Get Updates
Get notified of breaking news, exclusive insights, and must-see stories!

DKS Tattoo On Chest: ಡಿಕೆ ಶಿವಕುಮಾರ್ ಚಿತ್ರವನ್ನೇ ಎದೆ ಮೇಲೆ ಅಚ್ಚೆ ಹಾಕಿಸಿಕೊಂಡ ಅಭಿಮಾನಿ

DKS Tattoo On Chest: ಬೆಂಗಳೂರು ಮೇ 20: ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಕೆಪಿಸಿಸಿ ಅಧ್ಯಕ್ಷ, ಕನಕಪುರ ಕ್ಷೇತ್ರದ ಶಾಸಕ ಡಿಕೆ ಶಿವಕುಮಾರ್ ಅವರು ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ನಡುವೆ ಅಭಿಮಾನಿಯೊಬ್ಬರು ಡಿಕೆ ಶಿವಕುಮಾರ್ ಚಿತ್ರವನ್ನೇ ಎದೆ ಮೇಲೆ ಅಚ್ಚೆ ಹಾಕಿಸಿಕೊಂಡಿದ್ದು ಕಂಡು ಬಂದಿದೆ.

ಕರ್ನಾಟಕದಲ್ಲಿ ಸ್ಪಷ್ಟ ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಪಕ್ಷ ಇಂದು ಅಧಿಕಾರದ ಗದ್ದುಗೆಗೆ ಏರಿದೆ. ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಮುನ್ನಡೆಸಲು ಜನಸಾಮಾನ್ಯರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಲು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸಿದ್ದರಾಗಿದ್ದಾರೆ. ಹೈಕಮಾಂಡ್ ನೇತೃತ್ವದಲ್ಲಿ ಇಂದು ಇಬ್ಬರೂ ನಾಯಕರು ಪ್ರಮಾಣವಚನ ಸ್ವೀಕರಿಸಿದರು. ಇವರೊಂದಿಗೆ ಎಂಟು ಜನ ಸಚಿವರಾಗಿ ಪ್ರಮಾಣವಚನವನ್ನು ಸ್ವೀಕರಿಸಿದರು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರೊಂದಿಗೆ ಜಿ ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಕೆ.ಜಿ ಜಾರ್ಜ್, ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಖಾನ್ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದರು.

Deputy Chief Minister DK Shivakumar

ಡಿಕೆ ಶಿವಕುಮಾರ್ ಚಿತ್ರವನ್ನೇ ಎದೆ ಮೇಲೆ ಅಚ್ಚೆ ಹಾಕಿಸಿಕೊಂಡ ಅಭಿಮಾನಿ

ಕೆಲವೇ ಕ್ಷಣಗಳಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಆಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ನಡುವೆ ಬೆಂಬಲಿಗರೊಬ್ಬರು ತಮ್ಮ ಎದೆಯ ಮೇಲೆ ಡಿಕೆ ಶಿವಕುಮಾರ್ ಮುಖ ಮತ್ತು ಹೆಸರಿನೊಂದಿಗೆ ಹಚ್ಚೆ ಹಾಕಿಸಿಕೊಂಡಿರುವುದು ಕಂಡುಬಂದಿದೆ. ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ಇತರ ನಾಯಕರ ಚಿತ್ರಿವನ್ನೂ ಅಭಿಮಾನಿ ತನ್ನ ದೇಹದ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದಾನೆ. ಬೆಂಗಳೂರಿನಲ್ಲಿರುವ ಡಿಕೆ ಶಿವಕುಮಾರ್ ನಿವಾಸದ ಹೊರಗಿನ ಈ ಅಭಿಮಾನಿ ಎದೆಗೆ ಅಚ್ಚೆ ಹಾಕಿಸಿಕೊಂಡದ್ದನ್ನು ತೋರಿಸಿಕೊಂಡು ಓಡಾಡಿರುವುದು ಕಂಡು ಬಂದಿದೆ.

Deputy Chief Minister DK Shivakumar

ಮೊದಲು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. "ಸಿದ್ದರಾಮಯ್ಯ ಎಂಬ ಹೆಸರಿನ ನಾನು...... " ಸಿದ್ದರಾಮನಹುಂಡಿಯ ಬಡ ರೈತ ಕುಟುಂಬದಿಂದ ಬಂದು ರಾಜ್ಯ ರಾಜಕಾರಣದಲ್ಲಿ ತನ್ನದೇ ಛಾಪು ಮೂಡಿಸಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

Deputy Chief Minister DK Shivakumars fan tattooed on his chest

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸೇರಿದ್ದ ಸಾವಿರಾರು ಜನರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ನಿತೀಶ್ ಕುಮಾರ್ ಸೇರಿದಂತೆ ರಾಷ್ಟ್ರೀಯ ನಾಯಕರು ಈ ಸಮಾರಂಭಕ್ಕೆ ಸಾಕ್ಷಿಯಾದರು.

Deputy Chief Minister DK Shivakumar

ಮಾಜಿ ಉಪ ಮುಖ್ಯಮಂತ್ರಿ, ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ ಪರಮೇಶ್ವರ್ ಅವರು ಮೊದಲ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ, ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸುತ್ತಿರುವ, ದೇವನಹಳ್ಳಿ ಕ್ಷೇತ್ರದ ಶಾಸಕ ಕೆ.ಎಚ್ ಮುನಿಯಪ್ಪ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಹಿರಿಯ ರಾಜಕಾರಣಿ ಸರ್ವಜ್ಞ ನಗರ ಕ್ಷೇತ್ರದ ಶಾಸಕ ಕೆ.ಜೆ ಜಾರ್ಜ್ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ನ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಬಬಲೇಶ್ವರ ಕ್ಷೇತ್ರದ ಶಾಸಕ, ಎಂ.ಬಿ ಪಾಟೀಲ್ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿ ಅವರು ಬುದ್ಧ, ಬಸವ, ಅಂಬೇಡ್ಕರ್ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+