Get Updates
Get notified of breaking news, exclusive insights, and must-see stories!

Karnataka CM Oath Ceremony LIVE: ಸಿದ್ದರಾಮಯ್ಯ ಎಂಬ ಹೆಸರಿನವನಾದ ನಾನು..: ಸಿದ್ದರಾಮಯ್ಯ, ಡಿಕೆಶಿ ಪ್ರಮಾಣ ವಚನ ಸ್ವೀಕಾರ

Siddaramaiah Oath Ceremony LIVE News Updates: ಕರ್ನಾಟಕದ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ರಾಜ್ಯದ ನೂತನ ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದ್ದಾರೆ.

Karnataka CM Oath Ceremony

May 20, 2023, 3:12 pm IST

ನೂತನ ಕಾಂಗ್ರೆಸ್‌ ಸರ್ಕಾರಕ್ಕೆ ಕುಮಾರಸ್ವಾಮಿ ಶುಭಾಶಯ

ನೂತನ ಕಾಂಗ್ರೆಸ್‌ ಸರ್ಕಾರಕ್ಕೆ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ. ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಅವರುಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು ಎಂದು ಟ್ವೀಟ್‌ ಮೂಲಕ ಶುಭಕೋರಿದ್ದಾರೆ.
href="https://twitter.com/siddaramaiah?ref_src=twsrc%5Etfw">@siddaramaiah ಅವರು, ಉಪ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು. 1/2

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 20, 2023
May 20, 2023, 2:40 pm IST

ಡಿಕೆ ಶಿವಕುಮಾರ್ ಪತ್ನಿ ಉಷಾ ಪ್ರತಿಕ್ರಿಯೆ

'ನನಗೆ ತುಂಬಾ ಖುಷಿ ಆಗ್ತಾಯಿದೆ. ಅವರು ಮುಖ್ಯಮಂತ್ರಿ ಆಗ್ಬೇಕು ಅನ್ಸುತ್ತೆ. ಆದರೆ ದೇವರು ಇನ್ನೂ ಸಮಯ ಕೂಡಿ ಕೊಟ್ಟಿಲ್ಲ' ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪತ್ನಿ ಉಷಾ ಪ್ರತಿಕ್ರಿಯೆ ನೀಡಿದರು. ಇದೇ ವೇಳೆ ಮಾತನಾಡಿದ ಮಗಳು ಐಶ್ವರ್ಯ ಅವರು, ' ಮುಂದೆ ಒಂದು ದಿನ ಅವರು ಸಿಎಂ ಆಗೇ ಆಗ್ತಾರೆ. ಅದನ್ನು ನೀವು ನೋಡ್ತೀರಾ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
May 20, 2023, 2:29 pm IST

'ನನಗೆ ಯಾವ ಖಾತೆ ಕೊಟ್ಟರೂ ಓಕೆ' ಜಮೀರ್ ಅಹ್ಮದ್ ಖಾನ್

'ನನಗೆ ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ' ಎಂದು ನೂತನ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, 'ಜನ ಹಾಗೂ ದೇವರ ಆಶೀರ್ವಾದದಿಂದ ನನಗೆ ಈ ಸ್ಥಾನ ಸಿಕ್ಕಿದೆ. ಹೀಗಾಗಿ ನಾನು ಯಾವುದೇ ಖಾತೆಗಾಗಿ ಡಿಮ್ಯಾಂಡ್ ಮಾಡುವುದಿಲ್ಲ. ನನಗೆ ಯಾವ ಖಾತೆ ಕೊಟ್ಟರೂ ನಿಭಾಯಿಸಲು ನಾನು ಸಿದ್ಧ' ಎಂದು ಅವರು ಹೇಳಿದರು.
May 20, 2023, 2:25 pm IST

ಮೊದಲ ಸಚಿವ ಸಂಪುಟ ಸಭೆ ಆರಂಭ

ವಿಧಾನಸೌಧದಲ್ಲಿ ಮೊದಲ ಸಚಿವ ಸಂಪುಟ ಸಭೆ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಎಂಟು ಜನ ನೂತನ ಸಚಿವರೊಂದಿಗೆ ಸಭೆ ಆರಂಭವಾಗಿದೆ. ಈ ಸಭೆಯಲ್ಲಿ ಚುನಾವಣಾ ಪೂರ್ವ ಜನರಿಗೆ ನೀಡಿದ ಭರವಸೆಗಳನ್ನು ಜಾರಿಗೆ ತರುವ ನಿರ್ಧಾರ ಮಾಡಲಾಗುತ್ತದೆ. ಆ ಭರವಸೆಗಳಲ್ಲಿ ಕೆಲವು ಇಂತಿವೆ. ಗೃಹಲಕ್ಷ್ಮಿ ಯೋಜನೆ ಅಡಿ ಮನೆಯೊಡತಿಗೆ ತಿಂಗಳಿಗೆ 2000 ರೂ, ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೆ 10 ಕೆ.ಜಿ ಅಕ್ಕಿ, ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್ ವರೆಗೆ ವಿದ್ಯುತ್ ಉಚಿತ, ಯುನಿಧಿ ಅಡಿ ಡಿಪ್ಲೊಮಾ ಪದವಿಧರರಿಗೆ ತಿಂಗಳಿಗೆ 3000, ಮಹಿಳೆಯರಿಗೆ ಉಚಿತ ಬಸ್‌ ಪಾಸ್ ಭರವಸೆಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿತ್ತು.
May 20, 2023, 2:20 pm IST

ರಾಜ್ಯದ ನೂತನ ಸಿಎಂಗೆ ಅಭಿನಂದಿಸಿದ ಮಾಜಿ ಸಿಎಂ ಬೊಮ್ಮಾಯಿ

'ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಅವರು ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು' ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಎಂಟು ಜನ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದರು.
May 20, 2023, 2:09 pm IST

ವಿಧಾನಸೌಧದ ಮೆಟ್ಟಿಲಿಗೆ ನಮಸ್ಕರಿಸಿ ಡಿಕೆಶಿ ಪ್ರವೇಶ

ಪ್ರಮಾಣವಚನ ಸ್ವೀಕಾರದ ಬಳಿಕ ವಿಧಾನಸೌಧಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಆಗಮಿಸಿದರು. ಈ ವೇಳೆ ವಿಧಾನಸೌಧದ ಮೆಟ್ಟಿಲಿಗೆ ತಲೆ ಬಾಗಿ ನಮಸ್ಕರಿಸಿ ಡಿಕೆ ಶಿವಕುಮಾರ್ ಪ್ರವೇಶಿಸಿದ್ದು ಕಂಡು ಬಂದಿದೆ. ಕೆಲವೇ ಕ್ಷಣದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.
May 20, 2023, 2:08 pm IST

ವಿಧಾನಸೌಧದ ಸಿಎಂ ಕಚೇರಿಗೆ ಸಿದ್ದರಾಮಯ್ಯ ಹೆಸರಿನ ನಾಮಫಲಕ

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕರ್ನಾಟಕದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವಿಧಾನಸೌಧದ ಸಿಎಂ ಕಚೇರಿಯ ಹೊರಗೆ ಸಿದ್ದರಾಮಯ್ಯ ಅವರ ಹೆಸರಿನ ನಾಮಫಲಕ ಹಾಕಲಾಗಿದೆ. ಸಿದ್ದರಾಮನಹುಂಡಿಯ ಬಡ ರೈತ ಕುಟುಂಬದಿಂದ ಬಂದು ರಾಜ್ಯ ರಾಜಕಾರಣದಲ್ಲಿ ತನ್ನದೇ ಛಾಪು ಮೂಡಿಸಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
May 20, 2023, 1:42 pm IST

ಕೊಟ್ಟ ಐದು ಗ್ಯಾರಂಟಿಯನ್ನು ಇಂದೇ ಜಾರಿಗೆ ತರುತ್ತೇವೆ- ಸಿದ್ದರಾಮಯ್ಯ

Karnataka CM Oath Ceremony
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್‌ಗೆ ಸಿಕ್ಕಿರುವ ಜಯ ನಾಡಿನ ಜನತೆಗೆ ಸಿಕ್ಕ ಜಯ. ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ತರಲು ಚುನಾವಣಾ ಪ್ರಚಾರ ನಡೆಸಿದ ಸರ್ವರಿಗೂ ಧನ್ಯವಾದ. ರಾಜ್ಯದ ಮಹಿಳೆಯರಿಗೆ, ಯುವಕರಿಗೆ ರೈತರಿಗೆ ಧನ್ಯವಾದ, ನಿಮ್ಮ ನಿರೀಕ್ಷೆಗೆ ತಕ್ಕಂತೆ ಆಡಳಿತ ಕೊಡುತ್ತೇವೆ. ಕೊಟ್ಟ ಐದು ಗ್ಯಾರಂಟಿಯನ್ನು ಇವತ್ತೇ ಸಚಿವ ಸಂಪುಟದಲ್ಲಿ ಆದೇಶ ಹೊರಡಿಸುತ್ತೇವೆ. ಕೊಟ್ಟ ಭರವಸೆಯನ್ನು ಇಡೇರಿಸಿಯೇ ತೀರುತ್ತೇವೆ ಎಂದಿದ್ದಾರೆ.
May 20, 2023, 1:34 pm IST

ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ- ರಾಹುಲ್‌ ಗಾಂಧಿ

Karnataka CM Oath Ceremony
ನೂತನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಪ್ರಮಾಣ ವಚನ ಸ್ವೀಕಾರ ಬಳಿಕ ಬಳಿಕ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಮಾತನಾಡಿದ್ದು, ಇನ್ನೇನು ಕೆಲವೇ ಸಮಯದಲ್ಲಿ ಮೊದಲ ಸಚಿವ ಸಂಪುಟ ಸಭೆ ನಡೆಯುತ್ತದೆ. ಸಭೆಯಲ್ಲಿ ನಾವು ಕೊಟ್ಟ ಆಶ್ವಾಸನೆಗಳು ಕಾನೂನಾಗಿ ಜಾರಿಗೆ ಬರುತ್ತದೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ. ಕಾಂಗ್ರೆಸ್‌ ಕರ್ನಾಟಕ ಜನತೆಯ ಸರ್ಕಾರ. ನಾವು ಭ್ರಷ್ಟಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದು ಹೇಳಿದ್ದಾರೆ.
May 20, 2023, 1:14 pm IST

ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರು

ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರು
ಕರ್ನಾಟಕದ ರಾಜ್ಯದ ನೂತನ ಸಚಿವರುಗಳಾಗಿ ಡಾ. ಜಿ ಪರಮೇಶ್ವರ್‌, ಎಂ.ಬಿ ಪಾಟೀಲ್‌, ಕೆ.ಎಚ್‌ ಮುನಿಯಪ್ಪ, ಕೆ.ಜೆ ಜಾರ್ಜ್‌, ಸತೀಶ್‌ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ರಾಮಲಿಂಗ ರೆಡ್ಡಿ ಹಾಗೂ ಜಮೀರ್‌ ಅಹ್ಮದ್‌ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದ್ದಾರೆ.
May 20, 2023, 1:01 pm IST

ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್‌

Karnataka CM Oath Ceremony
ಕರ್ನಾಟಕದ ರಾಜ್ಯದ ನೂತನ ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದ್ದಾರೆ. ಗಂಗಾಧರ ಅಜ್ಜ ಹೆಸರಿನಲ್ಲಿ ಡಿ.ಕೆ ಶಿವಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
May 20, 2023, 12:47 pm IST

ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ

ಕರ್ನಾಟಕದ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದ್ದಾರೆ. ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
May 20, 2023, 12:47 pm IST

ರಾಷ್ಟ್ರ ಗೀತೆ ಮೂಲಕ ಕಾರ್ಯಕ್ರಮ ಆರಂಭ

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್‌ ಹಾಗೂ ನೂತನ ಎಂಟು ಸಚಿವರ ಪ್ರಮಾಣವಚನದ ವೇದಿಕೆ ಕಾರ್ಯಕ್ರಮ ಆರಂಭ ಆರಂಭಗೊಂಡಿದೆ. ರಾಷ್ಟ್ರ ಗೀತೆ ಮೂಲಕ ಕಾರ್ಯಕ್ರಮ ಆರಂಭವಾಗಿದ್ದು, ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಗಣ್ಯರ ದಂಡೇ ವೇದಿಕೆ ಹಂಚಿಕೊಂಡಿದ್ದಾರೆ.
May 20, 2023, 12:45 pm IST

ವೇದಿಕೆಗೆ ರಾಜ್ಯಪಾಲರ ಆಗಮನ

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್‌ ಹಾಗೂ ನೂತನ ಎಂಟು ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಆಗಮಿಸಿದ್ದು, ಈಗಾಗಲೇ ಗಣ್ಯರ ಜೊತೆ ವೇದಿಕೆ ಅಲಂಕರಿಸಿದ್ದಾರೆ.
May 20, 2023, 12:39 pm IST

ವೇದಿಕೆಗೆ ರಾಜ್ಯಪಾಲರ ಆಗಮನ

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್‌ ಹಾಗೂ ನೂತನ ಎಂಟು ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಆಗಮಿಸಿದ್ದು, ಈಗಾಗಲೇ ಗಣ್ಯರ ಜೊತೆ ವೇದಿಕೆ ಅಲಂಕರಿಸಿದ್ದಾರೆ.
May 20, 2023, 12:30 pm IST

ವೇದಿಕೆಗೆ ಸಿದ್ದರಾಮಯ್ಯ, ರಾಹುಲ್‌, ಪ್ರಿಯಾಂಕ ಗಾಂಧಿ ಆಗಮನ

Karnataka CM Oath Ceremony
ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಲ್ಲಿಕಾರ್ಜುನ್‌ ಖರ್ಗೆ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಠೀರವ ಕ್ರೀಡಾಂಗಣದ ವೇದಿಕೆಗೆ ಆಗಮಿಸಿದ್ದಾರೆ.
May 20, 2023, 12:27 pm IST

ಪ್ರಮಾಣವಚನಕ್ಕೆ ಗಣ್ಯರ ದಂಡು

ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ ಹಾಗೂ ನೂತನ ಎಂಟು ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಗಣ್ಯರ ದಂಡೇ ಆಗಮಿಸಿದ್ದು, ಎಂಕೆ ಸ್ಟಾಲಿನ್ ( ತಮಿಳುನಾಡು‌ ಸಿಎಂ) ನಿತೀಶ್ ಕುಮಾರ್ ( ಬಿಹಾರ ಸಿಎಂ) ಫಾಕೂರ್ ಅಬ್ದುಲ್ಲಾ ( ಮಾಜಿ ಸಿಎಂ ಜಮ್ಮು ಕಾಶ್ಮೀರ) ಮೆಹಬೂಬಾ ಮುಫ್ತಿ ( ಮಾಜಿ ಸಿಎಂ ಜಮ್ಮು ಕಾಶ್ಮೀರ) ಕಂಠೀರವ ಕ್ರೀಡಾಂಗಣದ ವೇದಿಕೆಗೆ ಆಗಮಿಸಿದ್ದಾರೆ.
May 20, 2023, 12:27 pm IST

ಡಿಕೆ ಶಿವಕುಮಾರ್ ಚಿತ್ರವನ್ನೇ ಎದೆ ಮೇಲೆ ಅಚ್ಚೆ ಹಾಕಿಸಿಕೊಂಡ ಅಭಿಮಾನಿ

ಕೆಲವೇ ಕ್ಷಣಗಳಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಆಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ನಡುವೆ ಬೆಂಬಲಿಗರೊಬ್ಬರು ತಮ್ಮ ಎದೆಯ ಮೇಲೆ ಡಿಕೆ ಶಿವಕುಮಾರ್ ಮುಖ ಮತ್ತು ಹೆಸರಿನೊಂದಿಗೆ ಹಚ್ಚೆ ಹಾಕಿಸಿಕೊಂಡಿರುವುದು ಕಂಡುಬಂದಿದೆ. ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ಇತರ ನಾಯಕರ ಚಿತ್ರಿವನ್ನೂ ಅಭಿಮಾನಿ ತನ್ನ ದೇಹದ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದಾನೆ. ಬೆಂಗಳೂರಿನಲ್ಲಿರುವ ಡಿಕೆ ಶಿವಕುಮಾರ್ ನಿವಾಸದ ಹೊರಗಿನ ಈ ಅಭಿಮಾನಿ ಎದೆಗೆ ಅಚ್ಚೆ ಹಾಕಿಸಿಕೊಂಡದ್ದನ್ನು ತೋರಿಸಿಕೊಂಡು ಓಡಾಡಿರುವುದು ಕಂಡು ಬಂದಿದೆ.
May 20, 2023, 12:13 pm IST

ಕಂಠೀರವ ಕ್ರೀಡಾಂಗಣದಲ್ಲಿ ಸಿನಿಮಾ ತಾರೆಯರು

ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ ಹಾಗೂ ನೂತನ ಎಂಟು ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಬಹುಭಾಷಾ ನಟ ಕಮಲ್‌ ಹಾಸನ್‌, ನಟ ಶಿವರಾಜ್‌ ಕುಮಾರ್‌, ದುನಿಯಾ ವಿಜಯ್‌, ನಟಿ ರಮ್ಯಾ, ನಿಶ್ವಿಕಾ ನಾಯ್ಡು ಹಾಗೂ ನಟಿ ಹಾಗೂ ಕಾಂಗ್ರೆಸ್‌ ನಾಯಕಿ ಉಮಾಶ್ರೀ ಸೇರಿದಂತೆ ಅನೇಕರು ಆಗಮಿಸಿದ್ದಾರೆ.
May 20, 2023, 11:57 am IST

ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿದ ಡಿ.ಕೆ ಶಿವಕುಮಾರ್‌

ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ ಹಾಗೂ ನೂತನ ಎಂಟು ಸಚಿವರ ಪ್ರಮಾಣವಚನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್‌ ನಾಯಕರು ಕಂಠೀರವ ಕ್ರೀಡಾಂಗಣದತ್ತ ಆಗಮಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಈಗಾಗಲೇ ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿದ್ದು, ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರ ಜೊತೆ ಮಾತುಕತೆ ನಡೆಸಿದ್ದಾರೆ.
May 20, 2023, 11:46 am IST

ಒಂದೇ ಬಸ್‌ನಲ್ಲಿ ತೆರಳಲಿರುವ ಕಾಂಗ್ರೆಸ್‌ ನಾಯಕರು

Karnataka CM Oath Ceremony
ಈಗಾಗಲೇ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿದ್ದು, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲಾ ನಾಯಕರು ಒಂದೇ ಬಸ್‌ನಲ್ಲಿ ಕಂಠೀರವ ಕ್ರೀಡಾಂಗಣಕ್ಕೆ ತೆರಳಲಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ಜನಸಾಗರವೇ ನೆರೆದಿದ್ದು, ಇನ್ನೇನು ಕೆಲವೇ ಕ್ಷಣದಲ್ಲಿ ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸಚಿವರ ಪ್ರಮಾಣವಚನ ಕಾರ್ಯಕ್ರಮ ಆರಂಭವಾಗಲಿದೆ.
May 20, 2023, 11:30 am IST

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಆಗಮನ

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ ಎಂಟು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಲ್ಲಿಕಾರ್ಜುನ್‌ ಖರ್ಗೆ, ನೇರವಾಗಿ ಶಾಂಗ್ರೀಲ ಹೋಟೆಲ್‌ಗೆ ಆಗಮಿಸಿದ್ದಾರೆ.
May 20, 2023, 11:17 am IST

ಸಿದ್ದರಾಮಯ್ಯ-ಡಿಕೆಶಿಗೆ ದರ್ಶನ್‌ ಧ್ರುವನಾರಾಯಣ್‌ ವಿಶ್‌

ಸಾಮಾಜಿಕ ನ್ಯಾಯದ ಹರಿಕಾರರಾದ ಸಿದ್ದರಾಮಯ್ಯ ಸಾಹೇಬ್ರು 2ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದು ಅವರಿಗೆ ಹೃದಯ ಪೂರ್ವಕ ಅಭಿನಂದನೆಗಳು, ಇದೆ ವೇಳೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಡಿ.ಕೆ ಶಿವಕುಮಾರ್‌ ಸಾಹೇಬರಿಗೆ ಹಾಗೂ ಎಲ್ಲಾ ನೂತನ ಸಚಿವರಿಗೆ ಹೃದಯ ಪೂರ್ವಕ ಅಭಿನಂದನೆಗಳು ಎಂದು ನಂಜನಗೂಡಿನ ನೂತನ ಶಾಸಕ ದರ್ಶನ್‌ ಧ್ರುವನಾರಾಯಣ್‌ ಶುಭಾಶಯ ತಿಳಿಸಿದ್ದಾರೆ.
May 20, 2023, 10:55 am IST

ಬೆಂಗಳೂರಿಗೆ ಆಗಮಿಸಿದ ರಾಹುಲ್‌, ಪ್ರಿಯಾಂಕಾ ಗಾಂಧಿ

ಬೆಂಗಳೂರಿಗೆ ಆಗಮಿಸಿದ ರಾಹುಲ್‌, ಪ್ರಿಯಾಂಕಾ ಗಾಂಧಿ
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ ಎಂಟು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಹೈಕಮಾಂಡ್‌ ನಾಯಕರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಸ್ವಾಗತಿಸಿಕೊಂಡಿದ್ದಾರೆ.
May 20, 2023, 10:36 am IST

ನೂತನ ಸಚಿವರ ಪಟ್ಟಿ ರಾಜಭವನಕ್ಕೆ ರವಾನೆ

Karnataka CM Oath Ceremony
ನೂತನ ಸಚಿವರ ಪಟ್ಟಿಯನ್ನು ರಾಜಭವನಕ್ಕೆ ರವಾನಿಸಲಾಗಿದೆ. ಎಂಟು ನೂತನ ಸಚಿವರಿಗೆ ಪ್ರಮಾಣ ವಚನ ಭೋದಿಸುವಂತೆ ರಾಜ್ಯಪಾಲರಲ್ಲಿ ಮನವಿ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಜೊತೆಗೆ ಡಾ. ಜಿ ಪರಮೇಶ್ವರ್‌, ಎಂ.ಬಿ ಪಾಟೀಲ್‌, ಕೆ.ಎಚ್‌ ಮುನಿಯಪ್ಪ, ಕೆ.ಜೆ ಜಾರ್ಜ್‌, ಸತೀಶ್‌ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ರಾಮಲಿಂಗ ರೆಡ್ಡಿ ಹಾಗೂ ಜಮೀರ್‌ ಅಹ್ಮದ್‌ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
May 20, 2023, 10:28 am IST

ಸಿಇಟಿ ಪರೀಕ್ಷೆ ಬರೆಯುವವರಿಗೆ ಡಿಕೆ ಶಿವಕುಮಾರ್ ಮನವಿ

ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ‌ ಸಮಾರಂಭ ಇರುವ ಕಾರಣ ಸುತ್ತಮುತ್ತಲಿನ ಸಿಇಟಿ ಪರೀಕ್ಷಾ ಕೇಂದ್ರ ತಲುಪಬೇಕಿರುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ನಮ್ಮ ಮನವಿ ಏನೆಂದರೆ -ಬೆಳಗ್ಗೆ 9.30ರೊಳಗೆ ಪರೀಕ್ಷಾ ಕೇಂದ್ರ ತಲುಪಿ, ಆಯ್ದ ಕೇಂದ್ರಗಳಲ್ಲಿ ಮಧ್ಯಾಹ್ನ ಪರೀಕ್ಷೆ ಬರೆಯುವವರಿಗೆ ಊಟದ ವ್ಯವಸ್ಥೆ ಮಾಡುವಂತೆ ವ್ಯವಸ್ಥಾಪಕ ಮಂಡಳಿಗೆ ತಿಳಿಸಲಾಗಿದೆ. ಯಾವುದೇ ಸಹಾಯ ಬೇಕಿದ್ದರೂ ಪೊಲೀಸರನ್ನು ಸಂಪರ್ಕಿಸಿ ಎಂದು ಟ್ವೀಟ್ ಮಾಡಿದ್ದಾರೆ.
May 20, 2023, 10:23 am IST

ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಬಗ್ಗೆ ಸಿದ್ದರಾಮಯ್ಯ ಟ್ವೀಟ್

'ಬೆಂಗಳೂರಿನಲ್ಲಿ ಇಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸಂಚಾರಿ‌‌ ಪೊಲೀಸರು ಮತ್ತು ಕರ್ನಾಟಕ ಪರೀಕ್ಷಾ ಕೇಂದ್ರ ನೀಡಿರುವ ಸೂಚನೆಗಳನ್ನು ಪಾಲಿಸಿ ಸಹಕರಿಸಬೇಕೆಂದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ವಿನಮ್ರತೆಯಿಂದ ಮನವಿ ಮಾಡುತ್ತಿದ್ದೇನೆ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
May 20, 2023, 10:16 am IST

ಎಐಸಿಸಿ ನಾಯಕರಿಗೆ ಧನ್ಯವಾದ ತಿಳಿಸಿದ ಡಾ. ಜಿ ಪರಮೇಶ್ವರ್‌

ಎಐಸಿಸಿ ನಾಯಕರಿಗೆ ಧನ್ಯವಾದ ತಿಳಿಸಿದ ಡಾ. ಜಿ ಪರಮೇಶ್ವರ್‌
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಜೊತೆಗೆ ಡಾ. ಜಿ ಪರಮೇಶ್ವರ್‌ ಕೂಡ ಪ್ರಮಾಣವಚನ ಸ್ವೀಕರಿಸಲಿದ್ದು, ಸಚಿವ ಸಂಪುಟದಲ್ಲಿ ಅವಕಾಶ ಮಾಡಿಕೊಟ್ಟ ಎಐಸಿಸಿ ನಾಯಕರಿಗೆ ಡಾ. ಜಿ ಪರಮೇಶ್ವರ್‌ ಧನ್ಯವಾದಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಾ.ಜಿ ಪರಮೇಶ್ವರ್, 'ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ಗೆ ಅಭಿನಂದನೆ ಸಲ್ಲಿಸ್ತೇನೆ. ನಮ್ಮ ಸರ್ಕಾರದ ಮೇಲೆ ರಾಜ್ಯದ ಜನ ಬಹಳಷ್ಟು ನಿರೀಕ್ಷೆ ಮಾಡಿದ್ದಾರೆ. ಎಲ್ಲರಿಗೂ ಕೂಡ ಇದು ಅತಿ ದೊಡ್ಡ ಸವಾಲು' ಎಂದಿದ್ದಾರೆ.
May 20, 2023, 9:48 am IST

