ಸಿಎಂ ಬೊಮ್ಮಾಯಿ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ; ಈ ಮೂವರಿಗೆ ಮಂತ್ರಿಸ್ಥಾನ ಖಚಿತ?
ಬೆಂಗಳೂರು, ಆ. 24: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆಯಾ? ಅಂಥದ್ದೊಂದು ಬೆಳವಣಿಗೆ ನಡೆದಿದೆ ಎಂಬ ಮಾಹಿತಿ ಬರುತ್ತಿದೆ. ಮೊದಲ ಹಂತದಲ್ಲಿಯೇ ಬಹುತೇಕ ಮಂತ್ರಿಸ್ಥಾನಗಳನ್ನು ಹೈಕಮಾಂಡ್ ಭರ್ತಿ ಮಾಡಿದೆ. ಆದರೂ ಯಾವುದಕ್ಕೂ ಇರಲಿ ಅಂತಾ ನಾಲ್ಕು ಮಂತ್ರಿ ಪದವಿಗಳನ್ನು ಖಾಲಿ ಬಿಡಲಾಗಿತ್ತು. ಇದೀಗ ಅವುಗಳನ್ನೂ ಕೂಡ ಭರ್ತಿ ಮಾಡಲು ಹೈಕಮಾಂಡ್ ತೀರ್ಮಾನ ಮಾಡಿದೆ. ಬಿಜೆಪಿಯಲ್ಲಿನ ಅಸಮಾಧಾನ ತಣಿದಿರುವುದು ಅದಕ್ಕೆ ಕಾರಣ ಎಂಬ ಮಾಹಿತಿ ಬಂದಿದೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಸಂದರ್ಭದಲ್ಲಿ ಇನ್ನೇನು ಮುಖ್ಯಮಂತ್ರಿಯಾದರು ಎಂಬುದವರಿಗೆ ಮಂತ್ರಿಸ್ಥಾನವನ್ನೂ ಹೈಕಮಾಂಡ್ ನಿರಾಕರಿಸಿತ್ತು. ಅದಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಅವರ ಒತ್ತಡ ಕಾರಣ ಎನ್ನಲಾಗಿತ್ತು.
ಇದೀಗ ಉಳಿದಿರುವ ನಾಲ್ಕು ಸಚಿವ ಸ್ಥಾನಗಳ ಭರ್ತಿಗೆ ಹೈಕಮಾಂಡ್ ತೀರ್ಮಾನ ಮಾಡಿದೆ ಎಂಬ ಮಾಹಿತಿ ಬಂದಿದೆ. ಯಾವಾಗ ಸಿಎಂ ಬೊಮ್ಮಾಯಿ ಅವರ ಸಚಿವ ಸಂಪುಟ ವಿಸ್ತರಣೆ ಆಗಲಿದೆ? ಯಾರು ಹೊಸದಾಗಿ ಸಂಪುಟ ಸೇರಿಕೊಳ್ಳಲಿದ್ದಾರೆ? ಮುಂದಿದೆ ಮಾಹಿತಿ!

ಮಾಜಿ ಸಿಎಂ ಯಡಿಯೂರಪ್ಪ ವಿರೋಧಿ ಬಣಕ್ಕೆ ಅವಕಾಶ?
ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಸಂದರ್ಭದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಬಣದಲ್ಲಿದ್ದವರಿಗೆ ಮಂತ್ರಿ ಸ್ಥಾನ ಸಿಕ್ಕಿರಲಿಲ್ಲ. ಅವರಲ್ಲಿಯೂ ಪ್ರಮುಖವಾಗಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್, ಸಿಎಂ ಹುದ್ದೆ ರೇಸ್‌ನಲ್ಲಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್ ಅವರು ಕನಿಷ್ಠ ಮಂತ್ರಿಯೂ ಆಗಿರಲಿಲ್ಲ. ಅದಕ್ಕೆ ಯಡಿಯೂರಪ್ಪ ಅವರೇ ಕಾರಣ ಎಂಬ ಮಾತುಗಳು ಬಿಜೆಪಿ ವಲಯದಿಂದಲೇ ಕೇಳಿ ಬಂದಿದ್ದವು. ಜೊತೆಗೆ ಹೈಕಮಾಂಡ್ ಕೂಡ ನಾಯಕತ್ವ ಬದಲಾವಣೆ ಸಂದರ್ಭದಲ್ಲಿ ಯಡಿಯೂರಪ್ಪ ವಿರೋಧ ಕಟ್ಟಿಕೊಳ್ಳಲು ಬಯಲಿಸಿರಲಿಲ್ಲ. ಹೀಗಾಗಿ ನಾಲ್ಕು ಸ್ಥಾನಗಳನ್ನು ಕಾಯ್ದರಿಸಿ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ ಕೊಟ್ಟಿತ್ತು.

