ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಸಿದ್ದರಾಮಯ್ಯ ಆಹ್ವಾನ
ಬೆಂಗಳೂರು, ನವೆಂಬರ್ 06: ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲ ಜಂಟಿ ಅಧಿವೇಶನ ಮತ್ತು ಮಹಾತ್ಮ ಗಾಂಧಿಯವರ ಬೆಳಗಾವಿ ಭೇಟಿಯ ಶತಮಾನೋತ್ಸವ ಆಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಆಹ್ವಾನಿಸಿದ್ದಾರೆ.
ಮಹಾತ್ಮಾ ಗಾಂಧಿಯವರು 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 39 ನೇ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ಅವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ ಇದಾಗಿತ್ತು. 1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ. ಈ ಹಿನ್ನೆಲೆ ಬೆಳಗಾವಿಯಲ್ಲಿ ನಡೆಯಲಿರುವ ಜಂಟಿ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಒಬಾಮ ಅವರಿಗೆ ಪತ್ರ ಬರೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಒಬಾಮಾ ಅವರು ನೀಡುವ ದಿನಾಂಕಗಳ ಆಧಾರದ ಮೇಲೆ ಜಂಟಿ ಅಧಿವೇಶನ ವೇಳಾಪಟ್ಟಿಯನ್ನು ನಿರ್ಧರಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದರು. ಅಕ್ಟೋಬರ್ 2 ರಂದು, ಗಾಂಧಿ ಜಯಂತಿ ಕಾರ್ಯಕ್ರಮವೊಂದರಲ್ಲಿ, ಶತಮಾನೋತ್ಸವ ಆಚರಣೆಗಾಗಿ ರಚಿಸಲಾದ ಸಮಿತಿಯ ಮುಖ್ಯಸ್ಥರೂ ಆಗಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್, ಡಿಸೆಂಬರ್‌ನಲ್ಲಿ ಯೋಜಿಸಿರುವ ಕಾರ್ಯಕ್ರಮಕ್ಕೆ ಒಬಾಮಾ ಅವರನ್ನು ಆಹ್ವಾನಿಸಲು ಕಾಂಗ್ರೆಸ್ ಸರ್ಕಾರ ಯೋಜಿಸುತ್ತಿದೆ ಎಂದು ಹೇಳಿದ್ದರು.
ಈ ವರ್ಷ ಐಎನ್‌ಸಿಯ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಸ್ಮರಣೀಯವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯ ಸರ್ಕಾರವು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಸಿದ್ದರಾಮಯ್ಯ ಅವರು ಆಗಸ್ಟ್ 15 ರಂದು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹೇಳಿದ್ದರು.
ಈ ಕುರಿತು ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಬರಾಕ್ ಒಬಾಮಾ ಅವರನ್ನು ಆಹ್ವಾನಿಸಿ ಪತ್ರವನ್ನು ಬರೆದಿರುತ್ತಾರೆ. ಡಿಸೆಂಬರ್ 26-27 ಅಥವಾ ಜನವರಿ 2025 ರಿಂದ ಅಕ್ಟೋಬರ್-2025ರೊಳಗಾಗಿ ದಿನಾಂಕ ನೀಡಲು ಕೋರಲಾಗಿದೆ. ಜಂಟಿ ಅಧಿವೇಶನವನ್ನು ಬೆಳಗಾವಿಯಲ್ಲಿಯೇ ನಡೆಸಲಾಗುವುದು ಎಂದು ತಿಳಿಸಿದರು.
ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನ ಆಚರಣೆ ಮೂಲಕ ಗಾಂಧೀಜಿಯವರ ತತ್ವ ಸಿದ್ಧಾಂತಗಳನ್ನು ಇನ್ನಷ್ಟು ಪ್ರಚುಪಡಿಸಲು ಹಾಗೂ ಮನೆ ಮನೆಗೆ ಗಾಂಧೀಜಿ ಸಿದ್ಧಾಂತಗಳನ್ನು ತಲುಪಿಸುವ ಉದ್ದೇಶ ಹೊಂದಲಾಗಿದೆ. ಹಿರಿಯರ ಜತೆ ಚರ್ಚಿಸಿ ಅಧಿವೇಶನದ ಇತಿಹಾಸ ಮರುಸೃಷ್ಟಿ ಮತ್ತು ಮೆಲುಕು ಹಾಕಲು ಶತಮಾನೋತ್ಸವ ಆಚರಣೆ ಮಾಡಲಾಗುವುದು. ಅಧಿವೇಶನ ಶತಮಾನೋತ್ಸವ ಆಚರಣೆಗೆ ಸರ್ಕಾರ 25 ಕೋಟಿ ರೂ. ನೀಡಲಿದ್ದು, ಅಗತ್ಯಬಿದ್ದರೆ ಹೆಚ್ಚುವರಿ ಅನುದಾನ ಕೂಡ ನೀಡಲಿದೆ ಎಂದು ಎಚ್.ಕೆ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications