನಮ್ಮ ಸರ್ಕಾರ ಕೊಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇನ್ನು ಮಲೆಮಹದೇಶ್ವರ ಬೆಟ್ಟದಲ್ಲಿ ಆಯೋಜಿಸಿರುವ ವಿಶೇಷ ಸಚಿವ ಸಂಪುಟ ಸಭೆಯ ಬಗ್ಗೆ ಮಾತನಾಡಿದ ಅವರು, ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಆಯೋಜಿಸಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳು ಹಾಗೂ ಚಾಮರಾಜನಗರ ಜಿಲ್ಲೆಗೆ ಅಗತ್ಯವಿರುವ ಪ್ರಮುಖ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಹೇಳಿದರು.
-
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: 1 ಲಕ್ಷ ಬಾಂಡ್ಗೆ ಆಗ್ರಹಿಸಿದ ಪೊಲೀಸರ ವಿರುದ್ಧ ಯತ್ನಾಳ್ ಗರಂ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ.












Click it and Unblock the Notifications