ಸುಳಿವು ಕೊಟ್ಟ ಸಿಎಂ ಬಸವರಾಜ ಬೊಮ್ಮಾಯಿ!
ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ ಸುಳಿವು ಕೊಟ್ಟಿದ್ದಾರೆ. ಹಲವು ವಿಚಾರಗಳನ್ನು ಇಟ್ಟುಕೊಂಡು ಕೇಂದ್ರದ ವರಿಷ್ಠರನ್ನು, ಸಚಿವರನ್ನು ಭೇಟಿ ಮಾಡಲು ನಾಳೆ ಅಂದರೆ ಬುಧವಾರ ಸಂಜೆ ದೆಹಲಿಗೆ ತೆರಳುತ್ತಿದ್ದೇನೆ. ಗುರುವಾರ ವರಿಷ್ಠರ ಭೇಟಿ ಸಂದರ್ಭದಲ್ಲಿ ಉಳಿದ ನಾಲ್ಕು ಮಂತ್ರಿ ಸ್ಥಾನಗಳನ್ನು ಭರ್ತಿ ಬಗ್ಗೆಯೂ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಹೀಗಾಗಿ ಸೆಪ್ಟಂಬರ್ ತಿಂಗಳಿನಲ್ಲಿ ಸಿಎಂ ಬೊಮ್ಮಾಯಿ ಸಂಪುಟಕ್ಕೆ ಉಳಿದ ನಾಲ್ಕು ಸಚಿವರು ಸೇರುವುದು ಖಚಿವಾಗಿದೆ. ಜೊತೆಗೆ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ನಡೆಯೂ ಸಂಪುಟ ವಿಸ್ತರಣೆ ಮುನ್ಸೂಚನೆ ಕೊಟ್ಟಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೂಡ ಕಲಬುರಗಿಯಲ್ಲಿ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ್ದಾರೆ.
|
ಕಲಬುರಗಿಯಲ್ಲಿ ಕಟೀಲ್ ಕೊಟ್ಟ ಸುಳಿವು!
ಕಲಬುರಗಿಯಲ್ಲಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, "ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆಗೆ ಮಂತ್ರಿಸ್ಥಾನ ಕೊಡಲಾಗುತ್ತದೆ. ಇನ್ನೂ ನಾಲ್ಕು ಸಚಿವ ಸ್ಥಾನಗಳು ಖಾಲಿ ಇವೆ. ಆ ನಾಲ್ಕು ಸ್ಥಾನಗಳಲ್ಲಿ ಕಲಬುರಗಿ ಜಿಲ್ಲೆಗೆ ಸಚಿವ ಸ್ಥಾನ ನೀಡಲಾಗುವುದು. ಶೀಘ್ರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಅದನ್ನು ಸಿಎಂ ಬೊಮ್ಮಾಯಿ ಮಾಡಲಿದ್ದಾರೆ" ಎಂದಿದ್ದಾರೆ. ಹೀಗಾಗಿ ಈ ಸಲ ಸಚಿವ ಸ್ಥಾನ ವಂಚಿತಗೊಂಡಿದ್ದ ಯಡಿಯೂರಪ್ಪ ವಿರೋಧಿ ಬಣದವರಿಗೆ ಮಂತ್ರಿಸ್ಥಾನ ಸಿಗುವ ಸಾಧ್ಯತೆಗಳು ಹೆಚ್ಚಾಗಿವೆ.
Recommended Video

ಈ ಮೂವರು ಸಂಪುಟ ಸೇರುವುದು ಪಕ್ಕಾ!
ಮಾಜಿ ಸಚಿವ ಸಿ.ಪಿ. ಯೋಗೇಶ್ವರ್, ಅರವಿಂದ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ನಾಲ್ವರು ಸಿಎಂ ಬೊಮ್ಮಾಯಿ ಸಂಪುಟ ಸೇರುವುದು ಖಚಿತವಾಗಿದೆ. ಈ ಮೂವರು ಸಂಪುಟ ಸೇರಲು ಮಾಜಿ ಸಿಎಂ ಯಡಿಯೂರಪ್ಪ ಅವರ ತೀವ್ರ ವಿರೋಧವಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಹೈಕಮಾಂಡ್ ನಿರ್ಧಾರದ ಮೇಲೆ ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಿರ್ಧಾರವಾಗಲಿದೆ. ಯಡಿಯೂರಪ್ಪ ಶಾಡೊ ಸಿಎಂ ಎಂಬ ಆರೋಪದಿಂದ ಹೊರ ಬರಲು ಈ ಸಂಪುಟ ವಿಸ್ತರಣೆ ಬಸವರಾಜ ಬೊಮ್ಮಾಯಿ ಅವರಿಗೆ ಸಹಾಯಕವಾಗಲಿದೆ ಎನ್ನಲಾಗುತ್ತಿದೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications