ನಿರ್ಮಲಾ ಸುದ್ದಿಗೋಷ್ಟಿ: 'ನಾಲ್ಕನೇ ಪ್ಯಾಕೇಜ್ ರಾಜ್ಯಕ್ಕೆ ಹೆಚ್ಚಿನ ಲಾಭ'

ಬೆಂಗಳೂರು, ಮೇ 16:; ಆತ್ಮ ನಿರ್ಭರ್ ಭಾರತ ನಿರ್ಮಾಣದ ಹಾದಿಯಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ ಹಲವಾರು ಯೋಜನೆಗಳು, ರಾಜ್ಯಕ್ಕೆ ಹೆಚ್ಚು ಲಾಭವಾಗಲಿದ್ದು, ಉದ್ಯೋಗ ಅವಕಾಶಗಳನ್ನು ವೃದ್ಧಿಗೊಳಿಸುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಖನಿಜ ವಲಯದಲ್ಲಿ ತರುತ್ತಿರುವ ಅಮೂಲಾಗ್ರ ಬದಲಾವಣೆ ರಾಜ್ಯದ ಖನಿಜ ನೀತಿಗೆ ಪೂರಕವಾಗಲಿದೆ. ನಮ್ಮ ರಾಜ್ಯದಲ್ಲಿ ಹಲವಾರು ಖನಿಜಗಳ ನಿಕ್ಷೇಪಗಳಿದ್ದು, ಈಗ ಅವುಗಳ ಗಣಿಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ. ಅದರಲ್ಲೂ ಈಗಿರುವ ಖನಿಜ ಸಂಬಂಧಪಟ್ಟ ಕಾಯಿದೆಗಳು ನಮಗೆ ಹೆಚ್ಚಿನ ಅವಕಾಶ ಕಲ್ಪಿಸಲು ಮತ್ತು ಗಣಿಗಾರಿಕೆ ಮಾಡುವಲ್ಲಿ ಸ್ವಲ್ಪ ಅಡಚಣೆಗಳಿದ್ದವು ಎಂದಿದ್ದಾರೆ.

ಮುಕ್ತ ವಾತಾವರಣದಲ್ಲಿ ಕೆಲಸ ಮಾಡಬಹುದು

ಮುಕ್ತ ವಾತಾವರಣದಲ್ಲಿ ಕೆಲಸ ಮಾಡಬಹುದು

ಈಗ, ನಾವು ಈಗ ಮುಕ್ತ ವಾತಾವರಣದಲ್ಲಿ ಕೆಲಸ ಮಾಡಬಹುದು. ಇವೆಲ್ಲವುಗಳ ಜೊತೆಗೆ ರಾಜ್ಯದಲ್ಲಿ ಉದ್ಯೋಗ ಅವಕಾಶಗಳನ್ನು ಹೆಚ್ಚಿಸುವಲ್ಲಿ ಸಹಾಯವಾಗಲಿದೆ.

ರಾಜ್ಯದಲ್ಲಿ ಯಥೇಚ್ಚ ಖನಿಜ ಸಂಪತ್ತು ಇದ್ದು (ಕಬ್ಬಿಣ, ತಾಮ್ರ, ಬಂಗಾರ, ಕ್ವಾರ್ಜ್ ಮತ್ತು ಯುರೇನಿಯಂ) ಇವುಗಳನ್ನು ನಾವು ಗಣಿಗಾರಿಕೆ ಮಾಡಿ ರಾಜ್ಯದ ಆರ್ಥಿಕ ಬೆಳವಣಿಗೆಗೆ ಕಾರಣವಾಗಬಹುದು. ಖಾಸಗಿ ಸಹಬಾಗಿತ್ವದ ಗಣಿಗಾರಿಕೆ ರಾಜ್ಯಕ್ಕೆ ಹೆಚ್ಚು ಲಾಭವಾಗಲಿದೆ ಎಂದಿದ್ದಾರೆ ಯಡಿಯೂರಪ್ಪ.

ಹೂಡಿಕೆ ಹೆಚ್ಚಾಗಿ ರಾಜ್ಯಕ್ಕೆ ಲಾಭವಾಗಲಿದೆ

ಹೂಡಿಕೆ ಹೆಚ್ಚಾಗಿ ರಾಜ್ಯಕ್ಕೆ ಲಾಭವಾಗಲಿದೆ

ದೇಶದ ರಕ್ಷಣಾ ವಲಯ, ಬಾಹ್ಯಾಕಾಶ, ನಾಗರಿಕ ವಿಮಾನಯಾನ, ಅಂತರಿಕ್ಷ ಯಾನ, ಮತ್ತು ಅಂತರಿಕ್ಷ ವಲಯಗಳಲ್ಲಿ ಹೂಡಿಕೆ ಹೆಚ್ಚಾಗಿ ರಾಜ್ಯಕ್ಕೆ ಲಾಭವಾಗಲಿದೆ.

ಏಕೆಂದರೆ, ಈ ವಲಯದಲ್ಲಿ ಸಾಕಷ್ಟು ಉತ್ಪಾದನಾ ಘಟಕಗಳು ನಮ್ಮ ರಾಜ್ಯದಲ್ಲಿದ್ದು, ಅವುಗಳಿಗೆ ಪೂರಕವಾಗಿ ಇತರೆ ಸಂಬಂಧಪಟ್ಟ ಘಟಕಗಳು ಸ್ಥಾಪನೆ ಆಗುತ್ತವೆ. ಎಲ್ಲಕ್ಕೂ ಮಿಗಿಲಾಗಿ ಇಂದು ಪ್ರಕಟಿಸಿದ ಆರ್ಥಿಕ ಯೋಜನೆಗಳು ದೇಶದ ವಿದೇಶ ವಿನಿಮಯವನ್ನು ಉಳಿತಾಯ ಮಾಡಲಿದೆ ಎಂದಿದ್ದಾರೆ ಯಡಿಯೂರಪ್ಪ.

ರಕ್ಷಣಾ ಯೋಜನೆಗಳು ಸಾಕಾರಗೊಳ್ಳಲಿವೆ

ರಕ್ಷಣಾ ಯೋಜನೆಗಳು ಸಾಕಾರಗೊಳ್ಳಲಿವೆ

ಅಣು ವಿಜ್ಞಾನದಲ್ಲಿ ಖಾಸಗಿ ಸಹಭಾಗಿತ್ವ ಕೂಡ ನಮ್ಮ ರಾಜ್ಯಕ್ಕೆ ಹೆಚ್ಚಿನ ಲಾಭವಾಗಲಿದೆ. ದಾವೋಸ್ ಪ್ರವಾಸದಲ್ಲಿ ಹಲವಾರು ಬಾಹ್ಯಾಕಾಶ ಮತ್ತು ರಕ್ಷಣಾ ವಲಯ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ತಮ್ಮ ಇಚ್ಚೆ ವ್ಯಕ್ತಪಡಿಸಿದ್ದು, ಈಗ ಈ ಕಂಪನಿಗಳ ಯೋಜನೆಗಳು ಸಾಕಾರಗೊಳ್ಳಲಿವೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಐದನೇ ಕಂತಿನ ವಿವರ ನಾಳೆ

ಐದನೇ ಕಂತಿನ ವಿವರ ನಾಳೆ

ನಾಳೆ ಬೆಳಗ್ಗೆ 11 ಗಂಟೆಗೆ 20 ಲಕ್ಷ ಕೋಟಿ ರೂಪಾಯಿಯ ಆರ್ಥಿಕ ಪ್ಯಾಕೇಜ್ ನ ಐದನೇ ಕಂತಿನ ವಿವರಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+