Karnataka CM Oath: ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಜತೆಗೆ 8 ಸಚಿವರು ಪ್ರಮಾಣವಚನ ಸ್ವೀಕಾರ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಮಧ್ಯಾಹ್ನ 12.30 ಗಂಟೆಗೆ ಸಿದ್ದರಾಮಯ್ಯ ಸಿಎಂ ಆಗಿ, ಡಿಕೆ ಶೀವಕುಮಾರ್ ಡಿಸಿಎಂ ಆಗಿ ಮತ್ತು ಇತರರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವವರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇವರಲ್ಲಿ ಜಿ ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಕೆ.ಜಿ ಜಾರ್ಜ್, ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಖಾನ್ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

Karnataka CM Oath: CM Siddaramaiah, DCM DK Shivakumar along with 8 ministers taking oath

ಅಲ್ಲಿಗೆ ಸಿದ್ದರಾಮಯ್ಯ ಸಿಎಂ ಆಗಿ, ಡಿಕೆ ಶೀವಕುಮಾರ್ ಡಿಸಿಎಂ ಆಗಿ ಜೊತೆಗೆ ಎಂಟು ಜನ ಸಚಿವರು ಒಟ್ಟು ಹತ್ತು ಜನ ಇಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ವೇದಿಕೆ ಮೇಲೆ 30 ಗಣ್ಯರು

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ವೇದಿಕೆ ಮೇಲೆ 30 ಗಣ್ಯರಿಗೆ ಮಾತ್ರ ಆಸನದ ವ್ಯವಸ್ಥೆ ಮಾಡಲಾಗಿದೆ. ವೇದಿಕೆ ಮುಂಭಾಗದಲ್ಲಿ ಶಾಸಕರು, ಶಾಸಕರ ಕುಟುಂಬಸ್ಥರಿಗೆ, ವಿವಿಐಪಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಇನ್ನು ಕಂಠೀರವ ಕ್ರೀಡಾಂಗಣದ ಗ್ಯಾಲರಿಯಲ್ಲಿ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು, ಎರಡು ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ ಇದೆ.

ಕಂಠೀರವ ಕ್ರೀಡಾಂಗಣದಲ್ಲಿ ಲಾಠಿ ಚಾರ್ಜ್: ಇಬ್ಬರಿಗೆ ಗಾಯ

ಸಿದ್ದರಾಮಯ್ಯ ಪ್ರಮಾಣ ವಚನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ನೂಕು ನುಗ್ಗಲು ಏರ್ಪಟ್ಟಿದೆ. ಸಾರ್ವಜನಿಕರ ಪ್ರವೇಶ ದ್ವಾರದಲ್ಲಿ ಜನರು ಒಮ್ಮೆಲೆ ನುಗ್ಗಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+