ಎಚ್.ಡಿ.ಕುಮಾರಸ್ವಾಮಿ ಪದತ್ಯಾಗ, ಸಿಎಂ ಪಟ್ಟ ಕಾಂಗ್ರೆಸ್‌ಗೆ?
Recommended Video
ಬೆಂಗಳೂರು, ಮೇ 24 : 2019ರ ಲೋಕಸಭಾ ಚುನಾವಣೆ ಫಲಿತಾಂಶ ಕರ್ನಾಟಕದ ಮೈತ್ರಿ ಸರ್ಕಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪದತ್ಯಾಗಕ್ಕೆ ಮುಂದಾಗಿದ್ದಾರೆ?.
ಗ್ಯಾಲರಿ: ಭರ್ಜರಿ ಜಯದೊಂದಿಗೆ ಸಂಭ್ರಮಾಚರಣೆಯಲ್ಲಿ ಬಿಜೆಪಿ
ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಸಚಿವರ ಅನೌಪಚಾರಿಕ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ್ದಾರೆ?. ಈ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಾಜ್ಯ ಕಾಂಗ್ರೆಸ್ ನಾಯಕರು ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.
ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಎರಡೂ ಪಕ್ಷಗಳು ಮುಂದಾಗಿವೆ. ಆದರೆ, ಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರು ಬದಲಾವಣೆಯಾಗಲಿದ್ದಾರೆ. ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಡಲು ಕುಮಾರಸ್ವಾಮಿ ಒಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮತ್ತೊಂದು ಕಡೆ ಕಾಂಗ್ರೆಸ್ ನಾಯಕರ ವಿರುದ್ಧ ಮುನಿಸಿಕೊಂಡಿದ್ದ ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಸಮಾಧಾನಪಡಿಸಲು ಪಕ್ಷ ಮುಂದಾಗಿದೆ. ಅವರಿಗೆ ಸಚಿವ ಸ್ಥಾನ ನೀಡಲು ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪದತ್ಯಾಗ ಮಾಡಲು ಮುಂದಾಗಿದ್ದಾರೆ. ಕಾಂಗ್ರೆಸ್‌ನಿಂದ ಯಾರೂ ಬೇಕಾದರೂ ಮುಖ್ಯಮಂತ್ರಿಯಾಗಲಿ ನಾವು ಬೆಂಬಲ ನೀಡುತ್ತೇವೆ ಎಂದು ಸಚಿವರ ಅನೌಪಚಾರಿಕ ಸಭೆಯಲ್ಲಿ ಹೇಳಿದ್ದಾರೆ.

ದೇವೇಗೌಡರ ಖಡಕ್ ಸಂದೇಶ
ಶುಕ್ರವಾರ ಬೆಳಗ್ಗೆ ಎಚ್.ಡಿ.ದೇವೇಗೌಡ ನಿವಾಸದಲ್ಲಿ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಮತ್ತು ಆಪ್ತ ಶಾಸಕರ ಸಭೆಯನ್ನು ದೇವೇಗೌಡರು ನಡೆಸಿದರು. ಈ ಸಂದರ್ಭದಲ್ಲಿ ಯಾವುದೇ ಮುಲಾಜಿಲ್ಲದೇ ಹೇಳಿ, ಮೈತ್ರಿಯನ್ನು ಮುಂದುವರೆಸಬೇಕೆ?, ಬೇಡವೇ? ಎಂದು ಶಾಸಕರಿಂದ ದೇವೇಗೌಡರು ಅಭಿಪ್ರಾಯವನ್ನು ಸಂಗ್ರಹಿಸಿದರು.

ರಾಹುಲ್ ಗಾಂಧಿಗೆ ಮಾಹಿತಿ
ಎಚ್.ಡಿ.ಕುಮಾರಸ್ವಾಮಿ ತೀರ್ಮಾನದ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ದೂರವಾಣಿ ಮೂಲಕ ರಾಜ್ಯ ನಾಯಕರು ಮಾಹಿತಿ ನೀಡಿದರು. ಶನಿವಾರ ದೆಹಲಿಯಲ್ಲಿ ನಡೆಯುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ.

ಸರ್ಕಾರ ಬೀಳಬಾರದು
ಮೈತ್ರಿ ಸರ್ಕಾರ ಪತನವಾಗಬಾರದು ಎಂದು ತೀರ್ಮಾನವನ್ನು ಕೈಗೊಳ್ಳಲಾಗಿದೆ. ರಾಜ್ಯದ ಜನರಿಗೆ ನೀಡಿದ ಭರವಸೆಯಂತೆ ಸರ್ಕಾರ ಮುಂದುವರೆಯಬೇಕು. ಬಿಜೆಪಿ ವಲಯಕ್ಕೆ ಜಿಗಿಯಬಹುದು ಎಂದು ಅಂದಾಜಿಸಲಾಗಿರುವ ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಲು ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಜಂಟಿ ಪತ್ರಿಕಾಗೋಷ್ಠಿ
ಸಚಿವರ ಅನೌಪಚಾರಿಕ ಸಭೆ ಬಳಿಕ ಕುಮಾರಸ್ವಾಮಿ, ಡಾ.ಜಿ.ಪರಮೇಶ್ವರ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಆದರೆ, ಮುಖ್ಯಮಂತ್ರಿಗಳು ಯಾವ ಪ್ರಶ್ನೆಗೂ ಉತ್ತರ ನೀಡಲಿಲ್ಲ.
'ಮೈತ್ರಿ ಸರ್ಕಾರದ ಅಸ್ತಿತ್ವಕ್ಕೆ ಯಾವುದೇ ಧಕ್ಕೆ ಇಲ್ಲ. ರಾಜ್ಯದ ಜನರಿಗೆ ನೀಡಿದ ಭರವಸೆಯಂತೆ ಉತ್ತಮ ಆಡಳಿತ ನೀಡುತ್ತೇವೆ' ಎಂದು ಡಾ.ಜಿ.ಪರಮೇಶ್ವರ ಹೇಳಿದರು.
|
ಸಭೆ ಕುರಿತು ಟ್ವೀಟ್
ಸಚಿವ ಸಂಪುಟದ ಅನೌಪಚಾರಿಕ ಸಭೆಯಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ಚರ್ಚಿಸಲಾಯಿತು. ಸಂಪುಟದ ಎಲ್ಲ ಸಹೋದ್ಯೋಗಿಗಳು ನನ್ನ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
|
ಸರ್ಕಾರ ಐದು ವರ್ಷ ಸುಭದ್ರ
ಲೋಕಸಭಾ ಚುನಾವಣೆಯ ಫಲಿತಾಂಶ ಕರ್ನಾಟಕ ಸಮ್ಮಿಶ್ರ ಸರಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರಾಜ್ಯ ಸರಕಾರವು ಕುಮಾರಸ್ವಾಮಿ ಅವರ ನೇತೃತ್ವದಲ್ಲಿಯೇ ಐದು ವರ್ಷ ಸುಭದ್ರವಾಗಿವಾಗಿ ಮುಂದುವರೆಯಲಿದೆ ಎಂದು ಪರಮೇಶ್ವರ ಅವರು ಟ್ವೀಟ್ ಮಾಡಿದ್ದಾರೆ.












Click it and Unblock the Notifications