ಛಲ ಬಿಡದ ತ್ರಿವಿಕ್ರಮ ಸಿದ್ದರಾಮಯ್ಯ: ದುನಿಯಾ ವಿಜಯ್‌ ವಿಶ್‌

ಛಲ ಬಿಡದ ತ್ರಿವಿಕ್ರಮ ಸಿದ್ದರಾಮಯ್ಯ: ದುನಿಯಾ ವಿಜಯ್‌ ವಿಶ್‌
ರಾಜಕೀಯ ಜೀವನ ಆರಂಭಿಸಿದ ದಿನದಿಂದಲೂ ಛಲ ಬಿಡದ ತ್ರಿವಿಕ್ರಮನಂತೆ ಜನ ಸೇವೆ ಮಾಡುತ್ತಿರುವ ಸಾದ ಸೀದ ವ್ಯಕ್ತಿತ್ವದ ಸಿದ್ದರಾಮಯ್ಯ ಅವರಿಗೆ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವುದಕ್ಕೆ ಶುಭಾಶಯಗಳು ಎಂದು ನಟ ದುನಿಯಾ ವಿಜಯ್‌ ಶುಭಾಶಯ ತಿಳಿಸಿದ್ದಾರೆ. ಎಷ್ಟೇ ಕಷ್ಟ ಬಂದರೂ ಬಂಡೆಯಂತೆ ನಿಂತು ಹೋರಾಡುವ ಡಿ.ಕೆ ಶಿವಕುಮಾರ್ ಅವರಿಗೂ ಸಹ ಉಪಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುತ್ತಿರುವುದಕ್ಕೆ ಅಭಿನಂದನೆಗಳು. ಇಬ್ಬರೂ ರಾಜ್ಯವನ್ನು ಅಭಿವೃದ್ಧಿಯತ್ತ ಕರೆದುಕೊಂಡು ಹೋಗಿ ಬಡ ಬಗ್ಗರ, ದೀನ ದಲಿತರ ಉದ್ಧಾರಕ್ಕಾಗಿ ಶ್ರಮಿಸುತ್ತೀರ ಎಂಬ ನಂಬಿಕೆ ನನ್ನಂತಹ ಕೋಟ್ಯಾಂತರ ಮಂದಿಗಿದೆ. ಅದನ್ನೂ ಈಡೇರಿಸಿ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
May 20, 2023, 9:44 am IST

ಸಿದ್ದರಾಮಯ್ಯ ಅಭಿಮಾನಿಗಳ ಸಂಭ್ರಮ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ರಾಜ್ಯದ ಮೂಲೆ ಮೂಲೆಯಿಂದ ಅಭಿಮಾನಿಗಳು ಆಗಮಿಸಿದ್ದು, ಸಿದ್ದರಾಮಯ್ಯ ಹೆಸರಿನಲ್ಲಿ ಭಜನೆ ಮಾಡಿ ಸಂಭ್ರಮಿಸಿದ್ದಾರೆ. ಇನ್ನು ಸಿದ್ದರಾಮಯ್ಯ ಅವರನ್ನು ನೋಡಲು ಅಭಿಮಾನಿಗಳ ತಂಡೇ ಹರಿದು ಬರುತ್ತಿದ್ದು, ಸಿದ್ದರಾಮಯ್ಯ ನಿವಾಸದಲ್ಲಿ 5000 ಜನಕ್ಕೆ ತಿಂಡಿ ವ್ಯವಸ್ಥೆ ಮಾಡಲಾಗಿದೆ.
READ MORE

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+